ಅತಿದೊಡ್ಡ ತೈಲ ಟ್ಯಾಂಕರ್‌ಗಳು ವಿಶ್ವದ ಅತ್ಯುತ್ತಮ ತೈಲ ತುಂಬಲು ಅಮೆರಿಕಕ್ಕೆ ಬರುತ್ತಿವೆ: ಡೊನಾಲ್ಡ್ ಟ್ರಂಪ್

Date:

ವಿಶ್ವದ ಇತರೆ ದೇಶಗಳ ಅತಿದೊಡ್ಡ ತೈಲ ಟ್ಯಾಂಕರ್‌ಗಳು ಅಮೆರಿಕದ ‘ಅತ್ಯುತ್ತಮ ಮತ್ತು ಸಿಹಿಯಾದ’ ತೈಲವನ್ನು ತುಂಬಿಸಿಕೊಳ್ಳಲು ಅಮೆರಿಕದತ್ತ ಬರುತ್ತಿವೆ. ಬರಿದಾದ ಟ್ಯಾಂಕರ್‌ಗಳು ನಮ್ಮ ಉತ್ತಮ ತೈಲವನ್ನು ತುಂಬಿಸಿಕೊಳ್ಳಲು ಕಾಯುತ್ತಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

- Advertisement -

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಾರಣದಿಂದಾಗಿ ವಿಶ್ವದಾದ್ಯಂತ ತೈಲ ಬಿಕ್ಕಟ್ಟು ಉಂಟಾಗಿದೆ. ಇರಾನ್ ಮೇಲೆ ಇಸ್ರೇಲ್ ಜತೆ ಸೇರಿ ದಾಳಿ ನಡೆಸಿದ ಅಮೆರಿಕಕ್ಕೂ ಈ ಬಿಸಿ ತಟ್ಟಿದೆ ಎಂಬ ವರದಿಗಳಿವೆ. ಆದರೆ ಟ್ರಂಪ್ ಮಾತ್ರ ತಮ್ಮಲ್ಲಿ ಬೇಕಾದಷ್ಟು ತೈಲ ನಿಕ್ಷೇಪಗಳಿವೆ ಎಂದು ಹೇಳಿಕೊಂಡಿರುವ ಮಾತ್ರವಲ್ಲದೆ ಇತರೆ ದೇಶಗಳ ಟ್ಯಾಂಕರ್‌ಗಳು ಕೂಡ ನಮ್ಮ ಉತ್ತಮ ತೈಲಕ್ಕಾಗಿ ಕಾಯುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಅಮೆರಿಕ-ಇರಾನ್ ಕದನ ವಿರಾಮದಲ್ಲಿ ಚೀನಾ ಪಾತ್ರ!

ಅಮೆರಿಕದಲ್ಲಿ ಯಾವುದೇ ತೈಲ ಕೊರತೆ ಇಲ್ಲ ಎಂದು ಹೇಳಿದ ಡೊನಾಲ್ಡ್ ಟ್ರಂಪ್, “ಅಮೆರಿಕವು ವಿಶ್ವದ ಮುಂದಿನ ಎರಡು ದೊಡ್ಡ ತೈಲ ಆರ್ಥಿಕತೆಗಳನ್ನು ಒಟ್ಟುಗೂಡಿಸಿದರೂ ಅವರಿಗಿಂತ ಹೆಚ್ಚಿನ ತೈಲ ಸಂಗ್ರಹವನ್ನು ಹೊಂದಿದೆ ಮತ್ತು ಅದು ಉತ್ತಮ ಗುಣಮಟ್ಟದ್ದಾಗಿದೆ” ಎಂದು ಸಾಮಾಜಿಕ ಜಾಲತಾಣ ಟ್ರೂತ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಧ್ಯಪ್ರಾಚ್ಯದ ಪ್ರಸ್ತುತ ಸಂಘರ್ಷದಲ್ಲಿ, ಮುಖ್ಯವಾಗಿ ಅಮೆರಿಕ ಮತ್ತು ಇರಾನ್ ನಡುವೆ, ಪಾಕಿಸ್ತಾನವು ಪ್ರಮುಖ ಮಧ್ಯವರ್ತಿಯಾಗಿದೆ. ಸದ್ಯ ಏಪ್ರಿಲ್ 8ರಿಂದ ಜಾರಿಗೆ ಬಂದಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮಾತುಕತೆ ನಡೆಸಿದ ಬಳಿಕ ಈ ಒಪ್ಪಂದವಾಗಿದೆ. ಇದೀಗ ಇರಾನ್ ಮತ್ತು ಅಮೆರಿಕದ ನಡುವಿನ ಮುಂದಿನ ಹಂತದ ಶಾಂತಿ ಮಾತುಕತೆಗಳು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿವೆ. ಈ ನಡುವೆ ಡೊನಾಲ್ಡ್ ಟ್ರಂಪ್ ಹೇಳಿಕೆ ಹೊರಬಿದ್ದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...