ದಕ್ಷಿಣ ಕರೋಲಿನಾ ಬೀಚ್‌ನಲ್ಲಿ ಮುಳುಗಿ ಭಾರತೀಯ ಸಾವು

Date:

ಬೀಚ್‌ನಲ್ಲಿ ಮುಳುಗಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿರುವ ಘಟನೆ ಅಮೆರಿಕದ ದಕ್ಷಿಣ ಕೆರೋಲಿನಾದಲ್ಲಿ ನಡೆದಿದೆ. ಜಾರ್ಜಿಯಾದ 49 ವರ್ಷದ ವ್ಯಕ್ತಿ ತನ್ನ ಪುತ್ರನೊಂದಿಗೆ ಹಿಲ್ಟನ್ ಹೆಡ್ ಐಲ್ಯಾಂಡ್‌ನ ಬ್ಯೂಫೋರ್ಟ್ ಕೌಂಟಿಯ ಬೀಚ್‌ಗೆ ತೆರಳಿದ್ದರು, ನೀರಿನ ಸುಳಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೃತ ಭಾರತೀಯ ವ್ಯಕ್ತಿಯನ್ನು ಸೌಮೆನ್ ಕುಂಡು ಎಂದು ಗುರುತಿಸಲಾಗಿದ್ದು, ಅವರು ಜಾರ್ಜಿಯಾದಲ್ಲಿ ವಾಸವಿದ್ದರು. ಅಟ್ಲಾಂಟಾದಲ್ಲಿರುವ ಭಾರತೀಯ ಕಾನ್ಸುಲೇಟ್ ಸೌಮೆನ್ ಕುಂಡು ಭಾರತೀಯ ಪ್ರಜೆ ಎಂದು ದೃಢಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಸುಡಾನ್‌ | ಸೇನೆ-ಅರೆಸೇನಾ ಪಡೆ ಸಂಘರ್ಷದಲ್ಲಿ ಭಾರತೀಯ ಮೂಲದ ವ್ಯಕ್ತಿ ಸಾವು

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾನ್ಸುಲೇಟ್, “ಹಿಲ್ಟನ್ ಹೆಡ್ ಐಲ್ಯಾಂಡ್ ಬಳಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ನಡೆದಿದ್ದು ನಾವು ತುಂಬಾ ದುಃಖಿತರಾಗಿದ್ದೇವೆ. ಕಾನ್ಸುಲೇಟ್ ಸ್ಥಳೀಯ ಅಧಿಕಾರಿಗಳು ಮತ್ತು ಇತರೆ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ. ಈ ಕಷ್ಟದ ಸಮಯದಲ್ಲಿ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ” ಎಂದು ಹೇಳಿದ್ದಾರೆ.

ತುರ್ತು ಕರೆ ಬಂದ ಬಳಿಕ ನಾವು ಸ್ಥಳಕ್ಕೆ ಧಾವಿಸಿದ್ದು, ಕುಂಡು ಮತ್ತು ಅವರ ಮಗ ನೀರಿನಲ್ಲಿ ಮುಳುಗಿದ್ದರು, ಸುಳಿಯಲ್ಲಿ ಸಿಲುಕಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. “ಜುಲೈ 24ರಂದು ಸಂಜೆ ಸುಮಾರು 7:51ಕ್ಕೆ ಸೀ ಪೈನ್ಸ್‌ನ ಸಮುದ್ರದಲ್ಲಿ ಮುಳುಗಿ ಕುಂಡು ಸ್ಥಳದಲ್ಲೇ ನಿಧನರಾದರು” ಎಂದು ಕರೋನರ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

“ಆರಂಭದಲ್ಲಿ ಸ್ಥಳೀಯರೂ ರಕ್ಷಿಸುವ ಯತ್ನ ಮಾಡಿದ್ದಾರೆ. ಬಳಿಕ ಹಿಲ್ಟನ್ ಹೆಡ್ ಐಲ್ಯಾಂಡ್ ಅಗ್ನಿಶಾಮಕ ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಆಗಮಿಸಿ ತಂದೆ, ಮಗ ಇಬ್ಬರನ್ನು ದಡಕ್ಕೆ ಕರೆತಂದಿದೆ. ಪ್ರಥಮ ಚಿಕಿತ್ಸೆ ನೀಡಲಾಗಿದ್ದು ಆದರೆ ಸೌಮೆನ್ ಕುಂಡು ಮೃತಪಟ್ಟಿದ್ದಾರೆ” ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...