ಗಾಜಾದಲ್ಲಿ ಶಾಂತಿ ಒಪ್ಪಂದ ಉಲ್ಲಂಘನೆ: ಇಸ್ರೇಲ್‌ನ ವೈಮಾನಿಕ ದಾಳಿಯಲ್ಲಿ 30 ಮಂದಿ ಸಾವು

Date:

ಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಯಲ್ಲಿದ್ದ ಕದನ ವಿರಾಮದ ನಡುವೆಯೂ ಮಂಗಳವಾರ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಹಮಾಸ್‌ನಿಂದ ಇಸ್ರೇಲ್ ಸೈನಿಕರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು “ಪ್ರಬಲ ದಾಳಿಗಳನ್ನು” ನಡೆಸಲು ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಗಾಜಾದ ನಾಗರಿಕ ರಕ್ಷಣಾ ಸಂಸ್ಥೆಯ ಪ್ರಕಾರ, ಮೂರು ವೈಮಾನಿಕ ದಾಳಿಗಳು ನಡೆದಿದ್ದು, ಒಂದು ದಾಳಿಯಲ್ಲಿ ವಾಹನವೊಂದಕ್ಕೆ ತಾಗಿ ಐವರು ಸಾವನ್ನಪ್ಪಿದ್ದಾರೆ. ಗಾಜಾದ ಪ್ರಮುಖ ಆಸ್ಪತ್ರೆಯಾದ ಅಲ್-ಶಿಫಾದ ಬಳಿಯೂ ಒಂದು ದಾಳಿ ನಡೆದಿದೆ. ಆದರೆ, ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್, “ಕೆಲವು ಚಕಮಕಿಗಳಿದ್ದರೂ ಶಾಂತಿ ಒಪ್ಪಂದ ಉಳಿದಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?

ಶಾಂತಿ ಒಪ್ಪಂದದಂತೆ, ಹಮಾಸ್ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಆದರೆ, ಉಳಿದಿರುವ ಒತ್ತೆಯಾಳುಗಳ ಶವಗಳನ್ನು ಹಸ್ತಾಂತರಿಸುವ ವಿಚಾರದಲ್ಲಿ ವಿಳಂಬವಾಗುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ. ಇಸ್ರೇಲ್‌ನ ದಾಳಿಗಳಿಂದ ಗಾಜಾದಲ್ಲಿ ಕಳೆದ 2 ವರ್ಷಗಳಿಂದ 68 ಸಾವಿರಕ್ಕೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.

ಗಾಜಾದ ಜನರು ಮತ್ತೆ ಯುದ್ಧ ಆರಂಭವಾಗುವ ಭಯದಲ್ಲಿದ್ದಾರೆ. “ನಾವು ವಿಶ್ರಾಂತಿ ಬಯಸುತ್ತೇವೆ, ಆದರೆ ಯುದ್ಧ ಮತ್ತೆ ಶುರುವಾಗಬಹುದು ಎಂಬ ಭಯವಿದೆ” ಎಂದು 60 ವರ್ಷದ ನಾಗರಿರೊಬ್ಬರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಗಾಜಾ ಕದನ ವಿರಾಮಕ್ಕೆ ಅಪಾಯ ಇಲ್ಲ: ಡೊನಾಲ್ಡ್ ಟ್ರಂಪ್

ಗಾಜಾ ಕದನ ವಿರಾಮಕ್ಕೆ ಯಾವುದೇ ಅಪಾಯ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. ಗಾಜಾ ಮೇಲೆ ಕೂಡಲೇ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆದೇಶ ಹೊರಡಿಸಿದ್ದರು. ಈ ಕುರಿತು ಏರ್‌ಪೋರ್ಸ್ ಒನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ‘ಗಾಜಾ ಒಪ್ಪಂದಕ್ಕೆ ಅಪಾಯವಿಲ್ಲ. ಒಂದು ವೇಳೆ ಇಸ್ರೇಲ್ ಸೈನಿಕರು ಮೃತಪಟ್ಟಿದ್ದರೆ ಪ್ರತಿದಾಳಿ ನಡೆಸಬೇಕು’ ಎಂದು ಹೇಳಿದ್ದಾರೆ. ತನ್ನ ಸೇನೆಯ ಮೇಲೆ ದಾಳಿ ಮಾಡಿದ ಹಮಾಸ್, ಕದನ ವಿರಾಮ ನಿಯಮವನ್ನು ಉಲ್ಲಂಘಿಸಿದೆ ಎಂದು ಇಸ್ರೇಲ್ ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ಗಾಜಾ ಮೇಲೆ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...