ನನ್ನ ಅಧಿಕಾರಾವಧಿಯನ್ನು ಇತಿಹಾಸ ಹೇಗೆ ನಿರ್ಣಯಿಸಬಹುದು ಎಂಬ ಆತಂಕವಿದೆ: ಸಿಜೆಐ ಚಂದ್ರಚೂಡ್

Date:

ಸುಪ್ರೀಂ ಕೋರ್ಟ್‌ನ ಮುಖ್ಉ ನ್ಯಾಯಮೂರ್ತಿಯಾಗಿರುವ ಡಿ.ವೈ ಚಂದ್ರಚೂಡ್ ಅವರು ಇನ್ನೊಂದು ತಿಂಗಳಲ್ಲಿ ನಿವೃತ್ತರಾಗಲಿದ್ದಾರೆ. ಚುನಾವಣಾ ಬಾಂಡ್, ಒಳಮೀಸಲಾತಿ ವಿಚಾರದಲ್ಲಿ ಅವರು ನೀಡಿರುವ ತೀರ್ಪು ದೇಶದ ಗಮನ ಸೆಳೆದಿದೆ. ಅಲ್ಲದೆ, ಗಣಪತಿ ಪೂಜೆಗಾಗಿ ತಮ್ಮ ನಿವಾಸಕ್ಕೆ ಪ್ರಧಾನಿ ಮೋದಿ ಅವರನ್ನು ಕರೆಸಿಕೊಂಡಿದ್ದಕ್ಕಾಗಿ ಟೀಕೆಗೂ ಗುರಿಯಾಗಿದ್ದಾರೆ. ಇದೀಗ, ಅವರು ತಮ್ಮ ಅಧಿಕಾರಾವಧಿಯ ಬಗ್ಗೆ ಮಾತನಾಡಿದ್ದು, ಮುಂದಿನ ಇತಿಹಾಸದಲ್ಲಿ ತಮ್ಮ ಅಧಿಕಾರಾವಧಿಯನ್ನು ದೇಶವು ಯಾವ ರೀತಿ ನೋಡುಬಹುದು ಎಂಬ ಬಗ್ಗೆ ಆತಂಕ ಇರುವುದಾಗಿ ಹೇಳಿಕೊಂಡಿದ್ದಾರೆ.

- Advertisement -

ಭೂತಾನ್‌ನ ಪಾರೋದಲ್ಲಿ ಜೆಎಸ್‌ಡಬ್ಲ್ಯೂ ಕಾನೂನು ಶಾಲೆಯ ಘಟಿಕೋತ್ಸವದಲ್ಲಿ ಭಾಗಿಯಾಗಿ ಅವರು ಮಾತನಾಡಿದ್ದಾರೆ. “ಮುಖ್ಯ ನ್ಯಾಯಮೂರ್ತಿಯಾಗಿ ನನ್ನ ದೇಶಕ್ಕೆ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ಅಧಿಕಾರಾವಧಿಯು ನವೆಂಬರ್‌ನಲ್ಲಿ ಅಂತ್ಯಗೊಳ್ಳಲಿದೆ. ಭಾರತದಲ್ಲಿ ನಾನು ಮಾಡಬೇಕಾದ ಎಲ್ಲವನ್ನೂ ನಾನು ಸಾಧಿಸಿದ್ದೇನೆಯೇ? ನ್ಯಾಯಾಧೀಶರು ಮತ್ತು ಕಾನೂನು ವೃತ್ತಿಪರರನ್ನು ಒಳಗೊಂಡ ಭವಿಷ್ಯದ ಪೀಳಿಗೆಗೆ ನಾನು ಯಾವ ಪರಂಪರೆ ಬಿಟ್ಟು ಹೋಗುತ್ತಿರುವೆ ಎಂಬ ಬಗ್ಗೆ ಚಿಂತಿಸುತ್ತಿದ್ದೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಭಾರತಕ್ಕಾಗಿ ಅತ್ಯಂತ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದೇನೆ ಎಂಬುದು ನನಗೆ ತೃಪ್ತಿ ನೀಡಿದೆ. ಅದರೊಂದಿಗೆ ಸಮಾಧಾನ ಹುಡುಕಿಕೊಳ್ಳುತ್ತಿದ್ದೇನೆ. ಆದರೂ, ನನ್ನಲ್ಲಿ ಹುಟ್ಟುತ್ತಿರುವ ಹಲವು ಪ್ರಶ್ನೆಗಳಿಗೆ ಉತ್ತರಗಳು ನನ್ನ ನಿಯಂತ್ರಣದಲ್ಲಿಲ್ಲ. ಈ ಕೆಲವು ಪ್ರಶ್ನೆಗಳಿಗೆ ನಾನು ಎಂದಿಗೂ ಉತ್ತರಗಳನ್ನು ಕಂಡುಕೊಳ್ಳುವುದಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...