ಓಮನ್ ಕರಾವಳಿಯಲ್ಲಿ ತೈಲ ಹಡಗಿಗೆ ಡಿಕ್ಕಿ ಹೊಡೆದ ಡ್ರೋನ್ ಬೋಟ್: ಓರ್ವ ಭಾರತೀಯನ ಸಾವು

Date:

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಓಮನ್ ಕರಾವಳಿಯಲ್ಲಿ ಮಾನವರಹಿತ ಡ್ರೋನ್ ಬೋಟ್ ಒಂದು ತೈಲ ಹಡಗಿಗೆ ಡಿಕ್ಕಿ ಹೊಡೆದ ಪರಿಣಾಮ ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಹಡಗಿನಲ್ಲಿದ್ದ ಇತರ ಎಲ್ಲಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಖಚಿತಪಡಿಸಿದ್ದಾರೆ.

- Advertisement -

​ಮಾರ್ಚ್ 1ರ ಶನಿವಾರ ಮಸ್ಕತ್ ಗವರ್ನರೇಟ್‌ನ ಪೋರ್ಟ್ ಸುಲ್ತಾನ್ ಖಬೂಸ್‌ನಿಂದ ವಾಯುವ್ಯಕ್ಕೆ 52 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ ಎಂದು ಓಮನ್‌ನ ಕಡಲ ಭದ್ರತಾ ಕೇಂದ್ರ ತಿಳಿಸಿದೆ. ದಾಳಿಗೊಳಗಾದ ಹಡಗನ್ನು ‘ಎಂಕೆಡಿ ವ್ಯೋಮ್’ ಎಂದು ಗುರುತಿಸಲಾಗಿದ್ದು, ಇದು ರಿಪಬ್ಲಿಕ್ ಆಫ್ ಮಾರ್ಷಲ್ ಐಲ್ಯಾಂಡ್ಸ್‌ನ ಧ್ವಜದಡಿ ಸಂಚರಿಸುತ್ತಿತ್ತು. ದಾಳಿಯ ವೇಳೆ ಹಡಗಿನಲ್ಲಿ ಸುಮಾರು 59,463 ಮೆಟ್ರಿಕ್ ಟನ್ ಸರಕು ಇತ್ತು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

​ಅಧಿಕಾರಿಗಳ ಮಾಹಿತಿಯ ಪ್ರಕಾರ, ಮಾನವರಹಿತ ಡ್ರೋನ್ ಬೋಟ್ ಹಡಗಿಗೆ ಡಿಕ್ಕಿ ಹೊಡೆದ ತಕ್ಷಣವೇ ಮುಖ್ಯ ಎಂಜಿನ್ ಕೋಣೆಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ. ಈ ದುರ್ಘಟನೆಯಲ್ಲಿ ಭಾರತೀಯ ಮೂಲದ ಓರ್ವ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ.

​ಹಡಗಿನಲ್ಲಿ ಒಟ್ಟು 21 ಸಿಬ್ಬಂದಿಯಿದ್ದರು. ಅವರಲ್ಲಿ 16 ಮಂದಿ ಭಾರತೀಯರು, ನಾಲ್ವರು ಬಾಂಗ್ಲಾದೇಶೀಯರು ಮತ್ತು ಓರ್ವ ಉಕ್ರೇನ್ ಪ್ರಜೆ ಸೇರಿದ್ದಾರೆ. ಪ್ರಾಣಾಪಾಯದಿಂದ ಪಾರಾದ ಎಲ್ಲರನ್ನೂ ಕಡಲ ಭದ್ರತಾ ಕೇಂದ್ರದ ಸಮನ್ವಯದೊಂದಿಗೆ ಪನಾಮ ಧ್ವಜದಡಿ ಸಂಚರಿಸುವ ‘ಎಂವಿ ಸ್ಯಾಂಡ್’ ಎಂಬ ವಾಣಿಜ್ಯ ಹಡಗಿನ ಮೂಲಕ ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

​ಹಾನಿಗೊಳಗಾದ ತೈಲ ಹಡಗಿನ ಮೇಲ್ವಿಚಾರಣೆಗಾಗಿ ಓಮನ್‌ನ ರಾಯಲ್ ನೇವಿ ತನ್ನ ನೌಕೆಯನ್ನು ನಿಯೋಜಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಇತರ ಹಡಗುಗಳಿಗೆ ಎಚ್ಚರಿಕೆ ಸಂದೇಶಗಳನ್ನು ರವಾನಿಸುತ್ತಿದೆ. ಆದರೆ, ಈ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ.

​ಇಸ್ಲಾಮಿಕ್ ರಿಪಬ್ಲಿಕ್ (ಇರಾನ್) ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭಾರೀ ವೈಮಾನಿಕ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ದಟ್ಟವಾಗಿದೆ. ಇದರ ಬೆನ್ನಲ್ಲೇ, ಪರ್ಷಿಯನ್ ಕೊಲ್ಲಿಯ ಕಿರಿದಾದ ಪ್ರವೇಶ ದ್ವಾರವಾದ ಹಾರ್ಮುಜ್ ಜಲಸಂಧಿಯನ್ನು ಸಮೀಪಿಸುವ ಹಡಗುಗಳಿಗೆ ಇರಾನ್ ಎಚ್ಚರಿಕೆ ನೀಡಿದ್ದು, ಇತ್ತೀಚಿನ ಕಡಲ ದಾಳಿಗಳ ಹಿಂದೆ ಇರಾನ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

​ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಮಧ್ಯಪ್ರಾಚ್ಯದಾದ್ಯಂತ ಉದ್ವಿಗ್ನತೆ ಭುಗಿಲೆದ್ದಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ಎರಡನೇ ದಾಳಿ ಇದಾಗಿದೆ.

​ಇದಕ್ಕೂ ಮುನ್ನ, 15 ಮಂದಿ ಭಾರತೀಯ ಸಿಬ್ಬಂದಿಯನ್ನು ಒಳಗೊಂಡಿದ್ದ ಪಲಾವು ದೇಶದ ಧ್ವಜ ಹೊಂದಿದ್ದ ‘ಸ್ಕೈಲೈಟ್’ ಎಂಬ ತೈಲ ಹಡಗಿನ ಮೇಲೆ ಓಮನ್‌ನ ಮುಸಂದಮ್ ಪರ್ಯಾಯ ದ್ವೀಪದ ಬಳಿ ದಾಳಿ ನಡೆಸಲಾಗಿತ್ತು. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದರು. ಮುಸಂದಮ್‌ನ ಖಸಬ್ ಬಂದರಿನಿಂದ ಉತ್ತರಕ್ಕೆ ಐದು ನಾಟಿಕಲ್ ಮೈಲಿ ದೂರದಲ್ಲಿ ಈ ದಾಳಿ ನಡೆದಿದ್ದು, ಹಡಗಿನಲ್ಲಿದ್ದ 20 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿತ್ತು ಎಂದು ಓಮನ್ ಕಡಲ ಭದ್ರತಾ ಕೇಂದ್ರ ‘ಎಕ್ಸ್’ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿತ್ತು. ಆದರೆ, ಆ ದಾಳಿಯಲ್ಲಿ ಬಳಸಲಾದ ಶಸ್ತ್ರಾಸ್ತ್ರದ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...