ಕೆಲಸದ ಅವಧಿಗೆ ಸಂಬಂಧಿಸಿದಂತೆ ಉದ್ಯಮಿಗಳು ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಈ ಮೊದಲು ಭಾರತದ ಕೆಲವು ಉದ್ಯಮಿಗಳು ವಾರಕ್ಕೆ 70, 90 ಗಂಟೆ ಕೆಲಸ ಮಾಡಿ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು.
ಈಗ ವಿಶ್ವದ ಶ್ರೀಮಂತರಲ್ಲಿ ಪ್ರಮುಖ ಸ್ಥಾನದಲ್ಲಿರುವ ಸಾಮಾಜಿಕ ಮಾಧ್ಯಮ ಎಕ್ಸ್‌ನ ಮಾಲೀಕ ಎಲಾನ್ ಮಸ್ಕ್ ವಾರಕ್ಕೆ 120 ಗಂಟೆ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.
ಎಲಾನ್ ಮಸ್ಕ್ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದ ತನ್ನ ಎಕ್ಸ್ ಖಾತೆಯಲ್ಲಿ ಎಲಾನ್ ಮಸ್ಕ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ಡೋಜ್ ತಂಡವು ವಾರಕ್ಕೆ 120 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ. ಆದರೆ ಸರ್ಕಾರಿ ನೌಕರರು ಕೇವಲ 40 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಮೆರಿಕ | ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಾರಂಭ; ಮುಂದಿನ ವಾರ ಮೋದಿ ವಾಷಿಂಗ್ಟನ್ ಪ್ರವಾಸ
ಎಲಾನ್ ಮಸ್ಕ್ ಅವರ ಈ ಪೋಸ್ಟ್ ವೈರಲ್ ಆದ ಬಳಿಕ ನೆಟ್ಟಿಗರು ಮಸ್ಕ್ ಅವರ ದೀರ್ಘ ಕಾಲದ ಕೆಲಸದ ಸಮಯದ ನೀತಿಯನ್ನು ಟೀಕಿಸುತ್ತಿದ್ದಾರೆ. ಎಲಾನ್ ಮಸ್ಕ್ ಹೆಚ್ಚು ಸಮಯ ಕೆಲಸ ಮಾಡುವುದನ್ನು ಪ್ರ ತಿಪಾದಿಸಿದ ಏಕೈಕ ಕೈಗಾರಿಕೋದ್ಯಮಿ ಅಲ್ಲ.
ಇದಕ್ಕೂ ಮೊದಲು ಭಾರತದಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ದೇಶದ ಯುವಕರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡುವಂತೆ ಕೇಳಿಕೊಂಡಿದ್ದರು.ಇದಾದ ನಂತರ ಎಲ್ & ಟಿ ಸಿಇಒ ಎಸ್ ಎನ್ ಸುಬ್ರಮಣ್ಯಂ ಕೂಡ 90 ಗಂಟೆಗಳ ಕೆಲಸದ ಬಗ್ಗೆ ಮಾತನಾಡಿದರು.
ಅದೇ ಸಮಯದಲ್ಲಿ ಇತ್ತೀಚೆಗೆ ಮಂಡಿಸಲಾದ ಆರ್ಥಿಕ ಸಮೀಕ್ಷೆಯು ವಾರಕ್ಕೆ 60 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡುವುದರಿಂದ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟವಾಗಿ ಹೇಳುತ್ತದೆ.

