ಭಾರತಕ್ಕೆ ಹಾರ್ಮುಜ್ ಜಲಸಂಧಿ ಮುಕ್ತ: 5 ಸ್ನೇಹಿ ರಾಷ್ಟ್ರಗಳಿಗೆ ದಿಗ್ಬಂಧನವಿಲ್ಲ ಎಂದ ಇರಾನ್

Date:

ಮಧ್ಯಪ್ರಾಚ್ಯದಲ್ಲಿ ತೀವ್ರಗೊಳ್ಳುತ್ತಿರುವ ಯುದ್ಧ ಮತ್ತು ಸಂಘರ್ಷದ ನಡುವೆಯೂ, ಹಾರ್ಮುಜ್ ಜಲಸಂಧಿಯಲ್ಲಿ ಭಾರತ ಸೇರಿದಂತೆ ಐದು ‘ಸ್ನೇಹಿ ರಾಷ್ಟ್ರಗಳ’ ಹಡಗುಗಳ ಮೇಲೆ ಯಾವುದೇ ರೀತಿಯ ದಿಗ್ಬಂಧನ ವಿಧಿಸುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಭಾರತದ ಜೊತೆಗೆ ರಷ್ಯಾ, ಚೀನಾ, ಪಾಕಿಸ್ತಾನ ಮತ್ತು ಇರಾಕ್ ದೇಶಗಳ ಹಡಗುಗಳಿಗೆ ಈ ಸಂಘರ್ಷ ಪೀಡಿತ ಆಯಕಟ್ಟಿನ ಜಲಮಾರ್ಗದಲ್ಲಿ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -

ಇರಾನ್‌ನ ಸರ್ಕಾರಿ ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ , “ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ. ಇರಾನ್‌ನೊಂದಿಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿರುವ ಹಲವು ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಈಗಲೂ ಮುಕ್ತ ಅವಕಾಶ ಕಲ್ಪಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರಾಯಿಟರ್ಸ್ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ ಅರಘ್ಚಿ ಅವರು, “ಹಲವು ಹಡಗು ಮಾಲೀಕರು ಅಥವಾ ಈ ಹಡಗುಗಳನ್ನು ಹೊಂದಿರುವ ದೇಶಗಳು ನಮ್ಮನ್ನು ಸಂಪರ್ಕಿಸಿ, ಜಲಸಂಧಿಯ ಮೂಲಕ ತಮ್ಮ ಸುರಕ್ಷಿತ ಸಂಚಾರವನ್ನು ಖಚಿತಪಡಿಸುವಂತೆ ವಿನಂತಿಸಿದ್ದಾರೆ. ನಾವು ‘ಸ್ನೇಹಿ’ ಎಂದು ಪರಿಗಣಿಸುವ ಕೆಲವು ದೇಶಗಳಿಗೆ ಅಥವಾ ಬೇರೆ ನಿರ್ದಿಷ್ಟ ಕಾರಣಗಳಿಗಾಗಿ ನಾವು ನಿರ್ಧರಿಸಿದ ಸಂದರ್ಭಗಳಲ್ಲಿ, ನಮ್ಮ ಸಶಸ್ತ್ರ ಪಡೆಗಳು ಅವರಿಗೆ ಸುರಕ್ಷಿತ ಮಾರ್ಗವನ್ನು ಒದಗಿಸಿವೆ,” ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ಅಸ್ಸಾಂ ವಿಧಾನಸಭಾ ಚುನಾವಣೆ: ಪಕ್ಷಾಂತರಿಗಳಿಗೆ ಪಾಠ ಕಲಿಸುತ್ತಾರೆಯೇ ಮತದಾರರು?

“ನೀವು ಈಗಾಗಲೇ ಸುದ್ದಿಗಳಲ್ಲಿ ನೋಡಿದ್ದೀರಿ: ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತ. ಕೆಲವು ದಿನಗಳ ಹಿಂದಷ್ಟೇ ಭಾರತದ ಎರಡು ಹಡಗುಗಳು, ಕೆಲವು ಇತರ ದೇಶಗಳು ಮತ್ತು ಬಾಂಗ್ಲಾದೇಶದ ಹಡಗುಗಳು ಸಹ ಹಾದುಹೋಗಿವೆ ಎಂದು ನಾನು ಭಾವಿಸುತ್ತೇನೆ. ಈ ದೇಶಗಳು ನಮ್ಮೊಂದಿಗೆ ಮಾತನಾಡಿ ಸಮನ್ವಯ ಸಾಧಿಸಿವೆ. ಯುದ್ಧದ ನಂತರವೂ ಭವಿಷ್ಯದಲ್ಲಿ ಈ ವ್ಯವಸ್ಥೆ ಮುಂದುವರಿಯಲಿದೆ,” ಎಂದು ಅವರು ಭರವಸೆ ನೀಡಿದರು.

ಶತ್ರು ರಾಷ್ಟ್ರಗಳಿಗೆ ಪ್ರವೇಶವಿಲ್ಲ
ಪ್ರಸ್ತುತ ನಡೆಯುತ್ತಿರುವ ಮಧ್ಯಪ್ರಾಚ್ಯ ಸಂಘರ್ಷದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಮೆರಿಕ, ಇಸ್ರೇಲ್ ಮತ್ತು ಕೆಲವು ಕೊಲ್ಲಿ ರಾಷ್ಟ್ರಗಳ ಹಡಗುಗಳಿಗೆ ಈ ಯುದ್ಧ ಪೀಡಿತ ಜಲಸಂಧಿಯ ಮೂಲಕ ಹಾದುಹೋಗಲು ಯಾವುದೇ ಹಸಿರು ನಿಶಾನೆ ನೀಡುವುದಿಲ್ಲ ಎಂದು ಅವರು ಕಡ್ಡಿಮುರಿದಂತೆ ಸ್ಪಷ್ಟಪಡಿಸಿದ್ದಾರೆ.

ಶತ್ರು ರಾಷ್ಟ್ರಗಳ ಹಡಗುಗಳ ಬಗ್ಗೆ ಪ್ರಸ್ತಾಪಿಸಿದ ಅರಘ್ಚಿ, “ನಾವು ಯುದ್ಧದ ಸ್ಥಿತಿಯಲ್ಲಿದ್ದೇವೆ. ಈ ಪ್ರದೇಶವು ಈಗ ಯುದ್ಧ ವಲಯವಾಗಿದೆ. ಹೀಗಿರುವಾಗ ನಮ್ಮ ಶತ್ರುಗಳು ಮತ್ತು ಅವರ ಮಿತ್ರರಾಷ್ಟ್ರಗಳ ಹಡಗುಗಳು ಇಲ್ಲಿ ಹಾದುಹೋಗಲು ಅನುಮತಿಸಲು ಯಾವುದೇ ಕಾರಣಗಳಿಲ್ಲ. ಆದರೆ ಇತರ ರಾಷ್ಟ್ರಗಳಿಗೆ ಈ ಮಾರ್ಗ ಮುಕ್ತವಾಗಿದೆ,” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...