ರಷ್ಯಾ ಸೇನೆಯಲ್ಲಿ ಭಾರತೀಯರ ಬಲವಂತದ ನೇಮಕ; ದೊರೆಯದ ಬಿಡುಗಡೆ

Date:

ರಷ್ಯಾದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತೀಯರ ಏರುತ್ತಲೇ ಇದೆ. ರಷ್ಯಾ ಸೇನೆಯಲ್ಲಿ 44 ಭಾರತೀಯರಿದ್ದಾರೆ. ಅವರನ್ನು ತಕ್ಷಣವೇ ಸೇನೆಯಿಂದ ಬಿಡುಗಡೆ ಮಾಡಿ, ಭಾರತಕ್ಕೆ ಕಳಿಸುವಂತೆ ಭಾರತ ಸರ್ಕಾರವು ರಷ್ಯಾವನ್ನು ಕೇಳಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

- Advertisement -

ಕಳೆದ ಕೆಲವು ತಿಂಗಳುಗಳಿಂದ ರಷ್ಯಾದ ಮಿಲಿಟರಿ ವಿಭಾಗಗಳಿಗೆ ಅನೇಕ ಭಾರತೀಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನಮಗೆ ತಿಳಿದಿರುವಂತೆ, ಪ್ರಸ್ತುತ 44 ಭಾರತೀಯರನ್ನು ರಷ್ಯಾ ತನ್ನ ಸೇನೆಯಲ್ಲಿ ಬಲವಂತವಾಗಿ ಇರಿಸಿಕೊಂಡಿದೆ. ಅವರೆಲ್ಲರನ್ನೂ ಬಿಡುಗಡೆಗೊಳಿಸುವಂತೆ ನಾವು ಒತ್ತಾಯಿಸಿದ್ದೇವೆ. ರಷ್ಯಾ ಸೇನೆಗೆ ಭಾರತೀಯರನ್ನು ನೇಮಿಸಿಕೊಳ್ಳುವ ಧೋರಣೆಯನ್ನು ರಷ್ಯಾ ನಿಲ್ಲಿಸಬೇಕೆಂದು ಕೇಳಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ರಷ್ಯಾ ಸೇನೆಯಲ್ಲಿ ಸಿಲುಕಿರುವ ಭಾರತೀಯರ ಕುಟುಂಬಗಳು ಮತ್ತು ರಷ್ಯಾ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರವು ಮಾತುಕತೆ ನಡೆಸುತ್ತಿದೆ. ಭಾರತೀಯರನ್ನು ರಷ್ಯಾ ಸೇನೆಯಿಂದ ಬಿಡುಗಡೆಗೊಳಿಸಿ, ಮರಳಿ ಕರೆತರುವ ಕುರಿತು ಕಾಲಕಾಲಕ್ಕೆ ಮಾಹಿತಿಯನ್ನು ಕುಟುಂಬಗಳಿಗೆ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಹಿಂದೆ, ರಷ್ಯಾದ ಪಡೆಗಳಲ್ಲಿ ಸುಮಾರು 27 ಭಾರತೀಯರು ಸಿಲುಕಿಕೊಂಡಿದ್ದು, ಅಲ್ಲಿನ ಸೇನೆಗೆ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಸೆಪ್ಟೆಂಬರ್ ಅಂತ್ಯದ ವೇಳೆಗೆ, 44 ಮಂದಿ ಭಾರತೀಯರು ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಹರಿಯಾಣದ ಮತದಾರೆ ‘ಬ್ರೆಜಿಲ್ ಮಾಡೆಲ್’ ಯಾರು ಗೊತ್ತೇ?

“ಕಳೆದ ವರ್ಷ ಪ್ರಧಾನಿ ಮೋದಿ ರಷ್ಯಾ ಭೇಟಿಯ ಸಮಯದಲ್ಲಿ, ಭಾರತೀಯರು ರಷ್ಯಾ ಸೇನೆಯಲ್ಲಿರುವ ಕುರಿತು ಅಲ್ಲಿನ ಸರ್ಕಾರೊದಂದಿಗೆ ಚರ್ಚಿಸಿದ್ದರು. ಈ ವಿಷಯವು ರಷ್ಯಾದ ಅಧಿಕಾರಿಗಳ ಪರಿಗಣನೆಯಲ್ಲಿದೆ ಮತ್ತು ರಷ್ಯಾದ ಮಿಲಿಟರಿ ಸೇವೆಯಿಂದ ಎಲ್ಲ ಭಾರತೀಯರನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ರಷ್ಯಾ ಅಧಿಕಾರಿಗಳು ಭರವಸೆ ನೀಡಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ರಷ್ಯಾ ಸೇನೆಯಲ್ಲಿರುವ ಭಾರತೀಯರ ಬಿಡುಗಡೆಯ ಕುರಿತು ರಷ್ಯಾ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

2025ರ ಫೆಬ್ರವರಿ ವೇಳೆಗೆ ರಷ್ಯಾದ ಸಶಸ್ತ್ರ ಪಡೆಗಳು 127 ಭಾರತೀಯ ಪ್ರಜೆಗಳನ್ನು ನೇಮಿಸಿಕೊಂಡಿವೆ ಎಂದು ಸರ್ಕಾರಿ ದಾಖಲೆಗಳು ಹೇಳುತ್ತವೆ. ಈ ಪೈಕಿ 97 ಜನರನ್ನು ಬಿಡುಗಡೆ ಮಾಡಲಾಗಿದೆ. 12 ಮಂದಿ ರಷ್ಯಾ-ಉಕ್ರೇನ್ ಸಂಘರ್ಷದ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಳಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...