ದೇಶದಲ್ಲಿನ ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ (ಯುಎಇ) ಹೊರಡುವ ಭಾರತೀಯ ಪ್ರಯಾಣಿಕರಿಗೆ ಹಲವಾರು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣ ಸಲಹೆಗಳನ್ನು ನೀಡಿವೆ.
ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿ ಬುಧವಾರ ಭಾರೀ ಮಳೆ ಮತ್ತು ಚಂಡಮಾರುತದಿಂದ ಜನರಿಗೆ ಎಚ್ಚರದಿಂದಿರಲು ಸೂಚಿಸಿದ್ದು , ಅಧಿಕಾರಿಗಳು ಆರೆಂಜ್ ಅಲರ್ಟ್ ನೀಡಲು ಸೂಚಿಸಿದ್ದಾರೆ.
ಹದಗೆಟ್ಟ ಹವಾಮಾನ ಪರಿಸ್ಥಿತಿಗಳನ್ನು ನಿರೀಕ್ಷಿಸುತ್ತಿರುವ ಸರ್ಕಾರವು ಮುಂದಿನ ಎರಡು ದಿನಗಳವರೆಗೆ “ಮಧ್ಯಮದಿಂದ ಭಾರೀ ಮಳೆ”ಯಾಗುವ ಸಾಧ್ಯತೆ ಕುರಿತು ಎಚ್ಚರಿಸಿದೆ.
ಇಂಡಿಗೋ, ವಿಸ್ತಾರಾ ಮತ್ತು ಸ್ಪೈಸ್ ಜೆಟ್‌ಗಳು ಯುಎಇಯಲ್ಲಿನ ಹವಾಮಾನ ಪರಿಸ್ಥಿತಿಗಳಿಂದಾಗಿ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ
”ದುಬೈ, ಶಾರ್ಜಾ ಮತ್ತು ಅಬುಧಾಬಿಯಲ್ಲಿನ ಪ್ರತಿಕೂಲ ಹವಾಮಾನದ ಕಾರಣ , ನಮ್ಮ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ದಯವಿಟ್ಟು ನಿಮ್ಮ ವಿಮಾನದ ಸ್ಟೆಟಸ್ ಟ್ರ್ಯಾಕ್ ಮಾಡಿ ”ಎಂದು ಇಂಡಿಗೋ ಹೇಳಿದೆ.
“ದುಬೈನಲ್ಲಿ ಕೆಟ್ಟ ಹವಾಮಾನದಿಂದಾಗಿ (ಮಳೆಯೊಂದಿಗೆ ಗುಡುಗು ಸಹಿತ ಮಳೆ), ಎಲ್ಲ ನಿರ್ಗಮನಗಳು/ಆಗಮನಗಳ ಮೇಲೆ ಪರಿಣಾಮ ಬೀರಬಹುದು” ಎಂದು ಸ್ಪೈಸ್‌ಜೆಟ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದೆ.
ಯುಎಇಯಲ್ಲಿನ ಹವಾಮಾನ ಪರಿಸ್ಥಿತಿಯಿಂದಾಗಿ ದುಬೈನ ಪುರಸಭೆಯ ಎಲ್ಲಾ ಬೀಚ್‌ಗಳು, ಸಾರ್ವಜನಿಕ ಉದ್ಯಾನವನಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಿಸಿದೆ. ಗುರುವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ಅಬುಧಾಬಿಯ ಬಹುತೇಕ ರಸ್ತೆಗಳು ಜಲಾವೃತವಾಗಿದ್ದು, ಜನರು ಕೆಲಸಕ್ಕಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.