ಟೆಕ್ಸಾಸ್‌ನಲ್ಲಿ ಭೀಕರ ಪ್ರವಾಹ: 50 ಮಂದಿ ಸಾವು – ಹತ್ತಾರು ಜನ ನಾಪತ್ತೆ; ಡ್ರೋಣ್ ವಿಡಿಯೋ ವೈರಲ್

Date:

ಅಮೆರಿಕದ ಸೆಂಟ್ರಲ್ ಟೆಕ್ಸಾಸ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಹಠಾತ್ ಪ್ರವಾಹ ಸಂಭವಿಸಿವೆ. ಡಾಲುಪೆ ನದಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದ್ದು, ಕೆಲವೇ ನಿಮಿಷಗಳಲ್ಲಿ 26 ಅಡಿಗಳಷ್ಟು ನೀರಿನ ಹರಿವು ಹೆಚ್ಚಾಗಿದೆ. ಪರಿಣಾಮವಾಗಿ ಎದುರಾದ ವಿನಾಶಕಾರಿ ಪ್ರವಾಹದಿಂದ 50 ಜನರು ಸಾವನ್ನಪ್ಪಿದ್ದಾರೆ. ಕೊಚ್ಚಿಹೋಗಿದ್ದ 27 ಮಂದಿಯನ್ನು ರಕ್ಷಣಾ ಕಾರ್ಯಕರ್ತರು ರಕ್ಷಿಸಿದ್ದಾರೆ. ಆದಾಗ್ಯೂ, ಇನ್ನೂ ಹಲವರು ಕಾಣೆಯಾಗಿದ್ದಾರೆ.

- Advertisement -

ಧಾರಾಕಾರ ಮಳೆಯು ಟೆಕ್ಸಾಸ್‌ನ ಕೆರ್ ಕೌಂಟಿ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಕರೆರ್‌ ಕೌಂಟಿಯಲ್ಲಿಯೇ 15 ಮಕ್ಕಳು ಸೇರಿದಂತೆ 43 ಜನರು ಸಾವನ್ನಪ್ಪಿದ್ದಾರೆ. ಟ್ರಾವಿಸ್ ಕೌಂಟಿಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದರೆ, ಬರ್ನೆಟ್ ಕೌಂಟಿಯಲ್ಲಿ ಇಬ್ಬರು ಮತ್ತು ಟಾಮ್ ಗ್ರೀನ್ ಕೌಂಟಿಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕೆರ್ ಕೌಂಟಿಯಲ್ಲಿರುವ ಕ್ರಿಶ್ಚಿಯನ್ ಹೆಣ್ಣುಮಕ್ಕಳ ಹಾಸ್ಟೆಲ್‌ ಪ್ರದೇಶದಲ್ಲಿ ಪ್ರವಾಹವಾಗಿದ್ದು, ಹಾಸ್ಟೆಲ್ ಮತ್ತು ಮನೆಗಳಲ್ಲಿದ್ದ ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ. ಹಾಸ್ಟೆಲ್‌ನಲ್ಲಿದ್ದ ಸುಮಾರು 30 ಬಾಲಕಿಯರು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಶೋಧನಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಕಾಣೆಯಾದವರನ್ನು ಹುಡುಕುವುದು ಸವಾಲಿನ ಕೆಲಸವಾಗಿದೆ. ಆದಾಗ್ಯೂ, ಈವರೆಗೆ 27 ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಕ್ಸಾಸ್ ತುರ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ನಿಮ್ ಕಿಡ್, “ಪ್ರವಾಹಕ್ಕೆ ಸಿಲುಕಿ ಸತ್ತವರ ಮೃತದೇಹಗಳು ಮತ್ತು ಬದುಕುಳಿದಿರುವವರ ಪತ್ತೆಗಾಗಿ ರಕ್ಷಣಾ ಸಿಬ್ಬಂದಿಗಳು ಗ್ವಾಡಾಲುಪೆ ನದಿಯ ಉದ್ದಕ್ಕೂ ಶೋಧ ನಡೆಸುತ್ತಿದ್ದಾರೆ. ಕಾಣೆಯಾದ ಎಲ್ಲರನ್ನು ಕಂಡುಹಿಡಿಯುವವರೆಗೆ ನಾವು ಹುಡುಕಾಟವನ್ನು ಮುಂದುವರಿಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...