ಅಫ್ಘಾನಿಸ್ತಾನ | ತಾಲಿಬಾನ್ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸಹಿತ 10 ದೇಶಗಳು ಭಾಗಿ

Date:

ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ತಾಲಿಬಾನ್ ಸರ್ಕಾರವು ಪ್ರಾದೇಶಿಕ ಸಹಕಾರಕ್ಕಾಗಿ ವಿಶಾಲ ಗುರಿಯೊಂದಿಗೆ ಕಾಬೂಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತ ಸೇರಿದಂತೆ ಒಟ್ಟು 10 ದೇಶಗಳು ಭಾಗಿಯಾಗಿರುವುದಾಗಿ ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ.

- Advertisement -

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯು ತನ್ನ ಹಿಡಿತವನ್ನು ಸಡಿಲಿಸಿದ ಬಳಿಕ ತಾಲಿಬಾನ್ ಸರ್ಕಾರವು ಅಧಿಕಾರಕ್ಕೆ ಬಂದಿತ್ತು. ಆದರೆ ಈವರೆಗೆ ಭಾರತವು ಇನ್ನೂ ಅಂಗೀಕರಿಸಿಲ್ಲ. ಈ ನಡುವೆಯೇ ಕಾಬೂಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಸಮಾವೇಶದಲ್ಲಿ ಭಾರತದ ಪ್ರತಿನಿಧಿಯನ್ನು ಭಾಗವಹಿಸಲು ಅನುಮತಿಸಿರುವುದು ಅಚ್ಚರಿ ಮೂಡಿಸಿದೆ. ಸಭೆಯಲ್ಲಿ ನಡೆಸಿದ ಮಾತುಕತೆಯ ವಿಚಾರವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ಪ್ರಕಟಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸಭೆಯಲ್ಲಿ ಭಾರತ ಮಾತ್ರವಲ್ಲದೇ, ಕಜಕಿಸ್ತಾನ್, ಟರ್ಕಿ, ರಷ್ಯಾ, ಚೀನಾ, ಇರಾನ್, ಪಾಕಿಸ್ತಾನ, ಉಜ್ಬೇಕಿಸ್ತಾನ್, ತುರ್ಕಮೆನಿಸ್ತಾನ್, ಇಂಡೋನೇಷ್ಯಾ ಮತ್ತು ಕಿರ್ಗಿಸ್ತಾನ್ ಸೇರಿವೆ ಎಂದು ಅಫ್ಘಾನಿಸ್ತಾನದ ಖಾಮಾ ಪ್ರೆಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಫ್ಘಾನಿಸ್ತಾನದ ವಿಶೇಷ ಪ್ರತಿನಿಧಿ ಝಮೀರ್ ಕಾಬುಲೋವ್ ಅವರು ಸಮಾವೇಶದಲ್ಲಿ ರಷ್ಯಾವನ್ನು ಪ್ರತಿನಿಧಿಸಿದ್ದರು ಎಂದು ವರದಿಯಾಗಿದೆ.

ಪ್ರಾದೇಶಿಕ ಸಹಕಾರದ ಉದ್ದೇಶದಿಂದ ಆಯೋಜಿಸಲಾಗಿದ್ದ ಸೋಮವಾರದ ಸಭೆಯನ್ನು ತಾಲಿಬಾನ್ ಆಡಳಿತದ ಹಂಗಾಮಿ ವಿದೇಶಾಂಗ ಸಚಿವರಾಗಿ ನೇಮಕಗೊಂಡಿರುವ ಅಮೀರ್ ಖಾನ್ ಮುತ್ತಕಿ ಅವರ ನೇತೃತ್ವ ವಹಿಸಿದ್ದರು.

