ಇಸ್ರೇಲ್-ಇರಾನ್ ಸಂಘರ್ಷ | ಇರಾನ್‌ನಲ್ಲಿರುವ ಭಾರತೀಯರಿಗೆ ತುರ್ತು ಸಂಪರ್ಕ ವಿವರ ಬಿಡುಗಡೆ ಮಾಡಿದ ರಾಯಭಾರ ಕಚೇರಿ

Date:

ಇಸ್ರೇಲ್-ಇರಾನ್ ಸಂಘರ್ಷ ಹೆಚ್ಚಾಗುತ್ತಿದ್ದಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಎಚ್ಚರದಿಂದಿರಲು ಭಾರತೀಯ ರಾಯಭಾರ ಕಚೇರಿ ಸೂಚಿಸಿದೆ. ಆದರೆ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇರಾನ್‌ನಲ್ಲಿರುವ ಭಾರತೀಯರು ಭಯಭೀತರಾಗಬೇಡಿ, ಸರಿಯಾದ ಎಚ್ಚರಿಕೆ ವಹಿಸಿ, ಟೆಹ್ರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಿ ಎಂದು ಭಾನುವಾರ ತಿಳಿಸಿದೆ.

- Advertisement -

ಭಾರತೀಯ ರಾಯಭಾರ ಕಚೇರಿಯು ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಭಾರತೀಯ ಮೂಲದವರು ಜಾಗರೂಕರಾಗಿರಲು, ಅನಗತ್ಯವಾಗಿ ಓಡಾಡದಿರಲು, ರಾಯಭಾರ ಕಚೇರಿಯ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಬರುವ ಎಲ್ಲಾ ಅಪ್‌ಡೇಟ್‌ಗಳನ್ನು ಗಮನಿಸುತ್ತಿರಲು, ಸ್ಥಳೀಯ ಅಧಿಕಾರಿಗಳು ಸೂಚಿಸಿದಂತೆ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಲು ಸಲಹೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಬೈರುತ್‌ನಲ್ಲಿ ಇಸ್ರೇಲ್ ದಾಳಿ ಬಳಿಕ ಇರಾನ್ ಕಮಾಂಡರ್ ನಾಪತ್ತೆ : ವರದಿ

ಈ ಬಗ್ಗೆ ರಾಯಭಾರ ಕಚೇರಿಯು ತನ್ನ ಎಕ್ಸ್‌ ಖಾತೆಯಲ್ಲಿ ಗೂಗಲ್ ಫಾರ್ಮ್ ಅನ್ನು ಒದಗಿಸಿದೆ. ಭಾರತೀಯ ನಾಗರಿಕರು ಅದನ್ನು ಭರ್ತಿ ಮಾಡಿ ತಮ್ಮ ವಿವರಗಳನ್ನು ಒದಗಿಸಬೇಕು ಎಂದು ಹೇಳಿದೆ. ಟೆಲಿಗ್ರಾಮ್ ಲಿಂಕ್ ಅನ್ನು ಸಹ ಒದಗಿಸಲಾಗಿದೆ. ” ದಯವಿಟ್ಟು ಗಮನಿಸಿ ಈ ಟೆಲಿಗ್ರಾಮ್ ಲಿಂಕ್ ಪ್ರಸ್ತುತ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮಾತ್ರ” ಎಂದೂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ತುರ್ತು ಸಂಪರ್ಕ ವಿವರಗಳನ್ನು ಸಹ ಒದಗಿಸಿದೆ.

ಸಂಪರ್ಕ ಸಂಖ್ಯೆಗಳು: ಕರೆಗೆ ಮಾತ್ರ: +98 9128109115, +98 9128109109
ವಾಟ್ಸಾಪ್ ಕರೆಗಾಗಿ: +98 901044557, +98 9015993320, +91 8086871709
ಬಂದರ್ ಅಬ್ಬಾಸ್: +98 9177699036 ಮತ್ತು ಜಹೇದನ್: +98 9396356649

ಇಸ್ರೇಲ್ ಶುಕ್ರವಾರ ಮುಂಜಾನೆ ಇರಾನ್‌ನ ಪರಮಾಣು, ಕ್ಷಿಪಣಿ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಇದಾದ ಬಳಿಕ ಇರಾನ್ ಇಸ್ರೇಲ್ ಮೇಲೆ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...