ಆಘಾತಕಾರಿ ಪ್ರಕರಣ | 300 ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವೈದ್ಯ

Date:

ತನ್ನ ಮೂರು ದಶಕಗಳ ಮೃತ್ತಿಜೀವನದಲ್ಲಿ ಸುಮಾರು 300 ಮಕ್ಕಳ ಮೇಲೆ ಶಸ್ತ್ರಚಿಕಿತ್ಸಕನೊಬ್ಬ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಪ್ರಕರಣ ಫ್ರಾನ್ಸ್‌ನಲ್ಲಿ ಬೆಳಕಿಗೆ ಬಂದಿದೆ. ಕಾಮುಕ ಆರೋಪಿ, ಶಸ್ತ್ರಚಿಕಿತ್ಸಕ (ಸರ್ಜನ್) ಜೊಯೆಲ್ ಲೆ ಸ್ಕೌರ್ನೆಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದ್ದು, ತನ್ನ ಕೃತ್ಯವನ್ನು ಆತ ಒಪ್ಪಿಕೊಂಡಿದ್ದಾನೆ.

- Advertisement -

ಈ ಪ್ರಕರಣ ಬಳೆಕಿಗೆ ಬಂದ ಬಳಿಕ ಇಡೀ ಫ್ರಾನ್ಸ್‌ ಆಘಾತಕ್ಕೊಳಗಾಗಿದೆ. ಇಂತಹ ಸರ್ಜನ್‌ವೊಬ್ಬ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾನೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆದರೂ, ಈತ ಈವರೆಗೆ ಸಿಕ್ಕಿಬೀಳದೇ ಇದ್ದದ್ದು ಹೇಗೆ ಎಂಬ ಪ್ರಶ್ನೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾಮುಕ ಸರ್ಜನ್, 1989ರಿಂದ 2014ರವರೆಗೆ 158 ಬಾಲಕರು ಮತ್ತು 141 ಬಾಲಕಿಯರು ಸೇರಿ ಒಟ್ಟು 299 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಾಮುಕ ಸರ್ಜನ್‌ನಿಂದ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳಲ್ಲಿ ಬಹುತೇಕರು ಅಪರಾಧಗಳು ನಡೆದಾಗ ಸರಾಸರಿ 11 ವರ್ಷ ವಯಸ್ಸಿನವರಾಗಿದ್ದರು ಎಂದು ವರದಿಯಾಗಿದೆ.

ಇದು ಫ್ರೆಂಚ್ ಇತಿಹಾಸದಲ್ಲಿ ಅತಿದೊಡ್ಡ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವೆಂದು ಹೇಳಲಾಗಿದೆ. ಆತನ ವಿರುದ್ಧದ ಆರೋಪಿಗಳು ನ್ಯಾಯಾಲಯದಲ್ಲಿ ಸಾಬೀತಾದರೆ ಫ್ರಾನ್ಸ್‌ ಕಾನೂನಿನ ಪ್ರಕಾರ ಆತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಆರೋಪಿಯನ್ನು 2017ರ ಮೇ 2 ರಂದು ಬಂಧಿಸಲಾಗಿದೆ. ಆತನಿಗೆ ಈಗಾಗಲೇ ಬೇರೊಂದು ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ. ನಾಲ್ವರು ಅಪ್ರಾಪ್ತರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ಕಾಮುಕ ಸರ್ಜನ್‌ ಸ್ಕೌರ್ನೆಕ್‌ಗೆ 2020ರಲ್ಲಿ 15 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ತನಿಖಾಧಿಕಾರಿಗಳು ಆರೋಪಿ ಸ್ಕೌರ್ನೆಕ್‌ನ ಕಂಪ್ಯೂಟರ್‌ಅನ್ನು ವಶಕ್ಕೆ ಪಡೆದಿದ್ದು, ಅದರಲ್ಲಿದ್ದ ರೋಗಿಗಳ ವರದಿಗಳಿಂದ ನೂರಾರು ಸಂತ್ರಸ್ತರನ್ನು ಗುರುತಿಸಿದ್ದಾರೆ. ಹಲವಾರು ಸಂತ್ರಸ್ತರನ್ನು ವಿಚಾರಣೆಗೆ ಒಳಪಡಿಸಿದ್ದು, ಅನೇಕರು ತಮಗೆ ‘ಅರವಳಿಕೆ’ ಚುಚ್ಚುಮದ್ದು ನೀಡಿ, ತಮ್ಮ ಮೇಲೆ ಸರ್ಜನ್ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಈ ವರದಿ ಓದಿದ್ದೀರಾ?: ಆತ್ಮಹತ್ಯೆ, ಪ್ರತಿಭಟನೆ, ಹೊರಹಾಕುವಿಕೆ, ಬಂಧನ: ಕೆಐಐಟಿ ವಿವಿಯಲ್ಲಿ ಆಗಿದ್ದೇನು?

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಕುರಿತ ಫ್ರಾನ್ಸ್‌ನ ‘ಫ್ರೀಡಂ ಕಮಿಷನ್’ನ 2023ರ ವರದಿ ಪ್ರಕಾರ, ಫ್ರಾನ್ಸ್‌ನಲ್ಲಿ ಪ್ರತಿ ವರ್ಷ ಅಂದಾಜು 1,60,000 ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಬಲಿಯಾಗುತ್ತಾರೆ. ಆದರೆ, ಸಂತ್ರಸ್ತರಲ್ಲಿ ಕೆಲವರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ಎಂದಿಗೂ, ಎಲ್ಲಿಯೂ ಬಹಿರಂಗಪಡಿಸುವುದಿಲ್ಲ. ಹೀಗಾಗಿ, ಅಪರಾಧಿಗಳಿಗೆ ಶಿಕ್ಷೆಯಾಗುವ ಪ್ರಮಾಣ ತೀರಾ ಕಡಿಮೆ ಇದೆ ಎಂದು ವರದಿ ಹೇಳಿದೆ.

ನ್ಯಾಯ ಸಚಿವಾಲಯದ ಅಂಕಿಅಂಶಗಳನ್ನು ಉಲ್ಲೇಖಿಸಿ, ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 10ರಲ್ಲಿ 1 ಮತ್ತು ಲೈಂಗಿಕ ದೌರ್ಜನ್ಯಕ್ಕೆ ಪ್ರಕರಣಗಳಲ್ಲಿ 6 ದೂರುಗಳಲ್ಲಿ 1 ಪ್ರಕರಣದಲ್ಲಿ ಮಾತ್ರವೇ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ.

2007ರಲ್ಲಿ ಮೃತಪಟ್ಟ ರೋಮನ್ ಕ್ಯಾಥೋಲಿಕ್ ಪಾದ್ರಿ ಅಬ್ಬೆ ಪಿಯರ್ ವಿರುದ್ಧವೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿದ್ದವು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...