ಇಂಗ್ಲೆಂಡ್‌ | ಸಿಖ್‌ ಯುವತಿಗೆ ಅತ್ಯಾಚಾರವೆಸಗಿ ನಿನ್ನ ದೇಶಕ್ಕೆ ಮರಳು ಎಂದ ದುರುಳರು

Date:

ಇಂಗ್ಲೆಂಡ್‌ನ ಓಲ್ಡ್‌ಬರಿಯ ಬಳಿಯ ಉದ್ಯಾನವನವೊಂದರಲ್ಲಿ ಸೆ.9 ರಂದು 20ರ ವರ್ಷದ ಸಿಖ್ ಯುವತಿಯೊಬ್ಬರ ಮೇಲೆ ಇಬ್ಬರು ಅಪರಿಚಿತರು ಅತ್ಯಾಚಾರವೆಸಗಿದ ಘಟನೆ ನಡೆದಿದೆ.

- Advertisement -

ಅತ್ಯಾಚಾರವೆಸಗುವ ಸಂದರ್ಭದಲ್ಲಿ ಆರೋಪಿಗಳು “ನಿನ್ನ ದೇಶಕ್ಕೆ ಹಿಂತಿರುಗು” ಎಂದು ಜನಾಂಗೀಯವಾಗಿ ಅವಮಾನಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಈ ಘಟನೆಯನ್ನು ಜನಾಂಗೀಯ ದ್ವೇಷದಿಂದ ಕೂಡಿದ ಅಪರಾಧವೆಂದು ಪರಿಗಣಿಸಿ, ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಆರೋಪಿಗಳಿಬ್ಬರೂ ಶ್ವೇತವರ್ಣದವರಾಗಿದ್ದಾರೆ ಎಂದು ವಿವರಿಸಲಾಗಿದೆ. ಪೊಲೀಸರು ಈ ಪ್ರದೇಶದ ಸಿಸಿಟಿವಿ, ಡ್ಯಾಶ್‌ಕ್ಯಾಮ್ ಅಥವಾ ಮೊಬೈಲ್ ದೃಶ್ಯಗಳನ್ನು ಸಂಗ್ರಹಿಸಲು ಮನವಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

“ಇದೊಂದು ಭೀಕರ ದಾಳಿಯಾಗಿದ್ದು, ಈ ಇಬ್ಬರು ಆರೋಪಿಗಳನ್ನು ನೋಡಿದವರು ಅಥವಾ ಯಾವುದೇ ದೃಶ್ಯ ಹೊಂದಿರುವವರು ತಕ್ಷಣ ನಮ್ಮನ್ನು ಸಂಪರ್ಕಿಸಬೇಕು” ಎಂದು ವೆಸ್ಟ್ ಮಿಡ್‌ಲ್ಯಾಂಡ್ಸ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯಿಂದ ಸಿಖ್ ಸಮುದಾಯದಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ. ಇತ್ತೀಚಿನ ತಿಂಗಳುಗಳಲ್ಲಿ ಜನಾಂಗೀಯ ದ್ವೇಷದ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಸಮುದಾಯ ವರದಿಗಳನ್ನು ಮಾಡಿದೆ.

ಲೇಬರ್ ಸಂಸದೆ ಪ್ರೀತ್ ಕೌರ್ ಗಿಲ್ ಈ ದಾಳಿಯನ್ನು ಖಂಡಿಸಿದ್ದು, ಇದನ್ನು “ತೀವ್ರ ಹಿಂಸಾಚಾರ ಮತ್ತು ಜನಾಂಗೀಯ ದ್ವೇಷದ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರು ಘಟನೆ ನಡೆದ ಪ್ರದೇಶದಲ್ಲಿ ಗಸ್ತು ತೀವ್ರಗೊಳಿಸಿದ್ದು, ಸಂತ್ರಸ್ತೆಗೆ ವಿಶೇಷ ಸಹಾಯವನ್ನು ಒದಗಿಸಲಾಗುತ್ತಿದೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...