ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಮಧ್ಯಪ್ರಾಚ್ಯವನ್ನೇ ನಾಶಪಡಿಸುತ್ತಿತ್ತು: ಟ್ರಂಪ್

Date:

ಒಂದು ವೇಳೆ ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಪರಿಸ್ಥಿತಿ ಅತ್ಯಂತ ಭೀಕರವಾಗುತ್ತಿತ್ತು. ಅದು ಇಸ್ರೇಲ್‌ ಮತ್ತು ಮಧ್ಯಪ್ರಾಚ್ಯವನ್ನೇ ನಾಶಪಡಿಸುತ್ತಿತ್ತು. ಆದರೆ ಇರಾನ್‌ಗೆ ಪರಮಾಣು ಅಸ್ತ್ರ ಹೊಂದುವ ಅವಕಾಶವನ್ನು ತಮ್ಮ ಆಡಳಿತ ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

- Advertisement -

ಡಲ್ಲಾಸ್‌ನಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ಮಧ್ಯಂತರ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಟ್ರಂಪ್, ಇರಾನ್ ವಿರುದ್ಧದ ಸಂಘರ್ಷಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರದ ಬಗ್ಗೆ ಯಾವುದೇ ವಿಷಾದವಿಲ್ಲ ಎಂದು ಹೇಳಿದ್ದಾರೆ. ಇದೇ ಪರಿಸ್ಥಿತಿ ಮತ್ತೊಮ್ಮೆ ಎದುರಾದರೂ ತಾವು ಕೈಗೊಂಡ ಕ್ರಮವನ್ನೇ ಮತ್ತೆ ಕೈಗೊಳ್ಳುವುದಾಗಿ ಪುನರುಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲೂ ಇದೇ ನಿಲುವನ್ನು ವ್ಯಕ್ತಪಡಿಸಿರುವ ಟ್ರಂಪ್, ಇರಾನ್‌ನ ಪರಮಾಣು ಸಾಮರ್ಥ್ಯವನ್ನು ಗುರಿಯಾಗಿಸಿಕೊಂಡು ಕೈಗೊಂಡ ಕ್ರಮ ಅಮೆರಿಕದ ಭದ್ರತೆಯ ದೃಷ್ಟಿಯಿಂದ ಅಗತ್ಯವಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ. ಇರಾನ್ ಬಳಿ ಪರಮಾಣು ಅಸ್ತ್ರವಿದ್ದಿದ್ದರೆ ಅದು ಇಸ್ರೇಲ್ ಮೇಲೆ ದಾಳಿ ನಡೆಸುವುದರ ಜತೆಗೆ ಇಡೀ ಮಧ್ಯಪ್ರಾಚ್ಯವನ್ನೇ ಅಸ್ಥಿರಗೊಳಿಸಬಹುದಿತ್ತು ಎಂಬುದು ಅವರ ವಾದ.

ಇರಾನ್ ತನ್ನ ಪರಮಾಣು ಸಾಮರ್ಥ್ಯವನ್ನು ಶಸ್ತ್ರಾಸ್ತ್ರ ರೂಪದಲ್ಲಿ ಬಳಸುವ ಸಾಧ್ಯತೆಯಿದೆ ಎಂದು ಆರೋಪಿಸಿರುವ ಟ್ರಂಪ್, ಅಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಡೆಯುವುದು ತಮ್ಮ ಆಡಳಿತದ ಪ್ರಮುಖ ಆದ್ಯತೆಯಾಗಿದೆ. ಇದೇ ಕಾರಣಕ್ಕಾಗಿ ಇರಾನ್‌ನ ಪರಮಾಣು ಸಾಮರ್ಥ್ಯವನ್ನು ದುರ್ಬಲಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ಅಮೆರಿಕದ ದೇಶೀಯ ರಾಜಕೀಯವನ್ನೂ ಇರಾನ್ ವಿಚಾರಕ್ಕೆ ಜೋಡಿಸಿರುವ ಟ್ರಂಪ್, ತಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ಡೆಮಾಕ್ರಾಟ್‌ಗಳು ಇರಾನ್ ಪರಮಾಣು ಅಸ್ತ್ರ ಹೊಂದುವ ವಿಚಾರದಲ್ಲಿ ಮೃದು ನಿಲುವು ತಾಳಬಹುದು ಎಂಬ ಭಾವನೆಯೇ ತಮ್ಮ ವಿರುದ್ಧದ ರಾಜಕೀಯ ವಿರೋಧಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯ ಬಗ್ಗೆ ಮತ್ತೊಮ್ಮೆ ನಿರ್ಧಾರ ಕೈಗೊಳ್ಳುವ ಅವಕಾಶ ಸಿಕ್ಕರೂ ತಮ್ಮ ನಿಲುವು ಬದಲಾಗುವುದಿಲ್ಲ. “ಪಶ್ಚಾತ್ತಾಪ” ಎಂಬ ಪದಕ್ಕೆ ತಾವು ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದು ಹೇಳಿರುವ ಅವರು, ತಮ್ಮ ಆಡಳಿತ ಕೈಗೊಂಡ ಕ್ರಮವನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಸಂಘರ್ಷದ ಪರಿಣಾಮಗಳ ಕುರಿತು ಮಾತನಾಡಿದ ಟ್ರಂಪ್, ಅಮೆರಿಕದ ಷೇರು ಮಾರುಕಟ್ಟೆ ದಾಖಲೆಯ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ತಮ್ಮ ಆಡಳಿತದ ಅವಧಿಯಲ್ಲಿ ಮಾರುಕಟ್ಟೆ ಹಲವು ಬಾರಿ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಸಂಘರ್ಷದ ನಡುವೆಯೂ ಅಮೆರಿಕದ ಆರ್ಥಿಕತೆ ಬಲವಾಗಿ ಮುಂದುವರಿದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್‌ನ ಹೊಸ ರಾಷ್ಟ್ರೀಯವಾದಕ್ಕೆ ನೀರೆರೆದಿದ್ದೇ ಟ್ರಂಪ್‌ನ ಹುಚ್ಚಾಟಗಳು!‌

