ಬ್ರೆಜಿಲ್ | ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯಲ್ಲಿ ಭಾರಿ ಅಗ್ನಿ ಅವಘಡ

Date:

ಬ್ರೆಜಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಶೃಂಗಸಭೆಯ (UN COP30) ಮುಖ್ಯ ವೇದಿಕೆ ಸಮೀಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 21 ಮಂದಿ ಗಾಯಗೊಂಡಿದ್ದಾರೆ. ‘ನೀಲಿ ವಲಯ’ದಲ್ಲಿ ಈ ಘಟನೆ ಸಂಭವಿಸಿದ್ದು, ಅಲ್ಲೇ ಎಲ್ಲಾ ಸಭೆಗಳು, ಮಾತುಕತೆಗಳು, ಮಾಧ್ಯಮ ಕೇಂದ್ರ ಮತ್ತು ಮುಖ್ಯ ಸಮಗ್ರ ಸಭಾಂಗಣ ಸೇರಿದಂತೆ ಎಲ್ಲಾ ಉನ್ನತ ಗಣ್ಯರ ಕಚೇರಿಗಳಿವೆ ಎಂದು ವರದಿಯಾಗಿದೆ.

- Advertisement -

ಬೆಂಕಿ ದುರಂತದ ಸುದ್ದಿ ಹರಡಿದ ತಕ್ಷಣ, ಜನರು ಸುರಕ್ಷತೆಗಾಗಿ ಎಲ್ಲಾ ನಿರ್ಗಮನ ದ್ವಾರಗಳಿಂದ ಹೊರಗೆ ಓಡಿ ಹೋಗಿದ್ದು, ಅಧಿಕಾರಿಗಳು ಸಂಪೂರ್ಣ ಸುರಕ್ಷತಾ ಪರಿಶೀಲನೆಗಾಗಿ ಸ್ಥಳವನ್ನು ಮುಚ್ಚಿದರು. ರಾತ್ರಿ 8:40ರಿಂದ ಆರು ಗಂಟೆಗಳಿಗೂ ಅಧಿಕ ಕಾಲ ಶೃಂಗಸಭೆ ಪ್ರವೇಶಕ್ಕೆ ಅವಕಾಶವೇ ಇರಲಿಲ್ಲ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ರಾಯಚೂರು | ಯೂನಿಯನ್ ಬ್ಯಾಂಕ್ ನಲ್ಲಿ ಅಗ್ನಿ ಅವಘಡ

“ಅಗ್ನಿ ಅವಘಡದಿಂದಾಗಿ 21 ಮಂದಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಬ್ರೆಜಿಲ್ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇನ್ನು 19 ಮಂದಿ ಹೊಗೆ ಉಸಿರಾಡಿ ಅಸ್ವಸ್ಥರಾಗಿದ್ದು, ಇನ್ನಿಬ್ಬರು ಬೆಂಕಿ ಅವಘಡದ ಸುದ್ದಿ ತಿಳಿದು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

“ಅಗ್ನಿ ಅವಘಡದ ಪರಿಣಾಮಕ್ಕೆ ಒಳಗಾದವರಿಗೆ ತಕ್ಷಣ ಸಹಾಯ ನೀಡಲಾಗಿದ್ದು, 12 ಮಂದಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ತೆರಳಿದ್ದಾರೆ. ಉಳಿದವರು ಬೆಲೆಮ್‌ನ ಆರೋಗ್ಯ ಸೌಲಭ್ಯಗಳಲ್ಲಿ ಮತ್ತು ಇತರೆಡೆ ಸೂಕ್ತ ಆರೈಕೆಯನ್ನು ಪಡೆಯುತ್ತಿದ್ದಾರೆ” ಎಂದು ಹೇಳಿಕೆ ತಿಳಿಸಿದೆ.

ಇನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ಥಳದಲ್ಲಿದ್ದರು. ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ಇಲಾಖೆ (UNDSS) ಕೂಡಲೇ ಅವರನ್ನು ಸ್ಥಳಾಂತರಿಸಿದೆ ಎಂದು ತಿಳಿದುಬಂದಿದೆ. ಹಾಗೆಯೇ ಬೆಂಕಿ ಅವಘಡ ಸಂಭವಿಸಿದಾಗ ಭಾರತದ ಪರಿಸರ ಸಚಿವ ಭೂಪೇಂದರ್ ಯಾದವ್ ಕೂಡ ಭಾರತೀಯ ನಿಯೋಗದೊಂದಿಗೆ ನೀಲಿ ವಲಯದೊಳಗೆ ಇದ್ದರು. ಆದರೆ ಅವರನ್ನು ಮತ್ತ ಇತರೆ ಭಾರತೀಯ ಅಧಿಕಾರಿಗಳು ಸ್ಥಳದಿಂದ ಸುರಕ್ಷಿತವಾಗಿ ಹೊರಬಂದಿದ್ದಾರೆ ಎಂದು ಸಚಿವಾಲಯದ ವಕ್ತಾರರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...