ಐದು ವರ್ಷಗಳ ನಂತರ ಚೀನಾದ ಪ್ರವಾಸಿಗರಿಗೆ ಭಾರತದ ವೀಸಾ ಮರು ಜಾರಿ

Date:

ಗಾಲ್ವಾನ್ ಕಣಿವೆಯ ಘಟನೆಯ ನಂತರ ಚೀನಾಗೆ ವಿಧಿಸಲಾಗಿದ್ದ ನಿರ್ಬಂಧಕ್ಕೆ ತೆರೆ ಬೀಳುತ್ತಿದ್ದು, ಅಲ್ಲಿನ ನಾಗರಿಕರಿಗೆ ಭಾರತವು ಪ್ರವಾಸಿ ವೀಸಾ ವಿತರಣೆಯನ್ನು ಐದು ವರ್ಷಗಳ ಬಳಿಕ ಮರುಪ್ರಾರಂಭಿಸಿದೆ. ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವ ದಿಸೆಯಲ್ಲಿ ಇದು ಮಹತ್ವದ ಹೆಜ್ಜೆ ಎಂದು ರಾಜತಾಂತ್ರಿಕ ವಲಯಗಳು ಅಂದಾಜಿಸಿವೆ.

- Advertisement -

ಕೋವಿಡ್‌ ನಂತರ ಕುಂಠಿತವಾಗಿದ್ದ ಸಂಚಾರ ಮತ್ತು ವಿನಿಮಯಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ವೀಸಾ ಮರುಜಾರಿಯ ಆದೇಶ ಜಾರಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜೂನ್‌ನಲ್ಲಿ ಕೈಲಾಸ–ಮಾನಸ ಸರೋವರ ಯಾತ್ರೆ ಐದು ವರ್ಷಗಳ ವಿರಾಮದ ನಂತರ ಪುನರಾರಂಭವಾಗಿತ್ತು. ಇದು ರಾಜತಾಂತ್ರಿಕ ಸಮರ ತಣ್ಣಗಾದ ಸೂಚನೆಯಾಗಿತ್ತು ಎನ್ನಲಾಗಿದೆ. ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷದ ಅಂಗವಾಗಿ ಎರಡೂ ದೇಶಗಳ ನಾಯಕರು ಪರಸ್ಪರ ಅಭಿನಂದನಾ ಸಂದೇಶಗಳನ್ನು ವಿನಿಮಯ ಮಾಡಿಕೊಂಡಿದ್ದರು.

ಜುಲೈನಲ್ಲಿ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಬೀಜಿಂಗ್‌ಗೆ ಭೇಟಿ ನೀಡಿ ಮಾತುಕತೆ ನಡೆಸಿ, “ಸಂಬಂಧಗಳು ಕ್ರಮೇಣ ಸಕಾರಾತ್ಮಕ ದಾರಿಗೆ ಸಾಗುತ್ತಿವೆ” ಎಂದು ಅಭಿಪ್ರಾಯಪಟ್ಟಿದ್ದರು. ಆಗಸ್ಟ್‌ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೊಸದಿಲ್ಲಿಗೆ ಭೇಟಿ ನೀಡಿ ಗಡಿ ಸ್ಥಿತಿ ಮತ್ತು ಸಾಮಾನ್ಯೀಕರಣದ ಕುರಿತು ಚರ್ಚೆ ನಡೆಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಈ ʼಗಣ್ಯರುʼ ಸರ್ಕಾರದ ತುತ್ತೂರಿಯಾದರೆ ಸಾಕೇ? ಸತ್ಯವಂತ ಸಮಾಜಮುಖಿ ಆಗಲೂ ಬೇಕೇ? 

ಆಗಸ್ಟ್ 31ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಏಳು ವರ್ಷಗಳ ಬಳಿಕ ಚೀನಾಕ್ಕೆ ಭೇಟಿ ನೀಡಿ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಇಬ್ಬರು ನಾಯಕರೂ “ಪ್ರತಿಸ್ಪರ್ಧಿಗಳಿಗಿಂತ ಪಾಲುದಾರಿಕೆ ಮುಖ್ಯ” ಎಂಬ ಸಂದೇಶವನ್ನು ಹಂಚಿಕೊಂಡಿದ್ದರು.

ನವೆಂಬರ್ 10ರಂದು ಐದು ವರ್ಷಗಳ ಬಳಿಕ ಭಾರತ–ಚೀನಾ ನೇರ ವಾಣಿಜ್ಯ ವಿಮಾನ ಸೇವೆ ಪುನರಾರಂಭಗೊಂಡಿದ್ದು, ಶಾಂಘೈಯಲ್ಲಿನ ಭಾರತದ ಕಾನ್ಸುಲ್ ಜನರಲ್ ಪ್ರತೀಕ್ ಮಾಥುರ್ ನವದೆಹಲಿಯಿಂದ ಆಗಮಿಸಿದ ಮೊದಲ ಪ್ರಯಾಣಿಕರನ್ನು ಸ್ವಾಗತಿಸಿದರು.

ಪ್ರವಾಸಿ ವೀಸಾ ಮರುಜಾರಿಯೊಂದಿಗೆ ವ್ಯಾಪಾರ, ಪ್ರವಾಸೋದ್ಯಮ ಮತ್ತು ಜನರಿಂದ ಜನರಿಗೆ ಸಂಪರ್ಕ ಮತ್ತಷ್ಟು ಬಲಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...