ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಪರ ಮತಚಲಾಯಿಸಿದ ಭಾರತ

Date:

Advertisements

ಭಾರತವು ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪ್ಯಾಲೆಸ್ತೀನ್ ದೇಶ ಮತ್ತು ಎರಡು-ರಾಜ್ಯ ಪರಿಹಾರಕ್ಕೆ ಬೆಂಬಲ ಸೂಚಿಸುವ ‘ನ್ಯೂಯಾರ್ಕ್ ಘೋಷಣೆ’ಯ ಪರವಾಗಿ ಮತ ಚಲಾಯಿಸಿದೆ.

ಫ್ರಾನ್ಸ್ ಮಂಡಿಸಿದ ಈ ನಿರ್ಣಯಕ್ಕೆ 142 ರಾಷ್ಟ್ರಗಳು ಪರವಾಗಿ, 10 ರಾಷ್ಟ್ರಗಳು ವಿರುದ್ಧವಾಗಿ ಮತ ಚಲಾಯಿಸಿದವು. ಈ ವೇಳೆ 12 ರಾಷ್ಟ್ರಗಳು ಗೈರು ಹಾಜರಾದವು. ಆ ಮೂಲಕ ನಿರ್ಣಯಕ್ಕೆ ಅಂಗೀಕಾರ ದೊರಕಿತು.

ಇದರಿಂದ ಭಾರತವು ಗಾಜಾ ವಿಚಾರದಲ್ಲಿ ತನ್ನ ಇತ್ತೀಚಿನ ನಿಲುವನ್ನು ಬದಲಿಸಿದೆ. ಕಳೆದ ಮೂರು ವರ್ಷಗಳಲ್ಲಿ ಭಾರತವು ಯುದ್ಧ ವಿರಾಮಕ್ಕೆ ಕರೆ ನೀಡಿದ ವಿಶ್ವಸಂಸ್ಥೆಯ ನಾಲ್ಕು ನಿರ್ಣಯಗಳಿಂದ ದೂರವಿದ್ದು ಟೀಕೆಗೆ ಗುರಿಯಾಗಿತ್ತು. ಆದರೆ ಈಗ ಭಾರತದ ನಿಲುವು ಅಂತಾರಾಷ್ಟ್ರೀಯ ಸಮನ್ವಯಕ್ಕೆ ಹೊಂದಾಣಿಕೆಯಾಗಿದೆ.

ಏಳು ಪುಟಗಳ ನ್ಯೂಯಾರ್ಕ್ ಘೋಷಣೆಯಲ್ಲಿ, ಗಾಜಾದ ಯುದ್ಧ ಕೊನೆಗೊಳಿಸಿ, ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಸಂಘರ್ಷಕ್ಕೆ ಶಾಶ್ವತ ಹಾಗೂ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ನಿರ್ಣಯವು ಅಕ್ಟೋಬರ್ 7 ರಂದು ಹಮಾಸ್ ಇಸ್ರೇಲ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿದೆ. ಇಸ್ರೇಲ್ ನಡೆಸಿದ ಪ್ರತೀಕಾರಾತ್ಮಕ ದಾಳಿಗಳಿಂದ ಗಾಜಾದಲ್ಲಿ ಉಂಟಾದ ನಾಗರಿಕರ ಸಾವು, ಮೂಲಸೌಕರ್ಯ ಹಾನಿ ಮತ್ತು ಮಾನವೀಯ ಬಿಕ್ಕಟ್ಟನ್ನು ಟೀಕಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮು ರಾಜಕಾರಣ: ಒಡೆದ ಮನೆಯಲ್ಲಿ ಹಿಂದುತ್ವಕ್ಕೆ ಒಡೆಯನಾರು?

ವಸಾಹತು, ಭೂ ಕಬಳಿಕೆ ಮತ್ತು ಹಿಂಸಾಚಾರವನ್ನು ಇಸ್ರೇಲ್ ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದೆ.

ಗಾಜಾವು ಪ್ಯಾಲೆಸ್ತೀನ್‌ನ ಅವಿಭಾಜ್ಯ ಅಂಗವಾಗಿದ್ದು, ಪಶ್ಚಿಮ ದಂಡೆಯೊಂದಿಗೆ ಏಕೀಕರಿಸಬೇಕೆಂದು ಘೋಷಣೆಯಲ್ಲಿ ತಿಳಿಸಲಾಗಿದೆ.

ವಿಶ್ವಸಂಸ್ಥೆಯು ಅಂಗೀಕರಿಸಿರುವ ಈ ನಿರ್ಣಯವನ್ನು ಇಸ್ರೇಲ್ ತಿರಸ್ಕರಿಸಿದೆ. “ಇದು ಹಮಾಸ್ ಬಗ್ಗೆ ಉಲ್ಲೇಖವಿಲ್ಲದ ರಾಜಕೀಯ ಸರ್ಕಸ್” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ವಕ್ತಾರ ಓರೆನ್ ಮಾರ್ಮೊರ್‌ಸ್ಟೈನ್ ಹೇಳಿದ್ದಾರೆ.

ಅಮೆರಿಕ ಕೂಡ ನಿರ್ಣಯದ ವಿರುದ್ಧವಾಗಿ ನಿಂತು, ಇದನ್ನು “ಹಮಾಸ್‌ಗೆ ನೀಡಿದ ಉಡುಗೊರೆ” ಎಂದು ಕರೆದಿದೆ.
ಅಕ್ಟೋಬರ್ 7, 2023ರ ಹಮಾಸ್ ಇಸ್ರೇಲ್ ಮೇಲೆ ನಡೆಸಿದ ದಾಳಿಯಲ್ಲಿ 1,200ಕ್ಕೂ ಹೆಚ್ಚಿನ ನಾಗರಿಕರು ಸಾವನ್ನಪ್ಪಿದ್ದರು. 250 ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಒತ್ತೆಯಾಳಾಗಿರಿಸಿಕೊಂಡಿತ್ತು. ನಂತರ ಇಸ್ರೇಲ್ ಪ್ಯಾಲೆಸ್ತೀನ್ ಮೇಲೆ ನಡೆಸಿದ ದಾಳಿಗಳಲ್ಲಿ ಗಾಜಾದಲ್ಲಿ 64,000 ಕ್ಕೂ ಹೆಚ್ಚು ಮಂದಿ ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ಈ ಹೊಸ ನಿಲುವು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಪ್ರಯತ್ನಗಳಿಗೆ ಮಹತ್ವದ ಬೆಂಬಲವೆಂದು ಪರಿಗಣಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X