ಹಡಗು ವಶಪಡಿಸಿಕೊಂಡ ಅಮೆರಿಕ: ‘ಭಾರಿ ಬೆಲೆ ತೆರಬೇಕಾದೀತು’ ಎಂದು ಗುಡುಗಿದ ಇರಾನ್

Date:

ಅಮೆರಿಕವು ಇರಾನ್‌ನ ಹಡಗೊಂದನ್ನು ವಶಪಡಿಸಿಕೊಂಡ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತಷ್ಟು ತಾರಕಕ್ಕೇರಿದೆ. “ಒಂದೋ ಎಲ್ಲರಿಗೂ ಮುಕ್ತ ತೈಲ ಮಾರುಕಟ್ಟೆ ಇರಬೇಕು, ಇಲ್ಲವೇ ಎಲ್ಲರೂ ಇದರ ಭಾರಿ ಬೆಲೆ ತೆರಬೇಕಾಗುತ್ತದೆ” ಎಂದು ಇರಾನ್, ಅಮೆರಿಕಕ್ಕೆ ಖಡಕ್ ಎಚ್ಚರಿಕೆ ನೀಡಿದೆ. ಈ ಬೆಳವಣಿಗೆಯಿಂದಾಗಿ ಎರಡು ದೇಶಗಳ ನಡುವೆ ನಡೆಯಬೇಕಿದ್ದ ಶಾಂತಿ ಮಾತುಕತೆಯ ಭವಿಷ್ಯ ಡೋಲಾಯಮಾನವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಭಾನುವಾರ ಅಮೆರಿಕದ ನೌಕಾಪಡೆಯ ವಿಧ್ವಂಸಕ ನೌಕೆಯೊಂದು, ನಿರ್ಬಂಧಗಳನ್ನು ಉಲ್ಲಂಘಿಸಲು ಯತ್ನಿಸಿದ ಆರೋಪದ ಮೇಲೆ ಇರಾನ್‌ನ ಹಡಗಿನ ಮೇಲೆ ಗುಂಡಿನ ದಾಳಿ ನಡೆಸಿ ಅದನ್ನು ವಶಕ್ಕೆ ಪಡೆದಿದೆ. ಅಮೆರಿಕವು ಇರಾನ್‌ನ ಹಡಗುಗಳು ಮತ್ತು ಬಂದರುಗಳ ಮೇಲೆ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದೆ. ಈ ಘಟನೆಯ ವರದಿ ಹೊರಬೀಳುತ್ತಿದ್ದಂತೆಯೇ, ಜಾಗತಿಕ ಕಚ್ಚಾ ತೈಲ ಬೆಲೆಯಲ್ಲಿ ಶೇಕಡ 4 ಕ್ಕಿಂತ ಹೆಚ್ಚು ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇರಾನ್‌ನ ಪ್ರಥಮ ಉಪಾಧ್ಯಕ್ಷ ಮೊಹಮ್ಮದ್‌ರೆಜಾ ಅರೆಫ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದು, ಅಮೆರಿಕದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. “ಹಾರ್ಮುಜ್ ಜಲಸಂಧಿಯ ಭದ್ರತೆಯು ಉಚಿತವಾಗಿ ಬರುವುದಿಲ್ಲ. ಇತರರಿಗೆ ಉಚಿತ ಭದ್ರತೆಯನ್ನು ನಿರೀಕ್ಷಿಸುತ್ತಾ, ಇರಾನ್‌ನ ತೈಲ ರಫ್ತುಗಳನ್ನು ನಿರ್ಬಂಧಿಸಲು ಯಾರಿಗೂ ಸಾಧ್ಯವಿಲ್ಲ. ಆಯ್ಕೆ ಸ್ಪಷ್ಟವಾಗಿದೆ: ಒಂದೋ ಎಲ್ಲರಿಗೂ ಮುಕ್ತ ತೈಲ ಮಾರುಕಟ್ಟೆ ಇರಬೇಕು, ಅಥವಾ ಎಲ್ಲರೂ ಭಾರಿ ವೆಚ್ಚದ ಅಪಾಯವನ್ನು ಎದುರಿಸಲು ಸಿದ್ಧರಿರಬೇಕು” ಎಂದು ಅವರು ಎಚ್ಚರಿಸಿದ್ದಾರೆ. ಇರಾನ್ ಮೇಲಿನ ಮುಂದುವರಿದ ಒತ್ತಡವು ಜಾಗತಿಕ ಮಟ್ಟದಲ್ಲಿ ಅದರಲ್ಲೂ ವಿಶೇಷವಾಗಿ ಇಂಧನ ಮಾರುಕಟ್ಟೆಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಅಮೆರಿಕದ ವಿನಾಶಕ್ಕೆ ಸಿದ್ಧವಾಗಿರುವ ಡೊನಾಲ್ಡ್ ಟ್ರಂಪ್ ಎಂಬ ‘ವಿಧ್ವಂಸಕ’