“ಅಫ್ಘಾನಿಸ್ತಾನದೊಂದಿಗೆ ಸಕಾರಾತ್ಮಕ ಸಂವಹನ ಹೆಚ್ಚಿಸಲು ಮತ್ತು ಇನ್ನೂ ಮುಂದುವರಿಸಲು ಎಲ್ಲ ರಾಷ್ಟ್ರಗಳು ಪ್ರಾದೇಶಿಕ ಮಾತುಕತೆಗಳನ್ನು ನಡೆಸಲು ಸಹಕಾರ ನೀಡಬೇಕು” ಎಂದು ತಾಲಿಬಾನ್ ವಿದೇಶಾಂಗ ಸಚಿವರು ಒತ್ತು ನೀಡಿರುವುದಾಗಿ ಅಫ್ಘಾನ್ ವಿದೇಶಾಂಗ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಯುಎಇನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಅಬುಧಾಬಿಯಲ್ಲಿ ನಡೆದ ಗಣರಾಜ್ಯೋತ್ಸವಕ್ಕೆ ಗಲ್ಫ್ ರಾಷ್ಟ್ರದ ಅಫ್ಘಾನ್ ರಾಯಭಾರಿ ಬದ್ರುದ್ದೀನ್ ಹಕ್ಕಾನಿ ಅವರನ್ನು ಆಹ್ವಾನಿಸಿದ ಬೆನ್ನಲ್ಲೇ ಕಾಬೂಲ್‌ನಲ್ಲಿ ಈ ಸಭೆ ಆಯೋಜಿಸಲಾಗಿತ್ತು.

ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಸಭೆಯಲ್ಲಿ, ಅಫ್ಘಾನಿಸ್ತಾನದ ಅಭಿವೃದ್ಧಿಗಾಗಿ ನೆರವು ನೀಡುವಂತೆ ಕೋರಿದ್ದು. ಅಫ್ಘಾನ್‌ನಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಳ್ಳುವಂತೆ ಹಾಗೂ ಸಂಭವನೀಯ ಬೆದರಿಕೆಗಳನ್ನು ಹಿಮ್ಮೆಟ್ಟಲು ಸಹಕಾರ ನೀಡುವಂತೆ ಕೋರಿರುವುದಾಗಿ ವರದಿಯಾಗಿದೆ.

ಪರಸ್ಪರ ಹಿತಾಸಕ್ತಿ ಮತ್ತು ಪರಸ್ಪರ ಗೌರವದ ಆಧಾರದ ಮೇಲೆ ಒಟ್ಟಾಗಿ ಕೆಲಸ ಮಾಡುವ ಮೂಲಕ ಪ್ರಾದೇಶಿಕ ರಾಷ್ಟ್ರಗಳೊಂದಿಗೆ ತೊಡಗಿಸಿಕೊಳ್ಳಲು ಮತ್ತು ಸಹಕರಿಸಲು ಕಾಬೂಲ್ ಸಿದ್ಧವಾಗಿದೆ ಎಂದು ಅವರು ಹೇಳಿರುವುದಾಗಿ ಅಫ್ಘಾನಿಸ್ತಾನದ ಮಾಧ್ಯಮಗಳು ವರದಿ ಮಾಡಿದೆ.

“ಭಾರತವು ಅಫ್ಘಾನಿಸ್ತಾನದ ಎಲ್ಲ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಬೆಳವಣಿಗೆಗಳಲ್ಲಿ ಶ್ರದ್ಧೆಯಿಂದ ಭಾಗವಹಿಸಲಿದೆ. ಅಫ್ಘಾನಿಸ್ತಾನದ ಭದ್ರತೆ ಮತ್ತು ಸ್ಥಿರತೆಗೆ ಸಹಾಯ ಮಾಡುವ ಪ್ರತಿಯೊಂದು ಪ್ರಯತ್ನ ಮತ್ತು ಉಪಕ್ರಮವನ್ನು ಬೆಂಬಲಿಸಲಿದೆ ಎಂದು ಕಾಬೂಲ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯ ಪ್ರತಿನಿಧಿ ತಿಳಿಸಿದ್ದಾರೆ” ಎಂದು ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯದ ಉಪ ವಕ್ತಾರ ಹಫೀಜ್ ಜಿಯಾ ಅಹ್ಮದ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...