ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ, ವಿದೇಶಾಂಗ ಸಚಿವ ನಿಧನ

Date:

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಭಾರೀ ಮಂಜಿನಿಂದ ಪರ್ವತ ಪ್ರದೇಶದಲ್ಲಿ ಪತನಗೊಂಡಿದ್ದು ರೈಸಿ ಮತ್ತು ವಿದೇಶಾಂಗ ಸಚಿವರು ನಿಧನರಾಗಿದ್ದಾರೆ ಎಂದು ಘೋಷಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಸುಮಾರು 12 ಗಂಟೆಗಳ ನಂತರ ಸೋಮವಾರ ಬೆಳಿಗ್ಗೆ ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾಗಿದೆ. ಆದರೆ ಯಾವುದೇ ವ್ಯಕ್ತಿ ಜೀವಂತವಾಗಿರುವ ಕುರುಹು ಸಿಕ್ಕಿಲ್ಲ, ವಿಮಾನ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ನ ವಾಯುವ್ಯದಲ್ಲಿರುವ ಅಜೆರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂತಿರುಗುವಾಗ ಗಡಿಯಲ್ಲಿರುವ ಜೋಲ್ಫಾ ನಗರದ ಬಳಿ ಹೆಲಿಕಾಪ್ಟರ್ ಅಪಘಾತ ಸಂಭವಿಸಿದೆ. ಯುಎಸ್ ನಿರ್ಮಿತ ಬೆಲ್ 212 ಹೆಲಿಕಾಪ್ಟರ್‌ನಲ್ಲಿ ರೈಸಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.


ಇದನ್ನು ಓದಿದ್ದೀರಾ? ಇರಾನ್ ಅಧ್ಯಕ್ಷ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪರ್ವತದಲ್ಲಿ ಪತನ

ಇರಾನ್ ಸೈನ್ಯದ ಮುಖ್ಯಸ್ಥರು ಸೈನ್ಯದ ಎಲ್ಲಾ ಸಂಪನ್ಮೂಲಗಳನ್ನು ಮತ್ತು ಗಾರ್ಡ್‌ಗಳನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿದ್ದರು. ಸ್ಥಳೀಯ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನಲ್ಲಿ ಒಂಬತ್ತು ಜನರು ಇದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಶುಕ್ರವಾರದ ಪ್ರಾರ್ಥನೆ ನಡೆಸುವ ಇಮಾಮ್ ಮೊಹಮ್ಮದ್ ಅಲಿ ಅಲಿಹಾಶೆಮ್, ಪೈಲಟ್, ಕಾಪಿಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಸಿಬ್ಬಂದಿ ಮತ್ತು ಇನ್ನೋರ್ವ ಅಂಗರಕ್ಷಕ ಹೆಲಿಕಾಪ್ಟರ್‌ನಲ್ಲಿ ಇದ್ದರು ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೆಕ್ಕಾಗೆ ಹಜ್ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ಬಿಸಿಲಾಘಾತದಿಂದ ಸಾವು

ಮೆಕ್ಕಾಗೆ ಈ ವರ್ಷ ಹಜ್‌ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ತೀವ್ರ...

ನಿಜ್ಜಾರ್ ಸಾವಿಗೆ ಕೆನಡಾ ಸಂಸತ್‌ನಲ್ಲಿ ಮೌನಾಚರಣೆ: ಭಾರತ ಆಕ್ರೋಶ

ಖಲಿಸ್ತಾನಿ ಉಗ್ರಗಾಮಿ ಹರ್‌ದೀಪ್‌ ಸಿಂಗ್‌ ನಿಜ್ಜರ್ ಸಾವಿನ ಮೊದಲ ವರ್ಷದ ನೆನಪಿಗಾಗಿ...

ಮಾಲ್ಡೀವ್ಸ್‌| ಸೇತುವೆ ದುರಸ್ತಿ ವೇಳೆ ಭಾರತೀಯ ಕಾರ್ಮಿಕ ಸಾವು; ಎರಡು ತಿಂಗಳಲ್ಲಿ 2ನೇ ಪ್ರಕರಣ

ಮಾಲ್ಡೀವ್ಸ್‌ನ ರಾಜಧಾನಿಯಲ್ಲಿನ ಪ್ರಮುಖ ಸೇತುವೆ ದುರಸ್ತಿ ಸಮಯದಲ್ಲಿ ಕುಸಿದುಬಿದ್ದ ಭಾರತೀಯ ಕಾರ್ಮಿಕರೊಬ್ಬರು...

ಹ್ಯಾಕ್ ಆಗುವ ಸಾಧ್ಯತೆ; ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದ ಎಲಾನ್‌ ಮಸ್ಕ್‌

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನ ಮಾಲೀಕ ಎಲಾನ್‌ ಮಸ್ಕ್‌, ಕೃತಕ ಬುದ್ಧಿಮತ್ತೆ(ಎಐ) ಅಥವಾ...