ಆಪರೇಷನ್ ಸಿಂಧೂರ್ ಕಾರ್ಯಚರಣೆಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಭಾರತದಲ್ಲಿನ 15 ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿದೆ. ಇದರ ಬೆನ್ನಲ್ಲೇ ಭಾರತ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಧ್ವಂಸಗೊಳಿಸಿದೆ ಎಂದು ಸರಕಾರದ ಮೂಲಗಳು ತಿಳಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.
ಭಾರತೀಯ ಸೇನೆಯಿಂದ ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್ ಕೋಟ್ ಮೇಲೆ ದಾಳಿ ನಡೆಸಲಾಗಿದೆ. ಭಾರತದ ಮೇಲೆ ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆಯಿಂದ ದಾಳಿ ನಡೆಸಲಾಗಿದೆ.
ಲಾಹೋರ್‌ನಲ್ಲಿ ಚೀನಾ ಅಭಿವೃದ್ಧಿಪಡಿಸಿದ ಪಾಕಿಸ್ತಾನದ ಎಚ್‌ಕ್ಯೂ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಘಟಕಗಳನ್ನು ಇಸ್ರೇಲ್ ನಿರ್ಮಿತ ಭಾರತದ ಎಚ್‌ಎಆರ್‌ಒಪಿ ಡ್ರೋನ್‌ಗಳು ಹೊಡೆದುರುಳಿಸಿದೆ.
ಲಾಹೋರ್ ಬಳಿ ಒಂದು ಡ್ರೋನ್ ಪತನಗೊಂಡಿದೆ. ಲಾಹೋರ್‌ನಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಮತ್ತು ಸಿಂಧ್‌ನ ಮಿಯಾನೋದಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತದ ಆಪರೇಷನ್ ಸಿಂಧೂರ ಕಾರ್ಯಚರಣೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಮೇ 7 ಮತ್ತು 8ರ ಮಧ್ಯರಾತ್ರಿ ಪಾಕಿಸ್ತಾನ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ ಸೇರಿದಂತೆ ಹಲವೆಡೆ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು. ಆದರೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು.
ಆದರೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ರಷ್ಯಾ ನಿರ್ಮಿತ ಎಸ್ -400 ‘ಸುದರ್ಶನ್ ಚಕ್ರ’ ವಾಯುರಕ್ಷಣಾ ವ್ಯವಸ್ಥೆಗಳು ವಿಫಲಗೊಳಿಸಿದೆ ಎಂದು ಸರಕಾರ ಹೇಳಿಕೆಯಲ್ಲಿ ತಿಳಿಸಿದೆ.