ಗಾಜಾ ಬಿಕ್ಕಟ್ಟು | ನಾಗರಿಕ ರಕ್ಷಣೆಯ ನಿರ್ಣಯಕ್ಕೆ ಸಹಿ ಮಾಡದೇ ದೂರವುಳಿದ ಭಾರತ

Date:

Advertisements

ಗಾಜಾದಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಮಾನವೀಯ ಒಪ್ಪಂದ ಕುರಿತು ಜೋರ್ಡಾನ್ ಮಂಡಿಸಿದ ಕದನ ವಿರಾಮದ ನಿರ್ಣಯಕ್ಕೆ ಮತ ಚಲಾಯಿಸದೇ ಭಾರತ ದೂರ ಉಳಿದಿದೆ.

ಗಾಜಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಯನ್ನು ಎತ್ತಿಹಿಡಿಯುವುದು’ ಎನ್ನುವ ಘೋಷ ವಾಕ್ಯದೊಂದಿಗೆ ಜೋರ್ಡಾನ್ ಮಂಡಿಸಿದ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯು ಶುಕ್ರವಾರ ಪ್ರಕಟಿಸಿತ್ತು. ಮಾನವೀಯ ನೆಲೆಯದಲ್ಲಿ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕೆನ್ನುವ ವಿಶ್ವಸಂಸ್ಥೆಯ ಈ ನಿರ್ಣಯಕ್ಕೆ 121 ಸದಸ್ಯ ರಾಷ್ಟ್ರಗಳು ಸಮ್ಮತಿಸಿದರೆ, 14 ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿದವು. 44 ದೇಶಗಳು ಈ ನಿರ್ಣಯದಿಂದ ಹೊರಗುಳಿದಿದ್ದು, ಅದರಲ್ಲಿ ಭಾರತವೂ ಒಂದಾಗಿದೆ. ಭಯೋತ್ಪಾದನಾ ಕೃತ್ಯಗಳನ್ನು ಸಮರ್ಥಿಸಿಕೊಳ್ಳಬಾರದು ಎಂದು ಭಾರತ ತಿಳಿಸಿದೆ.

ವಿಶ್ವಸಂಸ್ಥೆ ರಾಯಭಾರ ಕಚೇರಿಗೆ ಭಾರತದ ಕಾಯಂ ಪ್ರತಿನಿಧಿ ಯೋಜ್ನಾ ಪಟೇಲ್ ಭಾರತದ ನಿರ್ಣಯದ ಬಗ್ಗೆ ಮಾತನಾಡಿದ್ದು, ‘ಮಾನವೀಯತೆಗೆ ಭಯೋತ್ಪಾದನೆ ಒಂದು ಪಿಡುಗಾಗಿದ್ದು, ಅದಕ್ಕೆ ಯಾವುದೇ ಗಡಿ, ರಾಷ್ಟ್ರೀಯತೆ, ಜನಾಂಗದ ಮಿತಿಯಿಲ್ಲ. ಭಯೋತ್ಪಾದಕ ಕೃತ್ಯಗಳನ್ನು ಜಗತ್ತು ಸಮರ್ಥಿಸಿಕೊಳ್ಳಬಾರದು. ಈ ವಿಷಯದಲ್ಲಿ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ನಾವೆಲ್ಲ ಒಂದಾಗಬೇಕಿದೆ. ಭಯೋತ್ಪಾದನೆ ವಿಚಾರವಾಗಿ ಶೂನ್ಯ ಸಹಿಷ್ಟುತೆಯನ್ನು ಹೊಂದಬೇಕಿದೆ’ ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ: ಹಮಾಸ್‌ನವರು ಒತ್ತೆಯಾಳುಗಳೊಂದಿಗೆ ಕರುಣೆಯಿಂದ ವರ್ತಿಸಿದರು: ಬಿಡುಗಡೆಗೊಂಡ ಹಿರಿಯ ಮಹಿಳೆ

193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿವೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

ಅಮೆರಿಕದ ‘ಅಕ್ಕರೆಯ ನ್ಯಾಯಾಧೀಶ’ ಫ್ರಾಂಕ್ ಕ್ಯಾಪ್ರಿಯೊ ನಿಧನ

ರೋಡ್ ಐಲ್ಯಾಂಡ್‌ನ ನಿವೃತ್ತ ಮುನಿಸಿಪಲ್ ನ್ಯಾಯಾಧೀಶರಾಗಿದ್ದ, ಸಾಮಾಜಿಕ ಜಾಲತಾಣಗಳಲ್ಲಿ 'ಅಕ್ಕರೆಯ ನ್ಯಾಯಾಧೀಶ'...

ಅಫ್ಘಾನಿಸ್ತಾನ | ಭೀಕರ ಅಪಘಾತ: ಹೊತ್ತಿ ಉರಿದ ಬಸ್, 17 ಮಕ್ಕಳು ಸೇರಿ 71 ಮಂದಿ ದಾರುಣ ಸಾವು

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಬಸ್...

ಗಾಝಾದಲ್ಲಿ ಕದನ ವಿರಾಮ ಪ್ರಸ್ತಾಪಕ್ಕೆ ಒಪ್ಪಿಕೊಂಡ ಹಮಾಸ್: ವರದಿ

ಗಾಝಾದ ಮೇಲೆ ಇಸ್ರೇಲ್ ದಾಳಿ ಕೊನೆಗೊಳಿಸುವ ನಿಟ್ಟಿನಲ್ಲಿ ಕದನ ವಿರಾಮ ಪ್ರಸ್ತಾಪದ...

Download Eedina App Android / iOS

X