ಭಾರತ–ಪಾಕ್‌ನಿಂದ ಅಣು ಸ್ಥಾವರ, ಕೈದಿಗಳ ಪಟ್ಟಿ ವಿನಿಮಯ; ಮುಂದುವರಿದ 3 ದಶಕಗಳ ಸಂಪ್ರದಾಯ

Date:

ಮೂರು ದಶಕಗಳ ಸಂಪ್ರದಾಯವನ್ನು ಮುಂದುವರಿಸಿರುವ ಭಾರತ ಮತ್ತು ಪಾಕಿಸ್ತಾನಗಳು, ಪರಸ್ಪರರ ಪರಮಾಣು ಸ್ಥಾವರಗಳು ಮತ್ತು ಜೈಲಿನಲ್ಲಿರುವ ಕೈದಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ.
​
ಕಳೆದ ಮೇ ತಿಂಗಳಲ್ಲಿ ನಡೆದ ಸೇನಾ ಸಂಘರ್ಷದ ಬಳಿಕ ಉಭಯ ದೇಶಗಳ ಬಾಂಧವ್ಯ ತೀರಾ ಹದಗೆಟ್ಟಿದ್ದರೂ, ಮೂರು ದಶಕಗಳ ಸಂಪ್ರಾದಾಯವನ್ನು ಮುಂದುವರಿಸಿರುವ ಭಾರತ ಮತ್ತು ಪಾಕಿಸ್ತಾನಗಳು, ಪರಸ್ಪರರ ಪರಮಾಣು ಸ್ಥಾವರಗಳು ಮತ್ತು ಜೈಲಿನಲ್ಲಿರುವ ಕೈದಿಗಳ ಪಟ್ಟಿಯನ್ನು ಇಂದು(ಜನವರಿ 1) ವಿನಿಮಯ ಮಾಡಿಕೊಂಡಿದೆ.

- Advertisement -

ಪರಮಾಣು ಸ್ಥಾವರಗಳ ಮೇಲೆ ಪರಸ್ಪರ ದಾಳಿ ನಡೆಸುವುದನ್ನು ನಿಷೇಧಿಸುವ ದ್ವಿಪಕ್ಷೀಯ ಒಪ್ಪಂದದ ಅನ್ವಯ, ಉಭಯ ದೇಶಗಳು ಅಣು ಸ್ಥಾವರಗಳ ಪಟ್ಟಿಯನ್ನು ಹಸ್ತಾಂತರಿಸಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಉಭಯ ದೇಶಗಳು ತಮ್ಮ ವಶದಲ್ಲಿರುವ ಪರಸ್ಪರರ ಕೈದಿಗಳ ಪಟ್ಟಿಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿವೆ.
​
2008ರ ಮೇ 21ರಂದು ಸಹಿ ಹಾಕಲಾದ ‘ಕಾನ್ಸುಲರ್ ಆಕ್ಸೆಸ್’ (ದೂತಾವಾಸ ಪ್ರವೇಶದ ಹಕ್ಕು) ಒಪ್ಪಂದದ ಅಡಿಯಲ್ಲಿ ಉಭಯ ದೇಶಗಳು ತಮ್ಮ ವಶದಲ್ಲಿರುವ ಪರಸ್ಪರರ ಕೈದಿಗಳ ಪಟ್ಟಿಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಹೋಗಿ ಬಂದವರಿಗೆ ಸಂಭ್ರಮದ ಸ್ವಾಗತ; ಕರ್ನಾಟಕ ಹೀಗೇಕಾಯಿತು?

ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ತಾಹೀರ್‌ ಅಂದ್ರಬಿ ಈ ಬಗ್ಗೆ ಮಾಹಿತಿ ನೀಡಿದ್ದು, ” ಪಾಕಿಸ್ತಾನದ ವಶದಲ್ಲಿರುವ 199 ಮೀನುಗಾರರು ಹಾಗೂ ಇತರೆ ನಾಗರಿಕರು ಸೇರಿದಂತೆ ಒಟ್ಟು 257 ಭಾರತೀಯ ಕೈದಿಗಳ ಪಟ್ಟಿಯನ್ನು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಹಸ್ತಾಂತರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಈ ಒಪ್ಪಂದದ ಪ್ರಕಾರ, ವರ್ಷಕ್ಕೆ ಎರಡು ಬಾರಿ (ಜನವರಿ 1 ಮತ್ತು ಜುಲೈ 1) ಕೈದಿಗಳ ಪಟ್ಟಿಯನ್ನು ಹಂಚಿಕೊಳ್ಳುವುದು ಕಡ್ಡಾಯವಾಗಿದ್ದು, ಭಾರತ ಮೂಡ ಕೂಡ ನವದೆಹಲಿಯಲ್ಲಿರುವ ಪಾಕಿಸ್ತಾನದ ಅಧಿಕಾರಿಗಳಿಗೆ ತನ್ನ ವಶದಲ್ಲಿದಲ್ಲಿರುವ ಪಾಕ್‌ ಕೈದಿಗಳ ಪಟ್ಟಿಯನ್ನು ಹಸ್ತಾಂತರಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನಗಳು ‘ಪರಮಾಣು ಸ್ಥಾವರಗಳು ಮತ್ತು ಸೌಲಭ್ಯಗಳ ಮೇಲಿನ ದಾಳಿ ನಿಷೇಧ’ ಒಪ್ಪಂದಕ್ಕೆ 1988ರ ಡಿಸೆಂಬರ್ 31ರಂದು ಸಹಿ ಹಾಕಿದ್ದವು. ಈ ಒಪ್ಪಂದವು 1991ರ ಜನವರಿ 27ರಿಂದ ಜಾರಿಗೆ ಬಂದಿತು.

​ಈ ಒಪ್ಪಂದದ ಅನ್ವಯ, ಪ್ರತಿ ಕ್ಯಾಲೆಂಡರ್ ವರ್ಷದ ಮೊದಲ ದಿನದಂದು (ಜನವರಿ 1) ಎರಡೂ ದೇಶಗಳು ಒಪ್ಪಂದದ ವ್ಯಾಪ್ತಿಗೆ ಬರುವ ತಮ್ಮ ಪರಮಾಣು ಸ್ಥಾವರಗಳು ಮತ್ತು ಸೌಲಭ್ಯಗಳ ಮಾಹಿತಿಯನ್ನು ಪರಸ್ಪರ ಹಂಚಿಕೊಳ್ಳಬೇಕಾಗುತ್ತದೆ. ಕಳೆದ ಮೇ ತಿಂಗಳಲ್ಲಿ ನಡೆದ ನಾಲ್ಕು ದಿನಗಳ ಸೇನಾ ಸಂಘರ್ಷದ ಬಳಿಕ ಉಭಯ ದೇಶಗಳ ನಡುವೆ ಶೀತಲ ಸಮರ ಏರ್ಪಟ್ಟಿದ್ದರೂ, ಈ ದೀರ್ಘಕಾಲದ ಒಪ್ಪಂದ ಪಾಲನೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂಬುದು ಗಮನಾರ್ಹ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...

ಆಕ್ರೋಶಕ್ಕೆ ಹೆದರಿದ ಆಯೋಗ: ‘ಬಿಟ್ಟುಹೋದ’ ಮತದಾರರ ಸೇರ್ಪಡೆಗೆ ಕ್ರಮ

ದೇಶಾದ್ಯಂತ ನಡೆಸಲಾದ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ...