ಐಎಂಎಫ್‌ ಹುದ್ದೆ ತೊರೆದ ಕರ್ನಾಟಕ ಮೂಲದ ಗೀತಾ ಗೋಪಿನಾಥ್‌

Date:

ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಕರ್ನಾಟಕ ಮೂಲದ ಅಮೆರಿಕನ್‌ ಗೀತಾ ಗೋಪಿನಾಥ್‌ ಅವರು ತಮ್ಮ ಹುದ್ದೆ ತ್ಯಜಿಸಿದ್ದು, ಪುನಃ ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವುದಾಗಿ ಹೇಳಿದ್ದಾರೆ.

- Advertisement -

ಐಎಂಎಫ್‌ನಲ್ಲಿ ಅದ್ಭುತವಾದ ಏಳು ವರ್ಷಗಳನ್ನು ಕಳೆದಿದ್ದೇನೆ. ಇದೀಗ ನನ್ನ ಶೈಕ್ಷಣಿಕ ವೃತ್ತಿಗೆ ಮರಳಲು ನಿರ್ಧರಿಸಿದ್ದೇನೆ’ ಎಂದು ಅವರು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಐಎಂಎಫ್‌ ಇತಿಹಾಸದಲ್ಲಿ ಮೊದಲ ಮಹಿಳಾ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕಾರ್ಯನಿರ್ವಹಿಸಿರುವ ಅವರು, ಸೆಪ್ಟೆಂಬರ್‌ 1ರಿಂದ ಹಾರ್ವರ್ಡ್‌ ವಿವಿಯ ಅರ್ಥಶಾಸ್ತ್ರ ವಿಭಾಗಕ್ಕೆ ಮರಳಲಿದ್ದಾರೆ.

‘ಐಎಂಎಫ್‌ನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಮತ್ತು ಮೊದಲ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದೇನೆ. ಇದು ನನ್ನ ಜೀವಮಾನದಲ್ಲಿ ದೊರೆತ ಅತ್ಯುತ್ತಮ ಅವಕಾಶ. ಅದಕ್ಕಾಗಿ ನಾನು ಐಎಂಎಫ್‌ಗೆ ಕೃತಜ್ಞಳಾಗಿರುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿವೇಶನ ಎಂದಾಕ್ಷಣ ಹೆದರಿ ಓಡುವ ಪ್ರಧಾನಿ ಮೋದಿ

‘ನಾನು ಶೈಕ್ಷಣಿಕ ಕ್ಷೇತ್ರದಲ್ಲಿನ ನನ್ನ ಬೇರುಗಳಿರುವೆಡೆ ಮರಳಲಿದ್ದೇನೆ. ಜಾಗತಿಕ ಸವಾಲುಗಳನ್ನು ಎದುರಿಸಲು ಅಂತರರಾಷ್ಟ್ರೀಯ ಹಣಕಾಸು ಮತ್ತು ಸಮಗ್ರ ಅರ್ಥಶಾಸ್ತ್ರದಲ್ಲಿ ಸಂಶೋಧನೆ ಮುಂದುವರಿಸಲು ಬಯಸಿದ್ದೇನೆ. ಅಲ್ಲದೆ ಮುಂದಿನ ಪೀಳಿಗೆಯ ಅರ್ಥಶಾಸ್ತ್ರಜ್ಞರಿಗೆ ತರಬೇತಿ ನೀಡುವ ಬಯಕೆ ಇದೆ’ ಎಂದು ಅವರು ಹೇಳಿದ್ದಾರೆ.

ಗೀತಾ ಅವರು ಐಎಂಎಫ್‌ನ ಮುಖ್ಯ ಅರ್ಥಶಾಸ್ತ್ರಜ್ಞರಾಗಿ2019ರ ಜನವರಿಯಲ್ಲಿ ನೇಮಕಗೊಂಡರು. 2022ರ ಜನವರಿಯಲ್ಲಿ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಬಡ್ತಿ ಪಡೆದರು. ಅದಕ್ಕೂ ಮುನ್ನ ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಮತ್ತು ಶಿಕಾಗೊ ವಿಶ್ವವಿದ್ಯಾಲಯದ ‘ಬೂತ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌’ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ್ದರು.

ಗೀತಾ ಗೋಪಿನಾಥ್‌ ಅವರು ಮೂಲತಃ ಮೈಸೂರಿನವರಾಗಿದ್ದು, ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರೈಸಿದ್ದಾರೆ. ಆನಂತರ ದೆಹಲಿ ವಿವಿಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ಉತ್ತರ ಪ್ರದೇಶ ಚುನಾವಣೆ: ಯಾವುದೇ ಪಕ್ಷ ಸೇರದೆ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತೇನೆ: ಮಾಜಿ ಐಎಎಸ್ ದಿವ್ಯಾ ಮಿತ್ತಲ್

ಇತ್ತೀಚೆಗೆ, ತಮ್ಮ ಆಡಳಿತಾತ್ಮಕ ಸೇವೆಯ (ಐಎಎಸ್‌) ಹುದ್ದೆಗೆ ರಾಜೀನಾಮೆ ನೀಡಿದ್ದ ಉತ್ತರ...

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...