ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

Date:

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ ಸಾಗಾಣಿಕೆಯ ಅತ್ಯಂತ ಪ್ರಮುಖ ಸಮುದ್ರ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯನ್ನು ಮತ್ತೆ ತೆರೆಯುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

- Advertisement -

ಕಳೆದ ಐದಾರು ತಿಂಗಳುಗಳಿಂದ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಮಿಲಿಟರಿ ಸಂಘರ್ಷಗಳು ನಡೆಯುತ್ತಿವೆ. ತನ್ನ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಗೆ ಪ್ರತಿಕಾರವಾಗಿ, ಜಾಗತಿಕ ಇಂಧನ ಪೂರೈಕೆಯಲ್ಲು 20%ರಷ್ಟು ವಹಿವಾಟು ನಡೆಯುವ ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನ ಸಂಚಾರವನ್ನು ಇರಾನ್ ನಿರ್ಬಂಧಿಸಿದೆ. ತನ್ನ ಪ್ರಮುಖ ಷರತ್ತುಗಳನ್ನು ಅಮೆರಿಕ ಒಪ್ಪಿಕೊಳ್ಳುವವರೆಗೆ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಳೆದ ಜೂನ್ ತಿಂಗಳ ‘ಇಸ್ಲಾಮಾಬಾದ್ ಒಪ್ಪಂದ’ದಂತೆ ನಿಗದಿಪಡಿಸಲಾದ ಏಳು ಪ್ರಮುಖ ಶರತ್ತುಗಳನ್ನು ಅಮೆರಿಕ ಮತ್ತು ಅದರ ಮಿತ್ರಪಡೆಗಳು ಸಂಪೂರ್ಣವಾಗಿ ಜಾರಿಗೊಳಿಸಬೇಕು ಎಂದು ಇರಾನ್ ಒತ್ತಾಯಿಸಿದೆ. ಈ ಬೇಡಿಕೆಗಳಲ್ಲಿ ಇರಾನ್ ಮೇಲಿನ ಆರ್ಥಿಕ ನಿರ್ಬಂಧಗಳನ್ನು ತೆರವುಗೊಳಿಸುವುದು, ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನವನ್ನು ಹಿಂಪಡೆಯುವುದು, ಸ್ಥಗಿತಗೊಳಿಸಲಾದ ಇರಾನ್‌ನ ಆಸ್ತಿಗಳನ್ನು ಮುಕ್ತಗೊಳಿಸುವುದು, ಅಮೆರಿಕನ್ ಪಡೆಗಳ ಹಿಂತೆಗೆತ ಹಾಗೂ ಇರಾನ್ ಹಡಗುಗಳ ಸ್ವತಂತ್ರ ನೌಕಾಯಾನಕ್ಕೆ ಪೂರ್ಣ ರಕ್ಷಣೆ ನೀಡಬೇಕು ಎಂಬುದು ಸೇರಿವೆ.

ಇತ್ತೀಚೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು ಕತಾರ್ ಮಧ್ಯಸ್ಥಿಕೆಯಲ್ಲಿ ಜಲಸಂಧಿಯನ್ನು ಹಂತ-ಹಂತವಾಗಿ ತೆರೆಯಲು ಏಳು ದಿನಗಳ ಮಾರ್ಗಸೂಚಿಯನ್ನು ಪ್ರಸ್ತಾಪಿಸಿದ್ದರು. ಆದರೆ, ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳು ಇರಾನ್‌ನ ಪ್ರಮುಖ ಆರ್ಥಿಕ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಜಲಸಂಧಿಯ ನಿರ್ಬಂಧ ತೆರವು ಪ್ರಕ್ರಿಯೆಯು ನನೆಗುದಿಗೆ ಬಿದ್ದಿದೆ.

Advertisements

ಹಾರ್ಮುಜ್ ಜಲಸಂಧಿಯನ್ನು ಸುಧೀರ್ಘ ಕಾಲ ಮುಚ್ಚಿಡುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಮತ್ತು  LNG ಅಭಾವ ಸೃಷ್ಟಿಯಾಗಲಿದ್ದು, ಜಾಗತಿಕ ತೈಲ ಬೆಲೆಗಳಲ್ಲಿ ತೀವ್ರ ಏರಿಕೆ ಮತ್ತು ಆರ್ಥಿಕ ಬಿಕ್ಕಟ್ಟಿನ ಭೀತಿ ಎದುರಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...