ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತದಲ್ಲಿ ಪತನ

Date:

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ಭಾನುವಾರ ಪತನಗೊಂಡಿದೆ ಎಂದು ಇರಾನ್ ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದ್ದಾರೆ. ಪ್ರಸ್ತುತ ರಕ್ಷಣ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತಲುಪಲು ಹೆಣಗಾಡುತ್ತಿದ್ದಾರೆ ಎಂದು ವರದಿಯಾಗಿದೆ.

- Advertisement -

ಇರಾನ್‌ನ ವಾಯುವ್ಯದಲ್ಲಿರುವ ಅಜೆರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂತಿರುಗುವಾಗ ಹೆಲಿಕಾಪ್ಟರ್ ಅಪಘಾತ ಸಂಭವಿಸಿದ್ದು ಪ್ರಸ್ತುತ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೆನ್ ಅಮಿರಾಬ್ಡೊಲ್ಲಾಹಿಯಾನ್ ಅವರ ಜೀವ ಅಪಾಯದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ?  ಹೆಲಿಕಾಪ್ಟರ್ ಹತ್ತುವಾಗ ಎಡವಿ ಬಿದ್ದು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಗಾಯ

“ನಾವು ಇನ್ನೂ ಭರವಸೆಯಲ್ಲಿದ್ದೇವೆ. ಆದರೆ ಅಪಘಾತ ನಡೆದ ಸ್ಥಳದಿಂದ ಬಂದ ಮಾಹಿತಿಯು ಆಘಾತಕಾರಿಯಾಗಿದೆ” ಎಂದು ಅಧಿಕಾರಿಯೊಬ್ಬರು ರಾಯಿಟರ್ಸ್‌ಗೆ ತಿಳಿಸಿದರು. ಕನಿಷ್ಠ ಒಬ್ಬ ಪ್ರಯಾಣಿಕ ಮತ್ತು ಒಬ್ಬ ಸಿಬ್ಬಂದಿ ರಕ್ಷಣಾ ಸಿಬ್ಬಂದಿಗಳ ಸಂಪರ್ಕ ಮಾಡಿದ್ದಾರೆ ಎಂದು ಸ್ಟೇಟ್ ಟಿವಿ ವರದಿ ಮಾಡಿದೆ. ಆದರೆ ಇರಾನ್‌ನ ರೆಡ್ ಕ್ರೆಸೆಂಟ್ ಈ ವರದಿಯನ್ನು ನಿರಾಕರಿಸಿದರೂ ಹೆಲಿಕಾಪ್ಟರ್ ಪತ್ತೆಯಾಗಿದೆ ಎಂದು ಹೇಳಿದೆ.

ಯುಎಸ್ ನಿರ್ಮಿತ ಬೆಲ್ 212 ಹೆಲಿಕಾಪ್ಟರ್‌ನಲ್ಲಿ ರೈಸಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಇರಾನ್ ಸೈನ್ಯದ ಮುಖ್ಯಸ್ಥರು ಸೈನ್ಯದ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಗಾರ್ಡ್‌ಗಳನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿಗಾಗಿ ಪ್ರಾರ್ಥಿಸಲು ಎಲ್ಲಾ ನಿಯಮಿತ ಕಾರ್ಯಕ್ರಮಗಳನ್ನು ಮಾಧ್ಯಮಗಳು ನಿಲ್ಲಿಸಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...