ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆಯು ತಿಖಿಸಿದೆ.
ಶುಕ್ರವಾರ ರಾತ್ರಿಯಿಂದ 64 ವರ್ಷದ ನಸ್ರಲ್ಲಾ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹಿಜ್ಬುಲ್ಲಾ ಸಂಸ್ಥೆಯು ತಿಳಿಸಿರುವುದಾಗಿ ಎಎಫ್‌ಪಿ ವರದಿ ಮಾಡಿದೆ.
“ಹಸನ್ ನಸ್ರಲ್ಲಾ ಅವರು ನಿಧನರಾಗಿದ್ದಾರೆ” ಎಂದು ಇಸ್ರೇಲ್ ಸೇನೆಯ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಶಾನಿ ಎಕ್ಸ್‌ನಲ್ಲಿ ಘೋಷಿಸಿದ್ದಾರೆ.
ಇನ್ನು “ಹಸನ್ ನಸ್ರಲ್ಲಾ ಅವರು ಇನ್ನು ಮುಂದೆ ಜಗತ್ತನ್ನು ಭಯಭೀತಗೊಳಿಸಲು ಸಾಧ್ಯವಾಗುವುದಿಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಪೇಜರ್ ಅಂದರೇನು, ಏಕಕಾಲದಲ್ಲಿ ಸ್ಫೋಟಗೊಂಡಿದ್ದೇಕೆ?
ಇಸ್ರೇಲ್‌ನ ಮೇಲೆ ರಾಕೆಟ್ ದಾಳಿಯ ಬಳಿಕ ಪೂರ್ವ ಮತ್ತು ದಕ್ಷಿಣ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ತಾಣವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ. ಹಲವಾರು ವಸತಿ ಕಟ್ಟಡಗಳನ್ನು ನೆಲಸಮಗೊಳಿಸಿದೆ.
“ಇದು ಅಂತ್ಯವೇನಲ್ಲ. ಸಂದೇಶ ಸರಳವಾಗಿದೆ. ಇಸ್ರೇಲ್ ನಾಗರಿಕರನ್ನು ಬೆದರಿಸುವ ಯಾರಾದರೂ ಆಗಿರಲಿ ಅವರನ್ನು ಹೇಗೆ ತಲುಪಬೇಕು ಎಂದು ನಮಗೆ ತಿಳಿದಿದೆ” ಎಂದು ಲೆಫ್ಟಿನೆಂಟ್ ಜನರಲ್ ಹೆರ್ಜಿ ಹಲೆವಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉತ್ತರ ಇಸ್ರೇಲ್‌ಗೆ ರಾಕೆಟ್ ದಾಳಿ ನಡೆಸಿದ ಹೊಣೆಯನ್ನು ಹಿಜ್ಬುಲ್ಲಾ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಪ್ರತೀಕಾರದ ದಾಳಿ ನಡೆದಿದೆ.
Hassan Nasrallah will no longer be able to terrorize the world.
— Israel Defense Forces (@IDF) September 28, 2024
