ಕೆನಡಾ | ದ್ವೇಷಪ್ರೇರಿತ ದಾಳಿ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿ ಬಂಧನ; ಜಾಮೀನು

Date:

  • ಕೆನಡಾ ಮರ್ಕಮ್‌ ಮಸೀದಿಯಲ್ಲಿ ಘಟನೆ
  • ಬಂಧನದ ಬಳಿಕ ಆರೋಪಿಗೆ ಜಾಮೀನು

ಕಳೆದ ವಾರದ ಆರಂಭದಲ್ಲಿ ಕೆನಡಾ ಮರ್ಕಮ್‌ ಮಸೀದಿಯಲ್ಲಿ ಧಾರ್ಮಿಕ ನಿಂದನೆ ಹಾಗೂ ದ್ವೇಷಪ್ರೇರಿತ ದಾಳಿ ನಡೆಸಿದ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

- Advertisement -

ಪವಿತ್ರ ರಂಜಾನ್ ಮಾಸದ ಆಚರಣೆ ವೇಳೆ ಮುಸ್ಲಿಮರು ಮಸೀದಿಯಲ್ಲಿ ಜಮಾಯಿಸಿದ್ದಾಗ ಈ ಘಟನೆ ನಡೆದಿದೆ. ಹಲವು ಅಧಿಕಾರಿಗಳು ಘಟನೆಯನ್ನು ಖಂಡಿಸಿದ್ದಾರೆ. ಇದು ಇಸ್ಲಾಮೋಫೋಬಿಯಾ ಹಾಗೂ ಉದ್ದೇಶಪೂರಿತ ದ್ವೇಷಪ್ರೇರಿತ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಒಂಟಾರಿಯೊದ ಮಾರ್ಕಮ್‌ ನಗರದ ಇಸ್ಲಾಮಿಕ್ ಸೊಸೈಟಿ ಆಫ್ ಮಾರ್ಕಮ್‌ ಮಸೀದಿಯ ನಿಲುಗಡೆ ಸ್ಥಳದಲ್ಲಿ ಈ ಘಟನೆ ನಡೆದಿದೆ. ಭಾರತೀಯ ಮೂಲದ ಶರಣ್ ಕರುಣಾಕರನ್‌ (28) ಬಂಧಿತ ಆರೋಪಿ.

ಏಪ್ರಿಲ್ 7ರಂದು ಈತನನ್ನು ಟೊರೊಂಟೊದಲ್ಲಿ ಬಂಧಿಸಲಾಗಿತ್ತು. ಪ್ರಸ್ತುತ ಈತ ಜಾಮೀನು ಪಡೆದಿದ್ದಾನೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6.55ಕ್ಕೆ ಘಟನೆ ಕುರಿತು ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ”ಕೆನಡಾ ಮಾರ್ಕಮ್‌ ನಗರದ ಮಸೀದಿಯಲ್ಲಿ ನಡೆದ ದ್ವೇಷಪ್ರೇರಿತ ದಾಳಿ ಹಾಗೂ ಧರ್ಮ ನಿಂದನೆ ಘಟನೆಯ ನಂತರ ಆರೋಪಿ ವಿರುದ್ಧ ಹಲವಾರು ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ಯಾರ್ಕ್ ಪ್ರಾದೇಶಿಕ ಪೊಲೀಸರು ಹೇಳಿದ್ದಾರೆ.

“ಶಂಕಿತ ವ್ಯಕ್ತಿಯು ಮಸೀದಿಯಲ್ಲಿದ್ದ ಭಕ್ತರೊಬ್ಬರ ಬಳಿ ನೇರವಾಗಿ ತೆರಳಿ ಅವರಿಗೆ ಬೆದರಿಕೆ ಹಾಕಿ, ಧಾರ್ಮಿಕ ನಿಂದನೆ ಮಾಡಿದ್ದಾನೆ ಎಂದು ಸಾಕ್ಷ್ಯಗಳು ಹೇಳಿವೆ” ಎಂದು ಪೊಲೀಸರು ಮಾಹಿತಿ ನೀಡಿದರು.

ಕೆನಡಾ ಮುಸ್ಲಿಮರ ರಾಷ್ಟ್ರೀಯ ಮಂಡಳಿ (ಎನ್‌ಸಿಸಿಎಂ) ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಇದನ್ನು ‘ಅತ್ಯಂತ ವಿಷಾದನೀಯ’ ಎಂದು ಬಣ್ಣಿಸಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಭಾರೀ ಮಳೆ, ಬಿರುಗಾಳಿಗೆ ಧರೆಗುರುಳಿದ ಶತಮಾನದ ಹಳೆಯ ಮರ; 7 ಮಂದಿ ಸಾವು

“ಶಂಕಿತ ಆರೋಪಿಯು ಮಸೀದಿ ಪ್ರವೇಶಿಸಿ ಪವಿತ್ರ ಗ್ರಂಥ ಕುರಾನ್‌ನ ಒಂದು ಪ್ರತಿ ಹರಿದು ಭಕ್ತರ ಮೇಲೆ ದಾಂಧಲೆ ನಡೆಸಿದ. ಇದು ಇಸ್ಲಾಮೋಫೋಬಿಯಾದ ಸಂಕೇತ” ಎಂದು ಎನ್‌ಸಿಸಿಎಂ ಟ್ವೀಟ್‌ನಲ್ಲಿ ಕಿಡಿಕಾರಿದೆ.

ಈ ರೀತಿಯ ದ್ವೇಷಪೂರಿತ ದಾಳಿ ಎದುರಿಸಿ ಹಿಂದೆ ಲಂಡನ್‌ ಮೂಲದ ಕುಟುಂಬವೊಂದು ಬಲಿಯಾಗಿದೆ ಎಂದು ಎನ್‌ಸಿಸಿಎಂ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...