ದೇಶದ ರಹಸ್ಯ ಸೋರಿಕೆ: ಇಮ್ರಾನ್ ಖಾನ್‌ಗೆ 10 ವರ್ಷ ಜೈಲು

Date:

ದೇಶದ ರಹಸ್ಯಗಳನ್ನು ಸೋರಿಕೆ ಮಾಡಿದ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

- Advertisement -

ಇಮ್ರಾನ್‌ ಖಾನ್‌ ಹಾಗೂ ಪಿಟಿಐ ಪಕ್ಷದ ಉಪಾಧ್ಯಕ್ಷ ಶಾ ಮೊಹಮ್ಮದ್ ಖುರೇಷಿ ಅವರಿಗೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಸೈಪರ್ ಪ್ರಕರಣದಲ್ಲಿ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸೈಪರ್‌ ಪ್ರಕರಣವು ರಾಜತಾಂತ್ರಿಕ ಪ್ರಕರಣಕ್ಕೆ ಸಂಬಂಧಿಸಿದ್ದು, ಇಮ್ರಾನ್‌ ಖಾನ್ ಆಳ್ವಿಕೆಯಲ್ಲಿ ಪ್ರಮುಖ ದಾಖಲೆಗಳು ಕಾಣೆಯಾಗಿದ್ದವು. ತಮ್ಮನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವುದಕ್ಕಾಗಿ ಸೈಪರ್‌ ಪ್ರಕರಣದ ಮೂಲಕ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ ಎಂದು ಇಮ್ರಾನ್ ಖಾನ್‌ ಆರೋಪಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಹಾಗೂ ಖುರೇಷಿ ವಿರುದ್ಧ ಹತ್ತು ಸಾಕ್ಷಿಗಳನ್ನು ದಾಖಲಿಸಿಕೊಳ್ಳಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್‌ನ ತನಿಖಾ ಸಂಸ್ಥೆ ಎಫ್‌ಐಎ ಇಬ್ಬರು ಆರೋಪಿಗಳ ವಿರುದ್ಧ ದೇಶದ ರಾಜತಾಂತ್ರಿಕ ರಹಸ್ಯಗಳನ್ನು ಸೋರಿಕೆ ಮಾಡಿರುವುದಕ್ಕಾಗಿ ಆಗಸ್ಟ್‌ನಲ್ಲಿ ಬಂಧಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಕಳೆದ ಡಿಸೆಂಬರ್‌ನಲ್ಲಿ ಪಾಕ್‌ನ ಸುಪ್ರೀಂ ಕೋರ್ಟ್ ಇಬ್ಬರಿಗೂ ಜಾಮೀನು ನೀಡಿತ್ತು. ಆದಾಗ್ಯೂ ಇಬ್ಬರು ಆರೋಪಿಗಳು ಇತರ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದರು.

2022ರ ಏಪ್ರಿಲ್‌ನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಇಮ್ರಾನ್‌ ಖಾನ್ ಅವರನ್ನು ಪದಚ್ಯುತಗೊಳಿಸಲಾಯಿತು. ತೋಷ್ಕಾನಾ ಪ್ರಕರಣದಲ್ಲಿ 2023ರ ಆಗಸ್ಟ್‌ 5ರಲ್ಲಿ ಇಸ್ಲಾಮಾಬಾದ್ ನ್ಯಾಯಾಲಯ ಇಮ್ರಾನ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಸದ್ಯ ಇಮ್ರಾನ್ ಅಟೋಕ್‌ನ ಜಿಲ್ಲಾ ನ್ಯಾಯಾಲಯದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...