ಅಮೆರಿಕದ ನಡೆಯಿಂದ ರೊಚ್ಚಿಗೆದ್ದಿರುವ ಇರಾನ್, ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆ ನೀಡಿದ್ದು, ವಾರಾಂತ್ಯದಲ್ಲಿ ಅತ್ಯಂತ ಪ್ರಮುಖ ವಾಣಿಜ್ಯ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೇಲಿನ ತನ್ನ ನಿಯಂತ್ರಣವನ್ನು ಮತ್ತಷ್ಟು ಬಿಗಿಗೊಳಿಸಿದೆ. ಫೆಬ್ರವರಿ 28 ರಂದು ಈ ಸಂಘರ್ಷ ಪ್ರಾರಂಭವಾಗುವ ಮೊದಲು, ಜಾಗತಿಕ ತೈಲ ರಫ್ತಿನ ಶೇಕಡ 20 ರಷ್ಟು ಪಾಲು ಇದೇ ಜಲಸಂಧಿಯ ಮೂಲಕ ಸಾಗುತ್ತಿತ್ತು ಎಂಬುದು ಗಮನಾರ್ಹ ಅಂಶವಾಗಿದೆ.

ಈ ಹಡಗು ವಶದ ಘಟನೆಯು ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಮಾತುಕತೆಯ ಎರಡನೇ ಸುತ್ತಿನ ಮೇಲೆ ಕರಿನೆರಳು ಬೀರಿದೆ. ಪಾಕಿಸ್ತಾನದಲ್ಲಿ ನಡೆಯಲಿದ್ದ ಅಮೆರಿಕ ಜೊತೆಗಿನ ಮಾತುಕತೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಇರಾನ್ ಇನ್ನೂ ಖಚಿತಪಡಿಸಿಲ್ಲ. ಅಲ್ಲದೆ, ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಸಮಿತಿಯ ಮುಖ್ಯಸ್ಥ ಇಬ್ರಾಹಿಂ ಅಜೀಜಿ ಅವರು ಮಾತನಾಡಿ, “ನಾವು ಅಮೆರಿಕದೊಂದಿಗೆ ಮಾತುಕತೆ ಮುಂದುವರಿಸಲು ನಿರ್ಧರಿಸಿದ್ದೇವೆ, ಆದರೆ ಇದರರ್ಥ ಯಾವುದೇ ಬೆಲೆ ತೆತ್ತಾದರೂ ಮಾತುಕತೆ ನಡೆಸುತ್ತೇವೆ ಅಥವಾ ಎದುರಾಳಿಯ ಯಾವುದೇ ಸರ್ವಾಧಿಕಾರಿ ನಡೆಯನ್ನು ಒಪ್ಪಿಕೊಳ್ಳುತ್ತೇವೆ ಎಂದಲ್ಲ” ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...