ಭಾರತ–ಪಾಕ್ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿದ್ದೇನೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ

Date:

ನನ್ನ ಮಧ್ಯಸ್ಥಿಕೆಯಿಂದ ಭಾರತ – ಪಾಕ್‌ ಪರಮಾಣು ಯುದ್ಧ ಮಾತ್ರವಲ್ಲ, ಹಲವು ದೇಶಗಳ ಯುದ್ಧ ನಿಲ್ಲಿಸಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ.

- Advertisement -

ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ನಡೆದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ನಾವು ಭಾರತ ಮತ್ತು ಪಾಕಿಸ್ತಾನ, ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ನಡುವಿನ ಯುದ್ಧಗಳನ್ನು ನಿಲ್ಲಿಸಿದ್ದೇವೆ. ಭಾರತ ಪಾಕ್‌ ಸಂಘರ್ಷದಲ್ಲಿ ಐದು ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಡೊನಾಲ್ಡ್ ಟ್ರಂಪ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅವರು ಐದು ಜೆಟ್‌ ವಿಮಾನಗಳನ್ನು ಹೊಡೆದುರುಳಿಸಿದರು. ಯುದ್ಧವು ಮತ್ತಷ್ಟು ಗಂಭೀರತೆ ಪಡೆದುಕೊಳ್ಳುತ್ತಿತ್ತು. ನಾನು ಅವರಿಗೆ ಕರೆ ಮಾಡಿ, ‘ಯುದ್ಧ ಮುಂದುವರಿದರೆ, ಇನ್ನು ಮುಂದೆ ವ್ಯಾಪಾರವಿಲ್ಲ. ನೀವು ಹೀಗೆ ಮಾಡಿದರೆ, ನೀವು ಒಳ್ಳೆಯವರಾಗಿರುವುದಿಲ್ಲ. ಅವರಿಬ್ಬರೂ ಪ್ರಬಲ ಪರಮಾಣು ರಾಷ್ಟ್ರಗಳು. ಪರಮಾಣು ಯುದ್ಧ ಕೂಡ ಸಂಭವಿಸುತ್ತಿತ್ತು. ಆನಂತರ ಅದು ಎಲ್ಲಿ ಕೊನೆಗೊಳ್ಳುತ್ತಿತ್ತು ಎಂದು ಯಾರಿಗೆ ತಿಳಿದಿತ್ತು. ಆ ಯುದ್ಧವನ್ನು ನಾನು ನಿಲ್ಲಿಸಿದೆ’ ಎಂದು ಟ್ರಂಪ್‌ ಹೇಳಿದರು.

ಅಮೆರಿಕವು ಇರಾನ್‌ನ ಸಂಪೂರ್ಣ ಪರಮಾಣು ಸಾಮರ್ಥ್ಯವನ್ನು ಕಸಿದುಕೊಂಡಿದೆ. ಕೊಸೊವೊ ಮತ್ತು ಸೆರ್ಬಿಯಾ ನಡುವಿನ ಸಂಘರ್ಷವನ್ನು ನಿಲ್ಲಿಸಿದೆ ಎಂದು ಟ್ರಂಪ್ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ನಿಲ್ಲಿಸುವ ಆಮಿಷದ ಮೂಲಕ ನಿಲ್ಲಿಸಿದೆ ಎಂದು ಪದೇ ಪದೇ ಹೇಳುತ್ತಿರುವ ಟ್ರಂಪ್, ಕಳೆದ ಶುಕ್ರವಾರ ಮೊದಲ ಬಾರಿಗೆ ಸಂಘರ್ಷದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಯಿತು” ಎಂದು ಹೇಳಿದರು.

“ಭಾರತ, ಪಾಕಿಸ್ತಾನ ಯುದ್ಧದಲ್ಲಿ ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಭಾವಿಸುತ್ತೇನೆ. ಅದು ಕೆಟ್ಟದಾಗುತ್ತಾ ಹೋಗುತ್ತಿತ್ತು, ಅಲ್ಲವೇ? ಅದು ಆಗಾಗಲಿದೆ ಎಂದು ತೋರುತ್ತಿತ್ತು, ಇವೆರೆಡು ಗಂಭೀರ ಪರಮಾಣು ದೇಶಗಳು ಪರಸ್ಪರ ಬಾಂಬ್‌ ಹಾಕಲು ತಯಾರಾಗಿದ್ದವು” ಎಂದು ಟ್ರಂಪ್‌ ಶ್ವೇತಭವನದಲ್ಲಿ ರಿಪಬ್ಲಿಕನ್ ಸೆನೆಟರ್‌ಗಳಿಗೆ ಆಯೋಜಿಸಿದ್ದ ಭೋಜನಕೂಟದಲ್ಲಿ ಹೇಳಿದ್ದರು.

ಮೇ 10 ರಂದು, ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ “ಪೂರ್ಣ ಮತ್ತು ತಕ್ಷಣದ” ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದಾಗಿನಿಂದ, ಅವರು ವಿವಿಧ ಸಂದರ್ಭಗಳಲ್ಲಿ ತಮ್ಮ ಹೇಳಿಕೆಯನ್ನು ಹಲವಾರು ಬಾರಿ ಪುನರಾವರ್ತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...