ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಮಧ್ಯಂತರ ಪ್ರಧಾನಿಯಾಗುವ ಸಾಧ್ಯತೆ

Date:

Advertisements

ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಜೆನ್‌ ಝಿ ಪ್ರತಿಭಟನಾ ಗುಂಪು ಅಧಿಕೃತವಾಗಿ ಘೋಷಿಸಿದೆ.

ಮುಂದಿನ 6 ತಿಂಗಳೊಳಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲಾಗುವುದು, ಇದರಿಂದಾಗಿ ಜನರು, ಅದರಲ್ಲೂ ವಿಶೇಷವಾಗಿ ನೇಪಾಳದ ಯುವಕರು ತಮ್ಮ ಇಷ್ಟದ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಲು ಅವಕಾಶ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರತಿಭಟನೆ, ಹಿಂಸಾಚಾರದಿಂದ ಅರಾಜಕತೆ ಸೃಷ್ಟಿಯಾಗಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತು ‘ಜೆನ್‌ ಝಿ’ ತಲೆಮಾರಿನ ಮುಖಂಡರು ಅಧ್ಯಕ್ಷ ರಾಮಚಂದ್ರ ಪೌಡೆಲ್ ಹಾಗೂ ಸೇನಾ ಮುಖ್ಯಸ್ಥ ಅಶೋಕ್ ರಾಜ್ ಸಿಗ್ನಲ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.

ಸಾಮಾಜಿಕ ಮಾಧ್ಯಮಗಳ ನಿಷೇಧದಿಂದ ಆರಂಭವಾದ ಯುವ ಸಮುದಾಯದ ಪ್ರತಿಭಟನೆ ನಂತರ ಅಧಿಕಾರ ದುರುಪಯೋಗ ಮತ್ತು ಭ್ರಷ್ಟಾಚಾರದ ವಿರುದ್ಧ ಆಕ್ರೋಶವೂ ಸೇರಿ ಹೋರಾಟದ ಕಾವು ಹೆಚ್ಚಿತು. ಪರಿಣಾಮ ಹಲವರು ಪ್ರಾಣ ಕಳೆದುಕೊಂಡರು. ಹೋರಾಟಕ್ಕೆ ಮಣಿದು ಪ್ರಧಾನಿ ಕೆ.ಪಿ.ಶರ್ಮಾ ಓಲಿ ಅವರ ರಾಜೀನಾಮೆ ನೀಡಿದ್ದಾರೆ. ಇದೀಗ ನೂತನ ಪ್ರಧಾನಿ ಆಯ್ಕೆ ಕುರಿತ ಚರ್ಚೆಗೆ ವೇದಿಕೆ ಸಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ...

ಭಯೋತ್ಪಾದಕ ಸಂಘಟನೆ ಸಾಲಿಗೆ ಬಿಷ್ಣೋಯ್ ಗ್ಯಾಂಗ್: ಕೆನಡಾ ಸರ್ಕಾರ ಘೋಷಣೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು,...

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

ರಂಗಭೂಮಿ, ಚಲನಚಿತ್ರ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಕನ್ನಡ ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ...

Download Eedina App Android / iOS

X