ಟ್ರಂಪ್ ಬೆದರಿಕೆಗಳ ಹೊರತಾಗಿಯೂ ರಷ್ಯಾದಿಂದ ತೈಲ ಆಮದು ಮುಂದುವರೆಸಲಿರುವ ಭಾರತ: ವರದಿ

Date:

ಅಮೆರಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಂಡ ಹೇರುವ ಬೆದರಿಕೆ ಹಾಕಿದರೂ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತದೆ ಎಂದು ಭಾರತೀಯ ಸರ್ಕಾರದ ಎರಡು ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

- Advertisement -

ಭಾರತವು ಅಮೆರಿಕಕ್ಕೆ ಮಾಡುವ ರಫ್ತಿನ ಮೇಲೆ ಹೊಸದಾಗಿ ಶೇಕಡ 25ರಷ್ಟು ಸುಂಕವನ್ನು ವಿಧಿಸಿರುವ ಟ್ರಪ್, “ರಷ್ಯಾದ ಶಸ್ತ್ರಾಸ್ತ್ರ ಮತ್ತು ತೈಲ ಖರೀದಿಸುವ ಭಾರತವು ಹೆಚ್ಚುವರಿ ದಂಡವನ್ನು ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದರು. ಹಾಗೆಯೇ ತನ್ನ ಈ ಬೆದರಿಕೆ ಬಳಿಕ ಭಾರತ ರಷ್ಯಾದಿಂದ ತೈಲ ಖರೀದಿಸುವುದು ನಿಲ್ಲಿಸುವ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭಿಸಿದೆ ಎಂದೂ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ಇದನ್ನು ಓದಿದ್ದೀರಾ? ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲಿದೆ ಎನ್ನಲಾಗುತ್ತಿದೆ: ಡೊನಾಲ್ಡ್ ಟ್ರಂಪ್

ಆದರೆ ರಷ್ಯಾದಿಂದ ತೈಲ ಆಮದು ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ರಾತ್ರೋರಾತ್ರಿ ಖರೀದಿಯನ್ನು ನಿಲ್ಲಿಸುವುದು ಅಷ್ಟು ಸುಲಭವಲ್ಲ. ದೀರ್ಘಾವಧಿಯ ತೈಲ ಒಪ್ಪಂದಗಳಿವು ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎನ್ನಲಾಗುತ್ತಿದೆ. ಇದು ಉತ್ತಮ ನಿರ್ಧಾರ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಹಾಗೆಯೇ ಇದು ಖಚಿತವಿಲ್ಲ ಎಂಬುದನ್ನೂ ಟ್ರಂಪ್ ಒಪ್ಪಿಕೊಂಡಿದ್ದಾರೆ.

“ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಅರ್ಥವಾಗಿದೆ. ಇದು ನನಗೆ ಕೇಳಿ ಬಂದಿರುವ ಮಾಹಿತಿ, ಇದು ಸರಿಯೋ ಇಲ್ಲವೋ ನನಗೆ ತಿಳಿದಿಲ್ಲ. ಆದರೆ ಇದು ಉತ್ತಮ ನಿರ್ಧಾರ. ಏನಾಗುತ್ತದೆ ಎಂದು ನಾವು ನೋಡುತ್ತೇವೆ” ಎಂದು ಡೊನಾಲ್ಡ್ ಟ್ರಂಪ್ ವರದಿಗಾರರಿಗೆ ತಿಳಿಸಿದರು.

ಟ್ರಂಪ್ ಇದೇ ರೀತಿ ಸುಳ್ಳು ಹೇಳಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಟ್ರಂಪ್ ಹೇಳಿಕೆಗಳನ್ನು ನೇರವಾಗಿ ಖಂಡಿಸದಿರುವುದು ಟೀಕೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು ಮುಂದಾಗಿದ್ದೇಕೆ ಬಿಜೆಪಿ?

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್...

‘ಕದನ ವಿರಾಮ ಎಂಬುದು ಬರಿ ಕಣ್ಣೊರೆಸುವ ತಂತ್ರ’; ಇಸ್ರೇಲ್ ವಿರುದ್ಧ ವಿಶ್ವಸಂಸ್ಥೆ ಆಕ್ರೋಶ

ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ಇಸ್ರೇಲ್ ಪಡೆಗಳು ನಡೆಸುತ್ತಿರುವ ಹಿಂಸಾಚಾರ ಮತ್ತು ಮಾನವಹಕ್ಕುಗಳ...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ಭೂತಾನ್‌ನಲ್ಲಿ ಜಲಪ್ರಳಯ; ಭಾರತಕ್ಕೆ ಬಿಗ್ ಅಲರ್ಟ್!

ಭೂತಾನ್‌ನ ಗಾಸಾ ಜಿಲ್ಲೆಯ ಸುಂದರ ಪರ್ವತಗಳ ನಡುವೆ ಇರುವ 'ಶಿಂತಾಫು' ಎಂಬ...