ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

Date:

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.

- Advertisement -

ದಾಖಲೆಯ ಮಳೆಯಿಂದಾಗಿ ವಿಮಾನಗಳ ವಿಳಂಬ ಅಥವಾ ಮಾರ್ಗ ಬದಲಾವಣೆ ಮಾಡಲಾಗಿದ್ದು ಕಾರುಗಳು ಜಲಾವೃತಗೊಂಡ ರಸ್ತೆಗಳಲ್ಲಿ ಸಿಲುಕಿಕೊಂಡಿವೆ. ದುಬೈ ವಿಮಾನ ನಿಲ್ದಾಣಕ್ಕೆ ತೀರಾ ಅಗತ್ಯವಿರದ ಹೊರತು ಬರದಂತೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ವಿಮಾನಗಳು ವಿಳಂಬವಾಗುತ್ತಿವೆ ಮತ್ತು ಮಾರ್ಗ ಬದಲಾವಣೆ ಮಾಡಲಾಗುತ್ತಿದೆ. ನಾವು ಅತ್ಯಂತ ಸವಾಲಿನ ಪರಿಸ್ಥಿತಿಗಳಲ್ಲಿ ಸಾಧ್ಯವಾದಷ್ಟು ಬೇಗ ಕಾರ್ಯಾಚರಣೆಯನ್ನು ಆರಂಭಿಸಲು ಶ್ರಮಿಸುತ್ತಿದ್ದೇವೆ” ಎಂದು ದುಬೈ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?   ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಹವಾಮಾನ ಇಲಾಖೆಯು ಇಂದು ಹೆಚ್ಚಿನ ಮಳೆ ಮತ್ತು ಚಂಡಮಾರುತ ಮುನ್ಸೂಚನೆಯನ್ನು ನೀಡಿದೆ. ಈ ನಿಟ್ಟಿನಲ್ಲಿ 500ಕ್ಕೂ ಹೆಚ್ಚು ದುಬೈಗೆ ಬರುವ ಮತ್ತು ದುಬೈನಿಂದ ಹೊರಹೋಗುವ ವಿಮಾನಗಳ ಮಾರ್ಗ ಬದಲಾವಣೆ, ವಿಳಂಬ ಅಥವಾ ರದ್ದು ಮಾಡಲಾಗಿದೆ. ದುಬೈಗೆ ತೆರಳುವ ಸುಮಾರು 15 ವಿಮಾನಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದು, ಭಾರತಕ್ಕೆ ಬರುವ 13 ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ದುಬೈನ ಪ್ರಮುಖ ಎಮಿರೇಟ್ಸ್ ಏರ್‌ಲೈನ್ ದುಬೈನಲ್ಲಿ ಪ್ರಯಾಣಿಕರಿಗೆ ಎಲ್ಲಾ ಚೆಕ್-ಇನ್‌ಗಳನ್ನು ಒಂದು ದಿನಕ್ಕೆ ಸ್ಥಗಿತಗೊಳಿಸುವುದಾಗಿ ಹೇಳಿದೆ. “ನಮ್ಮ ನಿಗದಿತ ಕಾರ್ಯಾಚರಣೆಗಳನ್ನು ಪುನಃಸ್ಥಾಪಿಸಲು ಎಮಿರೇಟ್ಸ್ ಶ್ರಮಿಸುತ್ತಿದೆ ಮತ್ತು ನಮ್ಮ ತಂಡಗಳು ತೊಂದರೆಗೊಳಗಾದ ಗ್ರಾಹಕರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸುತ್ತವೆ” ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ದುಬೈ ಮಾಲ್ ಮತ್ತು ಮಾಲ್ ಆಫ್ ಎಮಿರೇಟ್ಸ್ ಎರಡೂ ಪ್ರವಾಹದಲ್ಲಿ ಸಿಲುಕಿದ್ದು, ಮೆಟ್ರೋ ನಿಲ್ದಾಣಗಳು ಜಲಾವೃತವಾಗಿದೆ. “ರೆಡ್ ಮತ್ತು ಗ್ರೀನ್ ಲೈನ್‌ಗಳಲ್ಲಿನ ನಿಲ್ದಾಣಗಳಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಪ್ರಸ್ತುತ ನಿರ್ದಿಷ್ಟ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಚಂಡಮಾರುತದ ಪ್ರಭಾವ ದುಬೈನ ಆಚೆಗೂ ವಿಸ್ತರಿಸಿದ್ದು ಇಡೀ ಯುಎಇ ಮತ್ತು ನೆರೆಯ ಬಹ್ರೇನ್‌ನಲ್ಲಿ ಪ್ರವಾಹ ಉಂಟಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಒಮಾನ್‌ನಲ್ಲಿ ಮಕ್ಕಳು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...