ಭಾರತೀಯ ದಂಪತಿ, 3 ವರ್ಷದ ಮಗು ಲಿಬಿಯಾದಲ್ಲಿ ಅಪಹರಣ: 1 ಕೋಟಿ ರೂ.ಗೆ ಬೇಡಿಕೆ

Date:

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ದಂಪತಿ ಮತ್ತು ಅವರ ಮೂರು ವರ್ಷದ ಮಗಳು ಲಿಬಿಯಾದಲ್ಲಿ ಅಪಹರಣಕ್ಕೆ ಒಳಗಾಗಿದ್ದು, ಅಪಹರಣಕಾರರು 1 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾರೆ. ಕುಟುಂಬವು ತಮ್ಮನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವಂತೆ ಭಾರತೀಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

- Advertisement -

ಆನಂದ್ ಜಿಲ್ಲೆಯ ಕರಮ್ಸದ್ ಮೂಲದ ಏಜೆಂಟ್ ಮೂಲಕ ಮಾನ್ಯ ವೀಸಾಗಳಿಲ್ಲದೆ ದಂಪತಿಗಳು ಪೋರ್ಚುಗಲ್‌ನಲ್ಲಿ ನೆಲೆಸಲು ಪ್ರಯತ್ನಿಸುತ್ತಿದ್ದರು. ಅದಕ್ಕಾಗಿ ಆರಂಭದಲ್ಲಿ ದುಬೈಗೆ ಹೋಗಿದ್ದು, ಅಲ್ಲಿಂದ ಏಜೆಂಟರು ಅವರನ್ನು ಲಿಬಿಯಾಕ್ಕೆ ಕಳುಹಿಸಿದ್ದಾರೆ. ಅಲ್ಲಿ ಅಪಹರಣಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

ಇನ್ನು ಗುಜರಾತಿ ಕುಟುಂಬವನ್ನು ರಕ್ಷಿಸಲು ಸರ್ಕಾರದ ಹಸ್ತಕ್ಷೇಪವನ್ನು ಕೋರಿ ರಾಜ್ಯಸಭಾ ಸಂಸದ ಮಾಯಾಂಕ್ ನಾಯಕ್ ಅವರು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಮೆಹ್ಸಾನಾ ಜಿಲ್ಲಾ ಅಧಿಕಾರಿಗಳೂ ತಕ್ಷಣ ಮಧ್ಯಪ್ರವೇಶಿಸುವಂತೆ ಕೋರಿ ಪತ್ರ ಬರೆದಿದ್ದಾರೆ.

ಬಾದಲ್‌ಪುರ ನಿವಾಸಿಗಳಾದ ಕಿಸ್ಮತ್ ಚಾವ್ಡಾ, ಅವರ ಪತ್ನಿ ಹಿನಾ ಮತ್ತು ಅವರ ಮೂರು ವರ್ಷದ ಮಗಳು ನವೆಂಬರ್ 29ರಂದು ದುಬೈಗೆ ತೆರಳಿದ್ದು, ಹರ್ಷಿತ್ ಕೆ ಮೆಹ್ತಾ ಎಂದು ಗುರುತಿಸಲ್ಪಟ್ಟ ಅವರ ಪ್ರಯಾಣ ಏಜೆಂಟ್ ಅವರನ್ನು ಪೋರ್ಚುಗಲ್‌ಗೆ ಕಳುಹಿಸುವುದಾಗಿ ಭರವಸೆ ನೀಡಿದ್ದ. ಆದರೆ ದುಬೈ ತಲುಪಿದ ನಂತರ, ಅವರಿಗೆ ತಿಳಿಯದೆಯೇ ಅವರನ್ನು ಲಿಬಿಯಾಕ್ಕೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 4ರಂದು ಅವರನ್ನು ಬಿಡುಗಡೆ ಮಾಡಬೇಕಾದರೆ ಹಣ ನೀಡಬೇಕು ಎಂದು ಈ ದಂಪತಿಯ ಭಾರತದಲ್ಲಿರುವ ಕುಟುಂಬಕ್ಕೆ ಬೆದರಿಕೆ ಕರೆಗಳು ಬಂದಿವೆ.

ಇನ್ನು ಅಕ್ಟೋಬರ್ ಆರಂಭದಲ್ಲಿ, ಅಕ್ರಮವಾಗಿ ಆಸ್ಟ್ರೇಲಿಯಾಕ್ಕೆ ಹೋಗುತ್ತಿದ್ದ ನಾಲ್ವರು ಗುಜರಾತಿಗಳನ್ನು ಇರಾನ್‌ನಲ್ಲಿ ಅಪಹರಿಸಲಾಗಿತ್ತು. ಅವರ ಬಿಡುಗಡೆಗಾಗಿ 2 ಕೋಟಿ ರೂ. ಬೇಡಿಕೆ ಮುಂದಿಡಲಾಗಿತ್ತು. ಕೇಂದ್ರ ಸರ್ಕಾರದ ಹಸ್ತಕ್ಷೇಪದ ನಂತರ ಅವರು ಸುರಕ್ಷಿತವಾಗಿ ಮರಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ...

ಗುಜರಾತ್ ಗಲಭೆಯಲ್ಲಿ ಮೋದಿ ದೋಷಮುಕ್ತರಾದ ಬಗ್ಗೆ ರಶ್ದಿ ಪ್ರಶ್ನೆ; ಅಮೆರಿಕದಲ್ಲಿ ಆರ್.ಎಸ್.ಎಸ್ ಪ್ರಭಾವಕ್ಕೆ ಕಳವಳ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...