WWE ದಂತಕಥೆ ಹಲ್ಕ್ ಹೊಗನ್ ಹೃದಯಾಘಾತದಿಂದ ನಿಧನ

Date:

ವಿಶ್ವಪ್ರಸಿದ್ಧ WWE ಕುಸ್ತಿಪಟು ಹಲ್ಕ್ ಹೊಗನ್ (71) ಗುರುವಾರ ಬೆಳಗ್ಗೆ ಅಮೆರಿಕದ ಫ್ಲೋರಿಡಾದ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕುತ್ತಿಗೆ ಮತ್ತು ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೇ ತಿಂಗಳಲ್ಲಿ ಕುತ್ತಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕೆಲ ದಿನಗಳಿಂದ ಕೋಮಾದಲ್ಲಿದ್ದ ಹೊಗನ್, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

- Advertisement -

ಆಗಸ್ಟ್ 11, 1953ರಂದು ಅಮೆರಿಕದ ಜಾರ್ಜಿಯಾದಲ್ಲಿ ಜನಿಸಿದ ಹಲ್ಕ್ ಹೊಗನ್, 1980 ಮತ್ತು 1990ರ ದಶಕದಲ್ಲಿ ವೃತ್ತಿಪರ ಕುಸ್ತಿಯ ಸೂಪರ್‌ಸ್ಟಾರ್ ಆಗಿ ಮಿಂಚಿದ್ದರು. ಹ್ಯಾಂಡಲ್‌ಬಾರ್ ಮೀಸೆ, ಹಳದಿ ಕನ್ನಡಕ ಮತ್ತು “ಹಲ್ಕಮೇನಿಯಾ” ಘೋಷಣೆಯಿಂದ ಜನಮನ ಗೆದ್ದಿದ್ದ ಅವರು ಆರು ಬಾರಿ WWE ಚಾಂಪಿಯನ್ ಆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಕುಸ್ತಿಯನ್ನು ಜನಪ್ರಿಯಗೊಳಿಸುವಲ್ಲಿ ಅವರ ವಿಚಿತ್ರ ವರ್ತನೆ ಮತ್ತು ನಾಟಕೀಯ ಅಭಿನಯ ಮಕ್ಕಳು, ಕುಟುಂಬಗಳ ಸೇರಿದಂತೆ ಲಕ್ಷಾಂತರ ಅಭಿಮಾನಿಗಳನ್ನು ಸೆಳೆಯಿತು. ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳಲ್ಲಿಯೂ ಅವರು ಗುರುತಿಸಿಕೊಂಡಿದ್ದರು.

ಹಲ್ಕ್ ಹೊಗನ್ ಅವರನ್ನು ಮೊದಲು 2005 ರಲ್ಲಿ WWE ಹಾಲ್ ಆಫ್ ಫೇಮ್‌ಗೆ ಸೇರಿಸಲಾಗಿತ್ತು. 2015ರಲ್ಲಿ Gawker ಮಾಧ್ಯಮ ಸಂಸ್ಥೆಯಿಂದ ಸೆಕ್ಸ್‌ ಟೇಪ್‌ ಮತ್ತು ಜನಾಂಗೀಯ ಹೇಳಿಕೆ ಆರೋಪದಿಂದ ವಿವಾದಕ್ಕೆ ಸಿಲುಕಿದ್ದರು. ಇದರಿಂದಾಗಿ ಅವರ ಹೆಸರನ್ನು ಹಾಲ್ ಆಫ್ ಫೇಮ್‌ನಿಂದ ತೆಗೆದುಹಾಕಲಾಗಿತ್ತು. ಆದರೆ, Gawker ವಿರುದ್ಧ ಕಾನೂನು ಹೋರಾಟದಲ್ಲಿ ಗೆದ್ದ ಹೊಗನ್ ಭಾರೀ ಪರಿಹಾರ ಪಡೆದರು. ಈ ಪ್ರಕರಣದಿಂದ Gawker ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಲ್ಲಿ 7 ತೀವ್ರತೆಯ ಭೂಕಂಪ; ಜಪಾನ್‌ನಲ್ಲಿ 9.9 ತೀವ್ರತೆಯ ತಪ್ಪು ಎಚ್ಚರಿಕೆ!

ರಷ್ಯಾದ ದೂರಪ್ರಾಚ್ಯದ ಕಮ್ಚಟ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.0 ತೀವ್ರತೆಯ ಭೂಕಂಪ...

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...