ಅಮೆರಿಕದಲ್ಲಿ ಭೀಕರ ಅಪಘಾತ; ಹೈದರಾಬಾದ್ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

Date:

Advertisements

ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಎಲ್ಲ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ ಮಾಡಿ ಡಾಲಸ್​ನಲ್ಲಿರುವ ತಮ್ಮ ನಿವಾಸಕ್ಕೆ ಮರಳುತ್ತಿರುವಾಗ, ಮಾರ್ಗಮಧ್ಯೆ ಶನಿವಾರ ರಾತ್ರಿ ಈ ಅಪಘಾತ ಸಂಭವಿಸಿದೆ.

ವೆಂಕಟ್ ಬೇಜುಗಮ್, ಅವರ ಪತ್ನಿ ತೇಜಸ್ವಿನಿ ಚೊಲ್ಲೇತಿ ಹಾಗೂ ಅವರ ಇಬ್ಬರು ಮಕ್ಕಳಾದ ಸಿದ್ಧಾರ್ಥ್ ಮತ್ತು ಮೃದಾ ಬೇಜುಗಮ್ ಮೃತ ನಾಲ್ವರು.

ಗ್ರೀನ್ ಕೌಂಟಿ ಬಳಿ ಈ ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಮಿನಿ ಟ್ರಕ್​​ವೊಂದು ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಬಂದು ಇವರ ಕಾರಿಗೆ ಗುದ್ದಿದೆ. ಇದರ ಪರಿಣಾಮವಾಗಿ ಕಾರು ನಜ್ಜುಗುಜ್ಜಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ನಾಲ್ವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

ತೀವ್ರವಾಗಿ ದೇಹ ಸುಟ್ಟಿರುವುದರಿಂದ ಮೇಲ್ನೋಟಕ್ಕೆ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಡಿಎನ್​​ಎ ಪರೀಕ್ಷೆ ಸೇರಿದಂತೆ ಫೋರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಾಲ್ವರ ಗುರುತು ಖಚಿತವಾದ ಬಳಿಕ ಸಂಬಂಧಿಕರಿಗೆ ಮೃತದೇಹಗಳನ್ನು ಒಪ್ಪಿಸುವ ಸಾಧ್ಯತೆ ಇದೆ.

ವೆಂಕಟ್ ಬೇಜುಗಮ್ ಕುಟುಂಬದವರು ಡಾಲಸ್​ನ ಔಬ್ರೇ ಪಟ್ಟಣದ ಸಟ್ಟನ್ ಫೀಲ್ಡ್ಸ್ ಎಂಬಲ್ಲಿ ವಾಸವಿದ್ದದರು. ಟೀಮ್ ಏಡ್ ಎನ್ನುವ ಸಮಾಜ ಸೇವಾ ಸಂಸ್ಥೆಯು ಮೃತ ಕುಟುಂಬದ ಸಂಬಂಧಿಕರ ನೆರವಿಗೆ ಧಾವಿಸಿದ್ದು, ಮೃತದೇಹಗಳನ್ನು ಹಿಂಪಡೆಯುವ ಕಾನೂನು ಕ್ರಮಗಳಲ್ಲಿ ಸಹಾಯವಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X