ಭಾರತ-ಪಾಕ್ ಸಂಘರ್ಷ | ಕರಾಚಿ ಬಂದರಿನ ಮೇಲೆ‌ ಭಾರತೀಯ ನೌಕಾಪಡೆ ದಾಳಿ ಎಂಬ ಸುಳ್ಳು ಸುದ್ದಿ‌ ವೈರಲ್

Date:

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ದಿದೇ-ದಿನೇ ಹೆಚ್ಚುತ್ತಿದೆ. ಎರಡು ರಾಷ್ಟ್ರಗಳ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಿವೆ. ಇದೇ ವೇಳೆ, ಮಾಧ್ಯಮಗಳು ಸೇರಿದಂತೆ ಸಾಮಾಜಿಕ‌ ಜಾಲತಾಣದಲ್ಲಿ ನಕಲಿ ವಿಡಿಯೋಗಳು, ಹಳೆಯ ವಿಡಿಯೋಗಳು ಹಾಗೂ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಇದೀಗ, ಗುರುವಾರ ರಾತ್ರಿ ಭಾರತೀಯ ನೌಕಾಪಡೆಯು ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಸುಳ್ಳು ಸುದ್ದಿಯನ್ನು ಮಾಧ್ಯಮಗಳು ಪ್ರಸಾರ ಮಾಡುತ್ತಿವೆ.

- Advertisement -

ಅರಬ್ಬೀ ಸಮುದ್ರದಲ್ಲಿ ನೆಲೆಗೊಂಡಿರುವ ನೌಕಾಪಡೆಯ ಪ್ರಬಲ ಐಎನ್‌ಎಸ್ ವಿಕ್ರಾಂತ್ ಯುದ್ಧ ನೌಕೆಯು ಪಾಕಿಸ್ತಾನದ ಕರಾಚಿ ಬಂದರಿನ ಮೇಲೆ ದಾಳಿ ಮಾಡಿದೆ ಎಂಬ ಶೀರ್ಷಿಕೆ ಜೊತೆಗೆ ಹಲವು ಮಾಧ್ಯಮಗಳು ವರದಿ ಮಾಡಿವೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್‌ಗಳು ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಆದರೆ, ಕರಾಚಿ ಮೇಲಿನ ದಾಳಿ ಬಗ್ಗೆ ಭಾರತ ಸೇನೆಯಾಗಲೀ ಅಥವಾ ಪಾಕಿಸ್ತಾನವಾಗಲೀ ದೃಢಪಡಿಸಿಲ್ಲ. ಅಧಿಕೃತ ಮಾಹಿತಿಯನ್ನೂ ನೀಡಿಲ್ಲ. ಅಧಿಕೃತ ವರದಿಗಳ ಪ್ರಕಾರ, ಭಾರತೀಯ ನೌಕಾಪಡೆ ಇನ್ನೂ ಯಾವುದೇ ದಾಳಿಯನ್ನು ಪ್ರಾರಂಭಿಸಿಲ್ಲ. ಆದರೆ ಭಾರತವನ್ನು ಸಮುದ್ರದಿಂದ ರಕ್ಷಿಸುತ್ತಿದೆ ಮತ್ತು ಪಾಕಿಸ್ತಾನದ ದಾಳಿಯನ್ನು ಎದುರಿಸಲು ಸಿದ್ಧವಾಗಿದೆ.

ವರದಿಗಳ ಪ್ರಕಾರ, ಕರಾಚಿ ಬಂದರಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ನಾಗರಿಕರು ತಮ್ಮ ಮನೆಗಳೊಳಗೆ ಇರಬೇಕೆಂದು ಎಚ್ಚರಿಕೆಯ ಸೈರನ್‌ಗಳು ನಿರಂತರವಾಗಿ ಸದ್ದು ಮಾಡುತ್ತಿವೆ.

ಈ ನಡುವೆ, ಗುರುವಾರ ಜಮ್ಮು ಮೇಲೆ ಪಾಕಿಸ್ತಾನ ದಾಳಿ ಮಾಡಿದೆ. ಜಮ್ಮುವಿನ ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಕಡೆಗೆ ಪಾಕಿಸ್ತಾನ ಎಂಟು ಕ್ಷಿಪಣಿಗಳನ್ನು ಹಾರಿಸಿದೆ. ಅವೆಲ್ಲವನ್ನೂ ವಾಯು ರಕ್ಷಣಾ ಘಟಕಗಳು ತಡೆಹಿಡಿದು ನಿರ್ಬಂಧಿಸಿವೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಅಲ್ಲದೆ, ರಾಜಸ್ಥಾನದ ಬಿಕಾನೇರ್ ಮತ್ತು ಪಂಜಾಬ್‌ನ ಜಲಂಧರ್‌ನಲ್ಲಿ ಸಂಪೂರ್ಣ ಬ್ಲಾಕೌಟ್ ಜಾರಿಗೊಳಿಸಲಾಗಿದೆ. ಕಿಶ್ತ್ವಾರ್, ಅಖ್ನೂರ್, ಸಾಂಬಾ, ಅಮೃತಸರದಲ್ಲಿಯೂ ಬ್ಲಾಕೌಟ್ ಜಾರಿಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...