ಟಿಕ್‌ಟಾಕ್‌ನಲ್ಲಿ ಜನಾಂಗೀಯ ನಿಂದನೆ: ಭಾರತೀಯ ಮೂಲದ ಸಿಂಗಾಪುರದ ಬ್ಲಾಗರ್‌ಗೆ ದಂಡ

Date:

ಸಿಂಗಾಪುರದ ವಿವಿಧ ಜನಾಂಗೀಯ ಗುಂಪುಗಳ ನಡುವೆ ಸಾಮರಸ್ಯ ಕದಡುವ ರೀತಿಯಲ್ಲಿ ಟಿಕ್‌ಟಾಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದ ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ ಬ್ಲಾಗರ್‌ಗೆ ದಂಡ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯವು ಭಾರತೀಯ ಮೂಲದ ಬ್ಲಾಗರ್ ಮನ್ಮೀತ್ ಸಿಂಗ್‌ ಎಂಬಾತನಿಗೆ SGD 6,000 (ಸುಮಾರು 4 ಲಕ್ಷ ರೂ.) ದಂಡ ವಿಧಿಸಿದೆ.

- Advertisement -

2024ರ ಆಗಸ್ಟ್‌ 12ರಂದು ಪೋಸ್ಟ್‌ ಮಾಡಿದ್ದ ಮನ್ಮೀತ್ ಸಿಂಗ್, ತಮ್ಮ ಪೋಸ್ಟ್‌ನಲ್ಲಿ, ‘ಮುಂಬರುವ ಸಿಂಗಾಪುರ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷವು ಭಾರತೀಯ ಮೂಲದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಸಿಂಗಾಪುರ ಪ್ರಧಾನಿ ವಾಂಗ್ ಹೇಳಿದ್ದಾರೆ’ ಎಂಬ ವಿಡಿಯೋವನ್ನು ಹಂಚಿಕೊಂಡಿದ್ದರು. ಜೊತೆಗೆ, ಸಿಂಗಾಪುರದ ಡಿಜಿಟಲ್ ಅಭಿವೃದ್ಧಿ ಮತ್ತು ಮಾಹಿತಿ ಸಚಿವೆ ಜೋಸೆಫೀನ್ ಟಿಯೊ ಅವರು ಸಿಂಗಾಪುರದಲ್ಲಿ ಒಟ್ಟು ಜನಸಂಖ್ಯೆಯ 15%ಗೂ (60 ಲಕ್ಷ) ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಸಮುದಾಯವಾದ ‘ಮಲಯನ್‌’ ಜನಾಂಗದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಸಿಂಗ್ ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿಂಗಾಪುರದಲ್ಲಿ ಕಳೆದ 59 ವರ್ಷಗಳಲ್ಲಾದ ಅಭಿವೃದ್ಧಿಯ ಕುರಿತು ಚೀನೀ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದ ಸಚಿವೆ ಟಿಯೋ (ಚೀನಾ ಮೂಲದವರು) ಅವರು ಮಲಯಾಳಂನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಸಿಂಗ್ ತಮ್ಮ ಪೋಸ್ಟ್‌ನಲ್ಲಿ ದೂರಿದ್ದರು.

ವಿಡಿಯೋವನ್ನು ಗಮನಿಸಿದ್ದ ಸಚಿವೆ ಟಿಯೊ ಅವರು ತನ್ನ ಪತ್ರಿಕಾ ಕಾರ್ಯದರ್ಶಿಗೆ ಈ ಬಗ್ಗೆ ಪರಿಶೀಲಿಸಲು ಸೂಚಿಸಿದ್ದರು. ಬಳಿಕ, ಈ ವಿಡಿಯೋವನ್ನು ಪತ್ರಿಕಾ ಕಾರ್ಯದರ್ಶಿ ಡೌನ್‌ಲೋಡ್‌ ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದರು. ನಂತರವಷ್ಟೇ, ಸಿಂಗ್ ಅವರು ತಮ್ಮ ವಿಡಿಯೋವನ್ನು ಡಿಲೀಟ್‌ ಮಾಡಿದ್ದರು. ಅಲ್ಲದೆ, ಈ ಬಗ್ಗೆ ಅಪರಿಚಿತ ವ್ಯಕ್ತಿಯಿಂದ ಮಾಹಿತಿ ಮತ್ತು ವಿಡಿಯೋ ಪಡೆದುಕೊಂಡಿದ್ದಾಗಿ ಸಿಂಗ್ ಹೇಳಿಕೊಂಡಿದ್ದರು.

ಬಳಿಕ, ಮತ್ತೊಂದು ವಿಡಿಯೋ ಹಂಚಿಕೊಂಡಿದ್ದ ಸಿಂಗ್, ಸಚಿವೆ ಟಿಯೊ ಅವರ ಬಳಿ ಕ್ಷಮೆಯಾಚಿಸಿದ್ದರು. ತಾನು ಹಿಂದಿನ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದ ಆರೋಪ ಮತ್ತು ಮಾಹಿತಿ ಬಹುಶಃ ಸುಳ್ಳಾಗಿರಬಹುದು ಎಂದು ಹೇಳಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 2025ರ ಫೆಬ್ರವರಿ 4ರಂದು ಸಿಂಗ್‌ ಅವರನ್ನು ಬಂಧಿಸಿದ್ದರು. ಮರುದಿನವೇ ಜಾಮೀನು ಪಡೆದು ಸಿಂಗ್ ಜೈಲಿನಿಂದ ಬಿಡುಗಡೆಯಾಗಿದ್ದರು.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುವ ವೇಳೆ ಸಿಂಗ್‌ ಪರವಾಗಿ ವಾದ ಮಂಡಿಸಿದ್ದ ವಕೀಲರು, “ಸಿಂಗ್ ಅವರು ತಮ್ಮ ತಪ್ಪಿನಿಂದ ನೊಂದಿದ್ದಾರೆ. ತಪ್ಪಿತಸ್ಥ ಭಾವನೆಯಿಂದ ಬಳಲುತ್ತಿದ್ದಾರೆ. ಅವರು ಲಾಭ ಅಥವಾ ಪ್ರಭಾವ ಬೆಳಸಿಕೊಳ್ಳುವ ಉದ್ದೇಶದಿಂದ ಸಾಮಾಜಿಕ ಜಾಲತಾಣವನ್ನು ಬಳಸುತ್ತಿಲ್ಲ. ಅವರು ಜಾಗೃತಿ ಮೂಡಿಸುವ ಪೋಸ್ಟ್‌ಗಳನ್ನು ಹೆಚ್ಚಾಗಿ ಹಂಚಿಕೊಳ್ಳುತ್ತಾರೆ. ಅಂತೆಯೇ, ಈ ವಿಡಿಯೋವನ್ನು ಹಂಚಿಕೊಂಡಿದ್ದರು. ಆದರೆ, ಅದು ನಕಲಿ ಎಂಬುದು ಗೊತ್ತಾದ ಬೆನ್ನಲ್ಲೇ, ಅದನ್ನು ಡಿಲೀಟ್‌ ಮಾಡಿದ್ದಾರೆ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ವಾದವನ್ನು ಆಲಿಸಿದ ನ್ಯಾಯಾಲಯವು ಸಿಂಗ್ ಅವರಿಗೆ ಸುಮಾರು 4 ಲಕ್ಷ ರೂ. ದಂಡವನ್ನು ವಿಧಿಸಿದೆ. ಆದಾಗ್ಯೂ, ಜನಾಂಗೀಯ ನಿಂದನೆಯಂತಹ ಪ್ರಕರಣಗಳಿಗೆ ಸಿಂಗಾಪುರದಲ್ಲಿ 3 ವರ್ಷ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...