ಮಾತುಕತೆ ನಡೆಸಿ ‘ಶಾಂತಿಯುತವಾಗಿ’ ಸಮಸ್ಯೆ ಪರಿಹರಿಸಿಕೊಳ್ಳಿ: ಅಮೆರಿಕ, ವೆನೆಜುವೆಲಾಗೆ ಭಾರತ ಒತ್ತಾಯ

Date:

ವೆನೆಜುವೆಲಾ ಮೇಲೆ ಅಮೆರಿಕ‌ ಆಕ್ರಮಣ ನಡೆಸಿದ್ದು ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಕುಟುಂಬವನ್ನು ಬಂಧಿಸಿದೆ.‌ ವೆನೆಜುವೆಲಾ ಅಮೆರಿಕದ ಅಡಿಯಲ್ಲೇ ಇರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಕೂಡಾ ಮಾಡಿದ್ದಾರೆ. ಈ ಬೆಳವಣಿಗೆ ನಡುವೆ ಭಾರತ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, “ಮಾತುಕತೆ ನಡೆಸಿ ‘ಶಾಂತಿಯುತವಾಗಿ’ ಸಮಸ್ಯೆ ಪರಿಹರಿಸಿಕೊಳ್ಳಿ” ಎಂದು ಅಮೆರಿಕ, ವೆನೆಜುವೆಲಾಗೆ ಒತ್ತಾಯಿಸಿದೆ.

- Advertisement -

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಮ್ಮ ಎಕ್ಸ್ ಖಾತೆಯಲ್ಲಿ ಪತ್ರಿಕಾ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. “ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳು ತೀವ್ರ ಕಳವಳಕಾರಿಯಾಗಿದೆ. ಬದಲಾಗುತ್ತಿರುವ ಪರಿಸ್ಥಿತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ” ಎಂದು ಭಾರತ ಸರ್ಕಾರ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ನಾಗರಿಕರು ಸೇರಿ ಕನಿಷ್ಠ 40 ಮಂದಿ ಸಾವು

“ವೆನೆಜುವೆಲಾದ ಜನರ ಯೋಗಕ್ಷೇಮ ಮತ್ತು ಸುರಕ್ಷತೆಗೆ ಬೆಂಬಲವನ್ನು ನಾವು ನೀಡುವುದಾಗಿ ಭಾರತ ಪುನರುಚ್ಚರಿಸುತ್ತದೆ. ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮಾತುಕತೆ ನಡೆಸಿ ಶಾಂತಿಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ನಾವು ಸಂಬಂಧಪಟ್ಟ ಎಲ್ಲರಿಗೂ ಕರೆ ನೀಡುತ್ತೇವೆ” ಎಂದು ಹೇಳಿದೆ.

“ಕ್ಯಾರಕಾಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂಪರ್ಕದಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದನ್ನು ನಾವು ಮುಂದುವರೆಸುತ್ತೇವೆ” ಎಂದು ತಿಳಿಸಿದೆ.

ಇತರೆ ದೇಶಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಾ ಬಂದಿರುವ ಅಮೆರಿಕ ಇದೀಗ ಅತೀ ಹೆಚ್ಚು ತೈಲ ನಿಕ್ಷೇಪಗಳನ್ನು ಹೊಂದಿರುವ ವೆನೆಜುವೆಲಾ ಮೇಲೆ ಕಣ್ಣಿಟ್ಟಿದೆ. ವೆನೆಜುವೆಲಾ ಮೇಲೆ ದಾಳಿ ನಡೆಸಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಕುಟುಂಬವನ್ನು ಬಂಧಿಸಿದೆ.‌

“ವೆನೆಜುವೆಲಾದಲ್ಲಿ ಎಲ್ಲವೂ ಸರಿದಾರಿಗೆ ಬರುವವರಡಗೂ ಅಮೆರಿಕವೇ ವೆನೆಜುವೆಲಾವನ್ನು ನಡೆಸಲಿದೆ. ಅಲ್ಲಿನ ಬೃಹತ್ ತೈಲ ನಿಕ್ಷೇಪಗಳನ್ನು ಬಳಸಿಕೊಳ್ಳಲಿದೆ. ಅದಕ್ಕಾಗಿ ನಾವು ನಮ್ಮ ಜನರನ್ನು ನೇಮಿಸುತ್ತಿದ್ದೇವೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ.

ಈ ನಡುವೆಯೇ ವೆನೆಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...