ಪಾಕಿಸ್ತಾನ | ಅರೆಸೈನಿಕ ಪಡೆ ಪ್ರಧಾನ ಕಚೇರಿಯ ಮೇಲೆ ದಾಳಿ; ಮೂವರ ಸಾವು

Date:

ಪೇಶಾವರದಲ್ಲಿರುವ ಪಾಕಿಸ್ತಾನದ ಅರೆಸೈನಿಕ ಪಡೆ ಪ್ರಧಾನ ಕಚೇರಿಯ ಮೇಲೆ ಸೋಮವಾರ ಬಂದೂಕುಧಾರಿಗಳು ದಾಳಿ ನಡೆಸಿದ್ದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಕಾನ್‌ಸ್ಟಾಬ್ಯುಲರಿ ಪ್ಯಾರಾಮಿಲಿಟರಿ ಪಡೆಯ ಪ್ರಧಾನ ಕಚೇರಿಯಾದ ರಕ್ಷಣಾ ಸಂಕೀರ್ಣದ ಮೇಲೆಯೂ ಇಬ್ಬರು ಆತ್ಮಹತ್ಯಾ ಬಾಂಬರ್‌ಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೊದಲ ಆತ್ಮಹತ್ಯಾ ಬಾಂಬರ್ ಕಾನ್‌ಸ್ಟಾಬ್ಯುಲರಿಯ ಮುಖ್ಯ ದ್ವಾರದ ಮೇಲೆ ದಾಳಿ ನಡೆಸಿದರೆ, ಇನ್ನೋರ್ವ ಬಾಂಬರ್ ಆವರಣವನ್ನು ಪ್ರವೇಶಿಸಿದ್ದಾನೆ ಎಂದು ಹೇಳಲಾಗಿದೆ. ಸೇನಾ ಪಡೆಯ ಪ್ರಧಾನ ಕಚೇರಿಯು ಹೆಚ್ಚು ಜನದಟ್ಟಣೆ ಇರುವ ಪ್ರದೇಶದಲ್ಲಿದೆ. ಮಿಲಿಟರಿ ಕಂಟೋನ್ಮೆಂಟ್‌ಗೆ ಹತ್ತಿರದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಪಾಕಿಸ್ತಾನ | ಬಲೂಚಿಸ್ತಾನದಲ್ಲಿ ಬಾಂಬ್ ದಾಳಿ: 10 ಮಂದಿ ಸಾವು

“ಸದ್ಯ ಸೇನೆ ಮತ್ತು ಪೊಲೀಸರು ಸೇರಿದಂತೆ ಅಧಿಕಾರಿಗಳು ಪ್ರದೇಶವನ್ನು ಸುತ್ತುವರೆದಿದ್ದಾರೆ. ಪ್ರಧಾನ ಕಚೇರಿಯೊಳಗೆ ಕೆಲವು ಭಯೋತ್ಪಾದಕರು ಇದ್ದಾರೆ ಎಂಬ ಅನುಮಾನವಿದೆ. ಆದ್ದರಿಂದ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ನಿರ್ವಹಿಸಲಾಗುತ್ತಿದೆ” ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸದ್ಯ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನಿರಾಕರಿಸಲಾಗಿದೆ. ಹಾಗೆಯೇ ಈ ದಾಳಿಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ವಿಡಿಯೋಗಳು ಹರಿದಾಡುತ್ತಿವೆ. ಕೆಲವೆಡೆ ಸ್ಫೋಟವೂ ಕೇಳಿಬಂದಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನದ ಭದ್ರತಾ ಸಿಬ್ಬಂದಿಗಳು ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿಯಲ್ಲಿ ತೊಡಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ವಿಡಿಯೋ ನಿಜವಾಗಿಯೂ ಆ ಸ್ಥಳಕ್ಕೆ ಸೇರಿದ್ದೆ ಎಂಬುದು ಖಚಿತವಾಗಿ ತಿಳಿದುಬಂದಿಲ್ಲ.

ಇನ್ನು ಈ ವರ್ಷದ ಆರಂಭದಲ್ಲಿ ಕ್ವೆಟ್ಟಾದಲ್ಲಿರುವ ಅರೆಸೈನಿಕ ಪ್ರಧಾನ ಕಚೇರಿಯ ಹೊರಗೆ ಕಾರು ಬಾಂಬ್ ಸ್ಫೋಟಗೊಂಡಿದ್ದು, ಕನಿಷ್ಠ ಹತ್ತು ಮಂದಿ ಸಾವನ್ನಪ್ಪಿದ್ದರು ಮತ್ತು ಹಲವು ಮಂದಿ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಂಗಳೊಳಗೆ ಜಾರಿಯಾಗಲಿದೆ ಭಾರತ–ನ್ಯೂಜಿಲೆಂಡ್ FTA: ಏನಿದು ‘ಫ್ರೀ ಟ್ರೇಡ್ ಅಗ್ರಿಮೆಂಟ್‌’?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ‘ಮುಕ್ತ ವ್ಯಾಪಾರ ಒಪ್ಪಂದ’ (Free Trade...

ರಷ್ಯಾ ಮೇಲಿನ ನಿರ್ಬಂಧ ಮಸೂದೆಗೆ ಟ್ರಂಪ್ ಸಹಿ: ಭಾರತಕ್ಕೆ ಶೇ. 100ರಷ್ಟು ಸುಂಕದ ಭೀತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾ ಮೇಲಿನ ನೂತನ ನಿರ್ಬಂಧ...

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಆತ್ಮಾಹುತಿ ದಾಳಿ: 16 ಮಂದಿ ಸಾವು

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೊಹಾಟ್ ಜಿಲ್ಲೆಯ ಹಳೆಯ ಪೊಲೀಸ್...

ಲಕ್ಷ ಶತಾಯುಷಿಗಳ ದೇಶ ಜಪಾನ್! ದೀರ್ಘಾಯಸ್ಸಿನ ಗುಟ್ಟೇನು?

ಬದುಕಿನ ಇಳಿಜಾರಿನಲ್ಲೂ ಯೌವನದ ಉತ್ಸಾಹ, ನೂರು ವರ್ಷವಾದರೂ ಕುಗ್ಗದ ಆರೋಗ್ಯ... ಇದು...