ಅಮೆರಿಕ | ಮಗನಿಗೆ ಅಚ್ಚೆ ಹಾಕಿದ್ದಕ್ಕೆ ದೇವಸ್ಥಾನದ ವಿರುದ್ಧ 10 ಲಕ್ಷ ಡಾಲರ್ ದಾವೆ

Date:

ತಮ್ಮ 11 ವರ್ಷದ ಮಗನಿಗೆ ಕಬ್ಬಿಣದ ಕಾದ ಸಲಾಕೆಯಿಂದ ಅಚ್ಚೆ ಹಾಕಿದ ದೇವಸ್ಥಾನದ ಮಂಡಳಿಯ ವಿರುದ್ಧ ಭಾರತೀಯ ಮೂಲದ ವ್ಯಕ್ತಿಯೊಬ್ಬರು10 ಲಕ್ಷ ಡಾಲರ್ ಪರಿಹಾರ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವ ಘಟನೆ ಅಮೆರಿಕ ದ ಹ್ಯೂಸ್ಟನ್‌ ನಗರದಲ್ಲಿ ನಡೆದಿದೆ.

- Advertisement -

ಫೋರ್ಟ್ ಬೆಂಡ್‌ ಕೌಂಟಿ ನಗರ ವಾಸಿಯಾದ ವಿಜಯ್‌ ಚೆರುವು ಅವರು, ತಮ್ಮ ಪುತ್ರನಿಗೆ ಕಳೆದ ವರ್ಷ ಆಗಸ್ಟ್‌ನಲ್ಲಿ ಟಾಕ್ಸಸ್‌ನ ಶುಗರ್‌ಲ್ಯಾಂಡ್‌ನ ಅಷ್ಟಲಕ್ಷ್ಮಿ ಹಿಂದೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಹಾಗೂ ತಮ್ಮ ಮಗನ ಅನುಮತಿಯನ್ನು ಪಡೆಯದೆ ಕಾದ ಕಬ್ಬಿಣದ ಸಲಾಕೆಯಿಂದ ಅಚ್ಚೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಅಚ್ಚೆಯಿಂದಾಗಿ ತಮ್ಮ ಮಗ ತುಂಬ ನೋವಿನಿಂದ ಬಳಲುತ್ತಿದ್ದು, ಶಾಶ್ವತ ಕಲೆ ಉಂಟಾಗಿದೆ ಎಂದು ಕೋರ್ಟಿನಲ್ಲಿ ಸಲ್ಲಿಸಿರುವ ದಾವೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

ಈ ನಷ್ಟವನ್ನು ತುಂಬಿಕೊಡುವ ಸಲುವಾಗಿ ದೇವಸ್ಥಾನ ಹಾಗೂ ಅದರ ಪೋಷಕ ಮಂಡಳಿಯ ವಿರುದ್ಧ ಚೆರುವು ಅವರು ನ್ಯಾಯಾಲಯದಲ್ಲಿ 10 ಲಕ್ಷ ಡಾಲರ್ ದಾವೆ ಹೂಡಿದ್ದಾರೆ.

“ನನಗೆ ಇದರಿಂದ ಆಘಾತ ಉಂಟಾಯಿತು. ಈ ಘಟನೆಯನ್ನು ಹೇಗೆ ನಿರ್ವಹಿಸುವುದೆಂದು ನನಗೆ ಗೊತ್ತಿರಲಿಲ್ಲ. ನನ್ನ ಮೊದಲ ಕಾಳಜಿ ನನ್ನ ಮಗನ ಆರೋಗ್ಯವನ್ನು ನೋಡಿಕೊಳ್ಳುವುದಾಗಿದೆ” ಎಂದು ಚೆರುವು ತಿಳಿಸಿದ್ದಾರೆ.

ಅಚ್ಚೆ ಹಾಕಿದ್ದರಿಂದ ಬಾಲಕನ ಎರಡು ಕೈಗಳಿಗೆ ತೀವ್ರ ಹಾನಿಯಾಗಿ ಶಾಶ್ವತ ಕಲೆಯುಂಟಾಗಿದೆ. ನಂತರದ ದಿನಗಳಲ್ಲಿ ಸೋಂಕು ಹೆಚ್ಚಾಗಿದೆ. ಬಾಲಕ ತಮ್ಮ ತಾಯಿಯ ಜೊತೆ ದೇವಸ್ಥಾನಕ್ಕೆ ಹೋಗಿದ್ದ ಸಂದರ್ಭದಲ್ಲಿ ಯಾರಿಗೂ ತಿಳಿಸದಂತೆ ಅಚ್ಚೆ ಹಾಕಲಾಗಿದೆ ಎಂದು ಚೆರುವು ಅವರ ವಕೀಲರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...