ಇದಕ್ಕೂ ಮುನ್ನ ಟ್ರಂಪ್, ಹೋರ್ಮುಜ್ ಜಲಸಂಧಿಗೆ ‘ಟ್ರಂಪ್ ಜಲಸಂಧಿ’ ಎಂದು ಮರುನಾಮಕರಣ ಮಾಡುವ ಕುರಿತು ವ್ಯಂಗ್ಯಾತ್ಮಕ ಹೇಳಿಕೆ ನೀಡಿದ್ದರು. ಇರಾನ್ ವಿರುದ್ಧದ ಸಂಘರ್ಷದಲ್ಲಿ ಅಮೆರಿಕ ಗೆಲುವಿನತ್ತ ಸಾಗುತ್ತಿದೆ ಎಂದು ಪ್ರತಿಪಾದಿಸಿರುವ ಅವರು, ಹೋರ್ಮುಜ್ ಜಲಸಂಧಿ ಮತ್ತು ಜಾಗತಿಕ ತೈಲ ಪೂರೈಕೆಯ ವಿಚಾರವನ್ನು ಸಂಘರ್ಷದ ಪ್ರಮುಖ ಆಯಾಮಗಳಾಗಿ ಬಿಂಬಿಸಿದ್ದಾರೆ.

ಹೋರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗಗಳಲ್ಲಿ ಒಂದಾಗಿರುವುದರಿಂದ, ಅದರ ಸುತ್ತಲಿನ ಯಾವುದೇ ಸೇನಾ ಉದ್ವಿಗ್ನತೆ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತ ಟ್ರಂಪ್ ಅವರ ಕಠಿಣ ನಿಲುವು ಹಾಗೂ ಹೋರ್ಮುಜ್ ಕುರಿತ ಅವರ ಹೇಳಿಕೆಗಳು ಮಧ್ಯಪ್ರಾಚ್ಯ ಸಂಘರ್ಷದ ಮುಂದಿನ ಬೆಳವಣಿಗೆಗಳ ಬಗ್ಗೆ ಆತಂಕವನ್ನು ಮತ್ತಷ್ಟು ಹೆಚ್ಚಿಸಿವೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಕುರಿತು...

ಸಶಸ್ತ್ರ ಪಡೆಗಳಿಗೆ 2.12 ಲಕ್ಷ ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರ ಖರೀದಿ: ರಕ್ಷಣಾ ಮಂಡಳಿ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು (DAC)...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ನಾಳೆ ಮತ ಎಣಿಕೆ, ಸಕಲ ಸಿದ್ಧತೆ ಪೂರ್ಣ

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ನಾಳೆ...

ಭದ್ರಾವತಿ | ಜಯಂತಿಗಳ ರಜೆ ರದ್ದುಪಡಿಸಲು ಸರಕಾರದ ಗಮನ ಸೆಳೆಯುವೆ: ಶಾಸಕಿ ಶಾರದಾ ಪುರ್ಯಾನಾಯ್ಕ್

ಉಪನ್ಯಾಸಕರ ಅಭಿಪ್ರಾಯದಂತೆ ದಾರ್ಶನಿಕರ ಹೆಸರಲ್ಲಿ ನೀಡುವ ರಜೆಗಳನ್ನು ರದ್ದು ಪಡಿಸಿ ಶಾಲಾ...