ಗಾಜಾ | ನೆರವು ವಿತರಣಾ ಕೇಂದ್ರದ ಮೇಲೆ ಇಸ್ರೇಲ್‌ನಿಂದ ಗುಂಡಿನ ದಾಳಿ: 30 ಮಂದಿ ಸಾವು

Date:

ದಕ್ಷಿಣ ಗಾಜಾದ ರಫಾದಲ್ಲಿರುವ ಅಮೆರಿಕ ಬೆಂಬಲಿತ ನೆರವು ವಿತರಣಾ ಕೇಂದ್ರದ ಬಳಿ ಇಸ್ರೇಲ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ ಮತ್ತು 115ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಬೆಳಗಿನ ಜಾವ ನೆರವು ಕೇಂದ್ರದ ಬಳಿ ಸಾವಿರಾರು ಜನರು ಜಮಾಯಿಸಿದ ವೇಳೆ ಇಸ್ರೇಲ್ ಸೇನೆ ಜನಸಮೂಹದ ಮೇಲೆ ಗುಂಡು ಹಾರಿಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಈ ಬಗ್ಗೆ ಹಮಾಸ್ ಹೇಳಿಕೆ ನೀಡಿದ್ದು, ರಫಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇಸ್ರೇಲ್ ಪಡೆಗಳು ಮಾನವೀಯ ನೆರವು ವಿತರಣಾ ಕೇಂದ್ರಗಳಲ್ಲಿ ಜಮಾಯಿಸಿದ ಹಸಿದ ನಾಗರಿಕರ ಮೇಲೆ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದೆ. ಇದು ಮಾನವೀಯ ನೆರವು ಕೇಂದ್ರಗಳಲ್ಲ ಸಾಮೂಹಿಕ ಹತ್ಯಾಕಾಂಡದ ಕೇಂದ್ರಗಳು ಎಂದು ಹೇಳಿಕೊಂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಬಲ್ ಇಂಜಿನ್ ಸರ್ಕಾರದಲ್ಲೂ ಬಿಹಾರ ಬಸವಳಿದಿದೆ

ಒಂದು ವಾರದ ಮುನ್ನ ಗಾಜಾದಲ್ಲಿ ಆಶ್ರಯತಾಣವಾಗಿ ಬದಲಾಯಿಸಲಾದ ಶಾಲೆಯ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದ ಪರಿಣಾಮ 25 ಮಂದಿ ಮೃತಪಟ್ಟಿದ್ದರು. ಈ ಪೈಕಿ ಹೆಚ್ಚಿನವರು ಮಹಿಳೆಯರು, ಮಕ್ಕಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಯುದ್ಧ ಆರಂಭವಾದಾಗಿನಿಂದ ಇಸ್ರೇಲ್‌ ನಡೆಸಿದ ದಾಳಿಯಿಂದಾಗಿ ಸುಮಾರು 54,000 ಪ್ಯಾಲೆಸ್ತಿನಿಯನ್ನರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಮಹಿಳೆಯರು ಮತ್ತು ಮಕ್ಕಳು ಎಂದು ಗಾಜಾ ಆರೋಗ್ಯ ಸಚಿವಾಲಯ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...