ಭಾರತ, ರಷ್ಯಾ ತಮ್ಮ ಸತ್ತ ಆರ್ಥಿಕತೆಗಳನ್ನು ಒಟ್ಟಾಗಿ ಉರುಳಿಸಬಹುದು: ಡೊನಾಲ್ಡ್ ಟ್ರಂಪ್

Date:

Advertisements

ರಷ್ಯಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ದಂಡ ವಿಧಿಸುವುದರ ಜೊತೆಗೆ ಭಾರತಕ್ಕೆ ಶೇಕಡ 25ರಷ್ಟು ಸುಂಕವನ್ನು ವಿಧಿಸಿದೆ. ಇದಾದ ಕೆಲವೇ ಗಂಟೆಗಳ ಬಳಿಕ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಭಾರತ ಮತ್ತು ರಷ್ಯಾ ಒಟ್ಟಾಗಿ ತಮ್ಮ ಸತ್ತ ಆರ್ಥಿಕತೆಗಳನ್ನುಉರುಳಿಸಬಹುದು” ಎಂದು ಟೀಕಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ರೂತ್ ಸೋಶಿಯಲ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, “ರಷ್ಯಾದೊಂದಿಗೆ ಭಾರತ ಏನು ಮಾಡುತ್ತದೆ ಎಂಬುದು ನನಗೆ ಮುಖ್ಯವಲ್ಲ. ಆದರೆ ಅವರು ಒಟ್ಟಾಗಿ ತಮ್ಮ ಸತ್ತ ಆರ್ಥಿಕತೆಗಳನ್ನು ಉರುಳಿಸಬಹುದು. ನಾವು ಭಾರತದೊಂದಿಗೆ ಬಹಳ ಕಡಿಮೆ ವ್ಯವಹಾರ ಮಾಡಿದ್ದೇವೆ. ಭಾರತದಲ್ಲಿ ಸುಂಕ ಹೆಚ್ಚಿವೆ, ವಿಶ್ವದಲ್ಲೇ ಅತ್ಯಧಿಕ ಸುಂಕವಿದೆ. ಅದೇ ರೀತಿ, ರಷ್ಯಾ ಮತ್ತು ಯುಎಸ್ಎಗಳು ಒಟ್ಟಿಗೆ ಯಾವುದೇ ವ್ಯವಹಾರವನ್ನು ಮಾಡುವುದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಭಾರತದ ಮೇಲೆ ಶೇ 25ರಷ್ಟು ಸುಂಕ: ಡೊನಾಲ್ಡ್ ಟ್ರಂಪ್ ಸುಳಿವು

Advertisements

ಇನ್ನು ರಷ್ಯಾದ ಮಾಜಿ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಅವರಿಗೆ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. “ಮೆಡ್ವೆಡೆವ್ ತಮ್ಮ ಮಾತುಗಳ ಮೇಲೆ ನಿಗಾ ವಹಿಸಬೇಕು. ರಷ್ಯಾದ ವಿಫಲ ಅಧ್ಯಕ್ಷರನ್ನು ಇನ್ನೂ ಅಧ್ಯಕ್ಷರು ಎಂದು ಭಾವಿಸುವವರು ಇದ್ದಾರೆ. ಅದು ತುಂಬಾ ಅಪಾಯಕಾರಿ” ಎಂದರು.

ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಅಮೆರಿಕ ಭಾರತೀಯ ಸರಕುಗಳ ಮೇಲೆ ಶೇಕಡ 25ರಷ್ಟು ಸುಂಕವನ್ನು ಘೋಷಿಸಿದೆ. ಇದಾದ ಒಂದು ದಿನದ ನಂತರ ಟ್ರಂಪ್ ಈ ರಷ್ಯಾ ಮತ್ತು ಭಾರತದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ನೆನಪಿಡಿ, ಭಾರತ ನಮ್ಮ ಸ್ನೇಹ ಹೊಂದಿರುವ ದೇಶವಾಗಿದ್ದರೂ ನಾವು ಅವರೊಂದಿಗೆ ಕಡಿಮೆ ವ್ಯವಹಾರ ಮಾಡಿದ್ದೇವೆ. ಏಕೆಂದರೆ ಅವರ ಸುಂಕುಗಳು ವಿಶ್ವದಲ್ಲೇ ಅತ್ಯಧಿಕ. ಯಾವುದೇ ದೇಶಕ್ಕಿಂತ ಅತಿ ಕಠಿಣ ಮತ್ತು ಅಸಹ್ಯಕರವಾದ ವಿತ್ತೀಯ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ” ಎಂದು ಟ್ರಂಪ್ ಟ್ರುತ್ ಸೋಶಿಯಲ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಅಲ್ಲದೆ, ಅವರು ಯಾವಾಗಲೂ ತಮ್ಮ ಮಿಲಿಟರಿ ಉಪಕರಣಗಳಲ್ಲಿ ಹೆಚ್ಚಿನದನ್ನು ರಷ್ಯಾದಿಂದ ಖರೀದಿಸಿದ್ದಾರೆ. ರಷ್ಯಾ ಉಕ್ರೇನ್‌ನಲ್ಲಿ ಹತ್ಯೆಯನ್ನು ನಿಲ್ಲಿಸಬೇಕೆಂದು ಎಲ್ಲರೂ ಬಯಸುವ ಸಮಯದಲ್ಲಿ ಭಾರತವು ಚೀನಾದಂತೆಯೇ ರಷ್ಯಾದ ಅತಿದೊಡ್ಡ ಇಂಧನ ಖರೀದಿದಾರ ದೇಶವಾಗಿದೆ. ಇವೆಲ್ಲವೂ ಒಳ್ಳೆಯದಲ್ಲ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X