ನೀರು ನಿಲ್ಲಿಸಿದರೆ ನಿಮ್ಮ ಉಸಿರು ನಿಲ್ಲಿಸುತ್ತೇವೆ: ಹಫೀಜ್‌ ಸಯೀದ್‌ ರೀತಿ ಪಾಕ್‌ ಸೇನಾ ವಕ್ತಾರನ ಬೆದರಿಕೆ

Date:

ಸಿಂಧೂ ನದಿ ನೀರು ನಿಲ್ಲಿಸಿದರೆ ನಿಮ್ಮ ಉಸಿರು ನಿಲ್ಲಿಸುತ್ತೇವೆ ಎಂದು ಪಾಕ್‌ ಸೇನೆಯ ವಕ್ತಾರ ಲೆಫ್ಟಿನೆಂಟ್‌ ಜನರಲ್‌ ಅಹಮದ್‌ ಷರೀಫ್‌ ಚೌಧರಿ ಅವರು ಭಯೋತ್ಪಾದಕ ಹಫೀಜ್‌ ಸಯೀದ್‌ ರೀತಿಯಲ್ಲಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

- Advertisement -

ಪಾಕಿಸ್ತಾನದ ವಿಶ್ವವಿದ್ಯಾಲಯವೊಂದರ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತವು ಸಿಂಧೂ ನದಿ ನೀರಿನ ಒಪ್ಪಂದ ಅಮಾನತು ಮಾಡಿರುವ ವಿಚಾರ ಪ್ರಸ್ತಾಪಿಸಿದ್ದಾರೆ. ಈ ವೇಳೆ, ಭಾರತ ನೀರು ನಿಲ್ಲಿಸಿದರೆ, ನಾವು ನಿಮ್ಮ ಉಸಿರನ್ನು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ನಂತರ ನೀರು ಹಂಚಿಕೆ ಒಪ್ಪಂದವನ್ನು ಭಾರತ ಅಮಾನತುಗೊಳಿಸಿತ್ತು. ಭಾರತದ ಈ ಕ್ರಮವನ್ನು ಉಲ್ಲೇಖಿಸಿ, 2008ರ ಮುಂಬೈ ಭಯೋತ್ಪಾದಕ ದಾಳಿಯ ರೂವಾರಿ ಲಷ್ಕರ್-ಎ-ತೈಬಾ ಸಂಸ್ಥಾಪಕ ಹಫೀಜ್ ಸಯೀದ್ ಸಹ ಇದೇ ಹೇಳಿಕೆ ನೀಡಿದ್ದ. ಇದೀಗ ಪಾಕ್‌ ಸೇನಾ ವಕ್ತಾರ ಸಹ ಅದನ್ನೇ ಪುನರುಚ್ಚರಿಸಿದ್ದಾರೆ. ಪಾಕ್‌ ಸೇನಾ ವಕ್ತಾರ ಕಾರ್ಯಕ್ರಮದಲ್ಲಿ ಮಾತಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಏ.23 ರಂದು ಭಾರತ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿತ್ತು. 1960 ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಎರಡು ದೇಶಗಳ ನಡುವೆ ಸಿಂಧೂ ನದಿ ಮತ್ತು ಅದರ ಉಪನದಿಗಳ ಹಂಚಿಕೆಯ ಒಪ್ಪಂದ ನಡೆದಿತ್ತು.

ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ ಒಂಬತ್ತು ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಹಲವು ಉಗ್ರರನ್ನು ಕೊಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...