ವಾಯವ್ಯ ಟರ್ಕಿಯಲ್ಲಿರುವ ‘ಗ್ರ್ಯಾಂಡ್ ಕಾರ್ತಾಲ್’ ಹೋಟೆಲ್‌ನಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಈವರೆಗೆ 76 ಮಂದಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾದಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಗೆ ಪ್ರಮುಖ ಕಾರಣವೇನು ಇನ್ನೂ ತಿಳಿದುಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಹೋಟೆಲ್‌ನಲ್ಲಿ ಸುಮಾರು 234 ಮಂದಿ ಇದ್ದರು. ಅವರಲ್ಲಿ, ಈವರೆಗೆ 76 ಮಂದಿ ಸಾವನ್ನಪ್ಪಿದ್ದಾರೆ. 51ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಅವಗಢದಿಂದಾಗಿ ಕಟ್ಟಡವು ಶಿಥಿಲಗೊಂಡಿದ್ದು, ಕುಸಿದು ಬೀಳುವ ಸಾಧ್ಯತೆಯೂ ಇದೆ ಎಂದ ಅಧಿಕಾರಿಗಳು ಹೇಳಿದ್ದಾರೆ. ಹೋಟೆಲ್‌ನಲ್ಲಿದ್ದ ಎಲ್ಲರನ್ನೂ ಸ್ಥಳಾಂತರಿಸುತ್ತಿದ್ದಾರೆ.
ದುರಂತದ ಕುರಿತು ತನಿಖೆಗಾಗಿ 6 ಪ್ರಾಸಿಕ್ಯೂಟರ್‌ಗಳ ತಂಡವನ್ನು ಟರ್ಕಿ ಸರ್ಕಾರ ನೇಮಿಸಿದೆ.