ನಾನು ಜೀವಂತವಾಗಿ ಮರಳದೇ ಇರಬಹುದು: ಜೈಲಿನಿಂದಲೇ ಪಾಕ್ ಸುಪ್ರೀಂ ನ್ಯಾಯಮೂರ್ತಿಗಳಿಗೆ ಇಮ್ರಾನ್ ಖಾನ್ ಪತ್ರ!

Date:

ಪಾಕಿಸ್ತಾನದ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಬಂಧಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ತಮ್ಮ ಹದಗೆಡುತ್ತಿರುವ ಆರೋಗ್ಯ ಸ್ಥಿತಿಯ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. “ಈ ನಿರಂತರ ಒತ್ತಡವು ನನ್ನನ್ನು ಜೀವಂತವಾಗಿ ಮರಳಲು ಸಾಧ್ಯವಾಗದ ಸ್ಥಿತಿಗೆ ಕೊಂಡೊಯ್ಯುತ್ತಿದೆ” ಎಂದು ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

- Advertisement -

74 ವರ್ಷ ವಯಸ್ಸಿನ ಇಮ್ರಾನ್ ಖಾನ್, ತಮಗೆ ಬ್ರೈನ್ ಹ್ಯಾಮರೇಜ್ (ಮೆದುಳಿನಲ್ಲಿ ರಕ್ತಸ್ರಾವ) ಮತ್ತು ಹೃದಯ ಸ್ತಂಭನ ಸಂಭವಿಸುವ ಅಪಾಯ ಹೆಚ್ಚಿದೆ ಎಂದು ವೈದ್ಯರು ಎಚ್ಚರಿಸಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ನಾನು ಜೀವಂತವಾಗಿದ್ದರೆ ಮಾತ್ರ ನನ್ನ ನಿರಪರಾಧಿತ್ವವನ್ನು ಸಾಬೀತುಪಡಿಸಲು ಸಾಧ್ಯ. ತಡವಾಗುವ ಮುನ್ನ ಮಾನವೀಯತೆಯ ಆಧಾರದ ಮೇಲೆ ನನಗೆ ನ್ಯಾಯ ಒದಗಿಸಿ” ಎಂದು ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಇದನ್ನೂ ಓದಿ: ಇಮ್ರಾನ್ ಖಾನ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸಿ: ಪಾಕ್‌ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ತಮ್ಮ ವಕೀಲರಾದ ಬ್ಯಾರಿಸ್ಟರ್ ಸಲ್ಮಾನ್ ಸಫ್ದರ್ ಅವರ ಮೂಲಕ ನ್ಯಾಯಾಂಗಕ್ಕೆ ಈ ಪತ್ರವನ್ನು ತಲುಪಿಸಲಾಗಿದೆ. ಜೈಲಿನಲ್ಲಿ ದಿನಕ್ಕೆ 22 ಗಂಟೆಗಳ ಕಾಲ ತಮ್ಮನ್ನು ಏಕಾಂತ ಬಂಧನದಲ್ಲಿ ಇರಿಸಲಾಗಿದೆ ಎಂದು ಖಾನ್ ಆರೋಪಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಮತ್ತು ವಕೀಲರ ಭೇಟಿಗೆ ನಿರ್ಬಂಧ ಹೇರಲಾಗಿದ್ದು, ಸರಿಯಾದ ವೈದ್ಯಕೀಯ ಚಿಕಿತ್ಸೆಯನ್ನು ನಿರಾಕರಿಸಲಾಗುತ್ತಿದೆ ಎಂದು ದೂರಿದ್ದಾರೆ.

ಜೈಲಿನಲ್ಲಿರುವ ತಮ್ಮ ಪತ್ನಿ ಬುಶ್ರಾ ಬೀಬಿ ಅವರ ಆರೋಗ್ಯವೂ ಹದಗೆಟ್ಟಿದ್ದು, ಅವರಿಗೂ ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಸುಪ್ರೀಂ ಕೋರ್ಟ್‌ನ ಈ ಹಿಂದಿನ ಆದೇಶಗಳನ್ನು ಜಾರಿಗೊಳಿಸುವಂತೆ ಇಮ್ರಾನ್ ಖಾನ್ ಕೋರಿದ್ದಾರೆ. ಇನ್ನು ಇತ್ತೀಚೆಗಷ್ಟೇ ಬುಶ್ರಾ ಬೀಬಿ ಅವರು ದೃಷ್ಟಿ ಕಳೆದುಕೊಳ್ಳುವ ಭೀತಿಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಇಸ್ಲಾಮಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು.

2022ರ ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ನಂತರ, ಇಮ್ರಾನ್ ಖಾನ್ ಅವರ ವಿರುದ್ಧ ಭ್ರಷ್ಟಾಚಾರ, ಸರ್ಕಾರಿ ರಹಸ್ಯಗಳ ಸೋರಿಕೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಸೇರಿದಂತೆ 180ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ.

ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲದಿಂದ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರಿಗೆ ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಕಳೆದ ವಾರವಷ್ಟೇ ಅವರನ್ನು ಕಣ್ಣಿನ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಮತ್ತೆ ಅಡಿಯಾಲ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಖಾನ್ ಬರೆದಿರುವ ಪತ್ರ ಪಾಕಿಸ್ತಾನದ ರಾಜಕೀಯ ಮತ್ತು ನ್ಯಾಯಾಂಗ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...