ಗಾಜಾ | ಇಸ್ರೇಲ್‌ ದಾಳಿ ಆರಂಭವಾದ 2 ವರ್ಷದಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆದ ಮಕ್ಕಳು

Date:

2023ರಲ್ಲಿ ಗಾಜಾ ಮೇಲೆ ಇಸ್ರೇಲ್‌ ದಾಳಿ ಆರಂಭಿಸಿದ ಬಳಿಕ, ಇದೇ ಮೊದಲ ಬಾರಿಗೆ ಗಾಜಾದ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ಯಾಲೆಸ್ತೀನ್ ಶಿಕ್ಷಣ ಸಚಿವಾಲಯ ತಿಳಿಸಿದೆ.

- Advertisement -

ಉನ್ನತ ಶಿಕ್ಷಣಕ್ಕಾಗಿನ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ಮತ್ತು ಪ್ರೌಢ ಶಿಕ್ಷಣ ಪರೀಕ್ಷೆಗಳನ್ನು ಪ್ಯಾಲೆಸ್ತೀನ್ ಶಿಕ್ಷಣ ಇಲಾಖೆ ನಡೆಸಿದೆ. ಒಟ್ಟು 1,500 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಜುಲೈ ತಿಂಗಳ ಆರಂಭದಲ್ಲಿ ಪ್ಯಾಲೆಸ್ತೀನ್ ಶಿಕ್ಷಣ ಸಚಿವಾಲಯ ಪರೀಕ್ಷೆಯನ್ನು ಪ್ರಕಟಿಸಿತ್ತು. ಪರೀಕ್ಷೆಯನ್ನು ವಿಶೇಷ ತಂತ್ರಾಂಶ ಬಳಸಿಕೊಂಡು ವಿದ್ಯುನ್ಮಾನ ಸಾಧನಗಳ ಮೂಲಕ ಆಯೋಜಿಸಲಾಗಿತ್ತು. ಪರೀಕ್ಷೆ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲ ತಾಂತ್ರಿಕ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತೆಂದು ಎಂದು ಗಾಝಾ ಪಟ್ಟಿಯ ಶಿಕ್ಷಣ ಸಚಿವಾಲಯ ತಿಳಿಸಿದೆ.

2023ರ ಅಕ್ಟೋಬರ್‌ನಲ್ಲಿ ಗಾಜಾಪಟ್ಟಿ ಮೇಲೆ ಇಸ್ರೇಲ್‌ ಜನಾಂಗೀಯ ಯುದ್ಧ ಆರಂಭಿಸಿತು. ಅಂದಿನಿಂದ ಈವರೆಗೆ ನಿರಂತರವಾಗಿ ಇಸ್ರೇಲ್ ದಾಳಿ ನಡೆಸುತ್ತಿದೆ. ಗಾಜಾ ಮೇಲೆ ಇಸ್ರೇಲ್ ನಡೆಸಿದ ಆಕ್ರಮಣಕಾರಿ ವೈಮಾನಿಕ ದಾಳಿಯಿಂದಾಗಿ, ಗಾಜಾಪಟ್ಟಿ ಅಕ್ಷಶಃ ನಲುಗಿ ಹೋಗಿದೆ. ಭಾರೀ ಜನಹಾನಿ ಮತ್ತು ವಿನಾಶಗಳಾಗಿವೆ.

2023ರಿಂದ 2025ರ ಜುಲೈವರೆಗೆ, 58,000ಕ್ಕೂ ಹೆಚ್ಚು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಅಲ್ಲದೆ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,40,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಝಾದ ಶೇ.90ರಷ್ಟು ಮನೆಗಳು ಧ್ವಂಸವಾಗಿವೆ. ಆಸ್ಪತ್ರೆಗಳು, ಶಾಲೆಗಳು ಹಾಗೂ ಇತರ ಮೂಲಸೌಕರ್ಯಗಳು ನಾಶವಾಗಿವೆ.

ಇತ್ತೀಚೆಗೆ ನಡೆದ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಇಸ್ರೇಲ್ ತತ್ತರಿಸಿಹೋಗಿದೆ. ಪರಿಣಾಮವಾಗಿ, ಗಾಝಾ ಮೇಲಿನ ದಾಳಿಯಿಂದ ಇಸ್ರೇಲ್ ಕೊಂಚ ಹಿಂದೆ ಸರಿದಿದೆ. ಈ ನಡುವೆ, ಬಿದ್ದುಹೋದ ಶಾಲೆಗಳ ನಡುವೆ, ತಾವಿರುವ ಸ್ಥಳಗಳಿಂದಲೇ ಗಾಜಾ ಮಕ್ಕಳು ಪರೀಕ್ಷೆ ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...