ಇರಾನ್ ಯುದ್ಧದ ಪ್ರಭಾವ: ರೂಪಾಯಿ ಮೌಲ್ಯ 92 ರೂ.ಗೆ ಕುಸಿತ; 9.7 ಲಕ್ಷ ಕೋಟಿ ರೂ. ನಷ್ಟ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧವು ಆ ರಾಷ್ಟ್ರಗಳ ಮೇಲೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಭಾರೀ ಪರಿಣಾಮ ಬೀರುತ್ತಿದೆ. ಈಗಾಗಲೇ, ತೈಲ ಸೇರಿದಂತೆ ಹಲವು ವಹಿವಾಟುಗಳ ಮೇಲೆ ಗಂಭೀರ ಪ್ರಭಾವ ಬೀರಿದೆ. ಭಾರತಕ್ಕೆ ತೈಲ, ಅಕ್ಕಿ, ಚಹಾ ಉತ್ಪನ್ನಗಳ ರಫ್ತು-ಆಮದು ವ್ಯವಸ್ಥೆಯು ಅಸ್ತವ್ಯಸ್ತವಾಗಿದೆ. ಯುದ್ಧವು ಭಾರತೀಯ ಆರ್ಥಿಕತೆಗೆ ಆಘಾತಕಾರಿ ಹೊಡೆತ ನೀಡಿದ್ದು, ಭಾರತೀಯ ರೂಪಾಯಿ ಮೌಲ್ಯವು ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 92 ರೂ.ಗಳ ಗಡಿ ದಾಟಿದೆ. ಅಲ್ಲದೆ, ಭಾರತೀಯ ಶೇರು ಮಾರುಕಟ್ಟೆಯ ಹೂಡಿಕೆದಾರರು ಸುಮಾರು 9.7 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ.

- Advertisement -

ಬುಧವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು 55 ಪೈಸೆ ಕುಸಿದಿದ್ದು, 92.03 ಮಟ್ಟಕ್ಕೆ ತಲುಪಿದೆ. ಇದು ಈ ಹಿಂದೆ ಜನವರಿ 2026ರಲ್ಲಿ ದಾಖಲಾಗಿದ್ದ 91.99 ಮತ್ತು 92.02ರ ಮಟ್ಟವನ್ನೂ ಮೀರಿದೆ. ಇರಾನ್ ಮೇಲಿನ ಮಿಲಿಟರಿ ದಾಳಿ ಮತ್ತು ತೈಲ ಪೂರೈಕೆಯಲ್ಲಿ ಉಂಟಾಗಬಹುದಾದ ವ್ಯತ್ಯಯದ ಭೀತಿಯಿಂದ ಜಾಗತಿಕ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿರುವುದು ಈ ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಬಿಎಸ್‌ಇ (BSE) ಪಟ್ಟಿಯಲ್ಲಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಮೌಲ್ಯವು ಸೋಮವಾರ 456.17 ಲಕ್ಷ ಕೋಟಿ ರೂ. ಇತ್ತು. ಅದು ಕೇವಲ ಎರಡು ದಿನಗಳಲ್ಲಿ 446.47 ಲಕ್ಷ ಕೋಟಿ ರೂ.ಗೆ ಇಳಿಕೆಯಾಗಿದೆ. 9.7 ಲಕ್ಷ ಕೋಟಿ ರೂ. ನಷ್ಟವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಶೇರು ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 1,710 ಅಂಕಗಳಷ್ಟು ಭಾರಿ ಕುಸಿತ ಕಂಡು 78,529ಕ್ಕೆ ತಲುಪಿದರೆ, ನಿಫ್ಟಿ-50 ಸುಮಾರು 477 ಅಂಕಗಳನ್ನು ಕಳೆದುಕೊಂಡು 24,389ಕ್ಕೆ ಇಳಿದಿದೆ. ಇದು ಕಳೆದ ಏಳು ತಿಂಗಳಲ್ಲಿ ನಿಫ್ಟಿ ಕಂಡ ಅತ್ಯಂತ ಕನಿಷ್ಠ ಮಟ್ಟವಾಗಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ‘ಇರಾನ್ ಜೊತೆಗಿನ ಮಾತುಕತೆಗಳು ಸಫಲವಾಗುವ ಸಾಧ್ಯತೆ ಇಲ್ಲ ಮತ್ತು ಯುದ್ಧವು ಇನ್ನೂ ನಾಲ್ಕೈದು ವಾರಗಳ ಕಾಲ ಮುಂದುವರಿಯಬಹುದು’ ಎಂದು ಎಚ್ಚರಿಸಿದ್ದರಿಂದ ಹೂಡಿಕೆದಾರರಲ್ಲಿ ಭೀತಿ ಹೆಚ್ಚಾಗಿದೆ.

ಈ ಲೇಖನ ಓದಿದ್ದೀರಾ?: ಇರಾನ್ ಇತಿಹಾಸ, ಕಚ್ಚಾತೈಲ ಮತ್ತು ಅಮೆರಿಕದ ಆಟ!

ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ಗಗನಕ್ಕೇರುತ್ತಿವೆ. ಬ್ರೆಂಟ್ ಕ್ರೂಡ್ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 82.53 ಡಾಲರ್‌ಗೆ ತಲುಪಿದೆ. ಭಾರತವು ತನ್ನ ತೈಲ ಅಗತ್ಯದ 85%ರಷ್ಟನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದರಿಂದ, ತೈಲ ಬೆಲೆ ಏರಿಕೆಯು ದೇಶದ ಹಣದುಬ್ಬರ ಮತ್ತು ವ್ಯಾಪಾರ ಕೊರತೆಯ ಮೇಲೆ ನೇರ ಪರಿಣಾಮ ಬೀರಲಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (FII) ದೊಡ್ಡ ಮಟ್ಟದಲ್ಲಿ ಶೇರುಗಳನ್ನು ಮಾರಾಟ ಮಾಡುತ್ತಿರುವುದು ಮಾರುಕಟ್ಟೆಯ ಮೇಲೆ ಒತ್ತಡವನ್ನು ಇನ್ನಷ್ಟು ಹೆಚ್ಚಿಸಿದೆ.

ಎಲ್‌ ಆಂಡ್‌ ಟಿ, ಇಂಡಿಗೋ, ಅದಾನಿ ಪೋರ್ಟ್ಸ್ ಹಾಗೂ ಮಹೀಂದ್ರಾ ರೀತಿಯ ದೊಡ್ಡ ಕಂಪನಿಗಳ ಶೇರುಗಳು 3 ರಿಂದ 6%ರಷ್ಟು ಕುಸಿತ ಕಂಡಿವೆ. ಆದರೂ, ಮಾರುಕಟ್ಟೆ ತಜ್ಞರಾದ ವಿ.ಕೆ. ವಿಜಯಕುಮಾರ್ ಅವರು ಹೂಡಿಕೆದಾರರು ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದ್ದಾರೆ. ದೀರ್ಘಕಾಲದ ಹೂಡಿಕೆದಾರರು ಇಂತಹ ಕುಸಿತದ ಸಂದರ್ಭಗಳನ್ನು ಬಳಸಿಕೊಂಡು ಉತ್ತಮ ಗುಣಮಟ್ಟದ ಶೇರುಗಳನ್ನು ಖರೀದಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...