ಇರಾನ್ ಮೇಲೆ ಬಾಂಬ್ ದಾಳಿ: ತೀವ್ರ ಎಚ್ಚರಿಕೆ ವಹಿಸಲು ಭಾರತೀಯರಿಗೆ ತುರ್ತು ಸಲಹೆ

Date:

ಇರಾನ್ ಮೇಲೆ ಇಸ್ರೇಲ್, ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಸದ್ಯ ಉದ್ವಿಗ್ನತೆ ತೀವ್ರವಾಗಿದೆ. ಈ ಬೆನ್ನಲ್ಲೇ ಇರಾನ್ ಮತ್ತು ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ತುರ್ತು ಸಲಹೆಗಳನ್ನು ನೀಡಿದೆ. ತೀವ್ರ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

- Advertisement -

ಇರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿ ಶನಿವಾರ ಭಾರತೀಯ ನಾಗರಿಕರು ತೀವ್ರ ಎಚ್ಚರವಾಗಿರಲು, ಹೊರಗಡೆ ಓಡಾಡದಂತೆ ಸಲಹೆ ನೀಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಇರಾನ್‌ ಮೇಲೆ ದಾಳಿ ನಡೆಸಿದ ಇಸ್ರೇಲ್: ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

ಅಮೆರಿಕ ಬೆಂಬಲದೊಂದಿಗೆ ಇರಾನ್ ಮೇಲೆ ಇಸ್ರೇಲ್ ನಡೆಸಿದ ಬಾಂಬ್ ದಾಳಿ ವಿಶ್ವದಾದ್ಯಂತ ಭದ್ರತಾ ಕಳವಳಗಳನ್ನು ಹೆಚ್ಚಿಸಿದೆ. ಸದ್ಯ ಇರಾನ್ ಮತ್ತು ಇಸ್ರೇಲ್ ಎರಡೂ ತಮ್ಮ ವಾಯುಪ್ರದೇಶಗಳನ್ನು ಮುಚ್ಚಿವೆ. ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಳ್ಳುವ ಭೀತಿಯ ನಡುವೆ ಇರಾಕ್ ಕೂಡ ವಿಮಾನಗಳನ್ನು ಸ್ಥಗಿತಗೊಳಿಸಿದೆ.

ಇನ್ನು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನಾಗರಿಕರಿಗೆ ಸ್ಥಳೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುವಂತೆ ಸಲಹೆ ನೀಡಿದೆ. “”ಭಾರತೀಯ ಪ್ರಜೆಗಳು ಸುದ್ದಿ ಮತ್ತು ಅಧಿಕೃತ ಮಾಹಿತಿಗಳನ್ನು ಪಡೆಯುತ್ತಾ ಬೆಳವಣಿಗೆಗಳ ಬಗ್ಗೆ ನಿಗಾ ಇಡಬೇಕು. ಮತ್ತು ಭಾರತೀಯ ರಾಯಭಾರ ಕಚೇರಿಯಿಂದ ಹೆಚ್ಚಿನ ಮಾರ್ಗದರ್ಶನಕ್ಕಾಗಿ ಕಾಯಿರಿ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ತುರ್ತು ಸಂದರ್ಭಗಳಲ್ಲಿ ನಾಗರಿಕರಿಗೆ ಸಹಾಯ ಮಾಡಲು, ರಾಯಭಾರ ಕಚೇರಿಯು ಹಲವಾರು ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಂಡಿದೆ: +989128109115, +989128109109, +989128109102 ಮತ್ತು +989932179359, ಅಗತ್ಯವಿದ್ದರೆ ಜನರು ಈ ಸಂಖ್ಯೆಗಳ ಮೂಲಕ ಸಂಪರ್ಕಿಸಲು ತಿಳಿಸಿದೆ.

ಭಾರತೀಯರು ಇಸ್ರೇಲ್‌ನ ಅಧಿಕೃತ ತುರ್ತು ಪೋರ್ಟಲ್ ಮೂಲಕ ಮಾಹಿತಿ ಪಡೆಯಬಹುದು. “ಎಲ್ಲಾ ಭಾರತೀಯರು ಗೊತ್ತುಪಡಿಸಿದ ಆಶ್ರಯಗಳ ಸಮೀಪದಲ್ಲಿಯೇ ಇರಬೇಕು. ಅವರ ನಿವಾಸ ಅಥವಾ ಕೆಲಸದ ಪ್ರದೇಶದ ಸಮೀಪದ ಸುರಕ್ಷಿತ ಸ್ಥಳಗಳಲ್ಲಿ ಇರಿ” ಎಂದು ತಿಳಿಸಲಾಗಿದೆ.

ತುರ್ತು ಸಂದರ್ಭಗಳಲ್ಲಿ, ಇಸ್ರೇಲ್‌ನಲ್ಲಿರುವ ಭಾರತೀಯರು ಟೆಲ್ ಅವೀವ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯನ್ನು +972-54-7520711 ಮೂಲಕ ಅಥವಾ [email protected] ಇಮೇಲ್ ಮೂಲಕ ಸಂಪರ್ಕಿಸಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಕಲಬುರಗಿ | ಸಿಇಸಿ ಜ್ಞಾನೇಶಕುಮಾರ ವಜಾಗೆ ಆಗ್ರಹಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ...

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...