ಗಾಜಾದ ಪರಿಸ್ಥಿತಿ ಸುಧಾರಿಸದಿದ್ದರೆ ಇಸ್ರೇಲ್ ವಿರುದ್ಧ ಕ್ರಮ: ಇಯು ಎಚ್ಚರಿಕೆ

Date:

ಗಾಜಾದ ಪರಿಸ್ಥಿತಿಯನ್ನು ಸುಧಾರಿಸಿದಿದ್ದರೆ, ಗಾಜಾ ನಿವಾಸಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಸುಧಾರಣೆಗಳನ್ನು ತರದಿದ್ದರೆ ಇಸ್ರೇಲ್ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ‘ಯುರೋಪಿಯನ್ ಒಕ್ಕೂಟ’ದ (ಇಯು) ವಿದೇಶಾಂಗ ನೀತಿ ಮುಖ್ಯಸ್ಥೆ ಕಾಜಾ ಕಲ್ಲಾಸ್ ಹೇಳಿದ್ದಾರೆ.

- Advertisement -

ಬ್ರಸೆಲ್ಸ್‌ನಲ್ಲಿ ಇಯು ಸದಸ್ಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದ್ದಾರೆ. “ಗಾಜಾ ಮತ್ತು ಪಶ್ಚಿಮ ಭಾಗದ ಪ್ರದೇಶಗಳ ವಿಚಾರದಲ್ಲಿ ಮಾನವ ಹಕ್ಕುಗಳ ಬದ್ಧತೆಗಳನ್ನು ಇಸ್ರೇಲ್ ಉಲ್ಲಂಘಿಸಿದೆ ಎಂದು ಸ್ಪಷ್ಟ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಪ್ಯಾಲೆಸ್ಟೀನಿಯನ್ನರ ಪರಿಸ್ಥಿತಿ ಸುಧಾರಿಸದಿದ್ದರೆ ಇಸ್ರೇಲ್ ಮೇಲೆ ಹೆಚ್ಚು ಒತ್ತಡ ಹೇರಲು ಇಯು ಮತ್ತಷ್ಟು ಕ್ರಮಗಳನ್ನು ತರುವ ಬಗ್ಗೆ ಚರ್ಚಿಸುತ್ತದೆ. ಈ ಬಗ್ಗೆ ಜುಲೈನಲ್ಲಿ ಚರ್ಚಿಸಲು ಸಭೆ ಸೇರಲಾಗುತ್ತದೆ” ಎಂದು ಹೇಳಿದ್ದಾರೆ.

“ಪ್ರಸ್ತುತ, ಅತ್ಯಂತ ಮುಖ್ಯವಾದ ವಿಷಯವೆಂದರೆ ಗಾಜಾದ ಪರಿಸ್ಥಿತಿಯನ್ನು ಸುಧಾರಿಸುವುದು, ಪ್ಯಾಲೆಸ್ತೀನ್‌ನಲ್ಲಿನ ಜನರ ಜೀವನವನ್ನು ಸುಧಾರಿಸುವುದು ಹಾಗೂ ನಾವು ಪ್ರತಿದಿನ ಗಾಜಾದಲ್ಲಿ ನೋಡುತ್ತಿರುವ ದುಃಖ ಮತ್ತು ಮಾನವ ನಷ್ಟವನ್ನು ನಿಲ್ಲಿಸುವುದು” ಎಂದು ಹೇಳಿದ್ದಾರೆ.

ಸಂಘರ್ಷವನ್ನು ತಡೆಗಟ್ಟಲು ಕೆಲಸ ಮಾಡುವ ‘ಇಂಟರ್ನ್ಯಾಷನಲ್ ಕ್ರೈಸಿಸ್ ಗ್ರೂಪ್‌’ನ ಲಿಸಾ ಮ್ಯೂಸಿಯೋಲ್ ಅವರು, “ಇಯು ಮಾನವ ಹಕ್ಕುಗಳ ವಿಚಾರದಲ್ಲಿ ತನ್ನದೇ ಆದ ಬದ್ದತೆಯನ್ನು ಹೊಂದಿದೆ. ಆದರೆ, ಗಾಜಾ ಮತ್ತು ಪಶ್ಚಿಮ ದಂಡೆಗಳ ವಿಚಾರದಲ್ಲಿ ಇಸ್ರೇಲ್ ಈ ಬದ್ದತೆಗಳನ್ನು ಮೀರಿದೆ. ಬಹಳ ದಿನಗಳ ಹಿಂದೆಯೇ ಬದ್ದತೆಯ ಕೆಂಪು ರೇಖೆಯನ್ನು ದಾಟಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...